ಜೂ.13ರಂದು ಕಾರ್ಗಿಲ್ ಹುಲಿ, ಸೇನಾ ಪದಕ ವಿಜೇತ ಕ್ಯಾ. ನವೀನ್ ನಾಗಪ್ಪ ಅಂಬಿಕಾ ಕಾಲೇಜು ಭೇಟಿ

Upayuktha
0

ಪುತ್ತೂರು: ಕಾರ್ಗಿಲ್ ಹೋರಾಟದಲ್ಲಿ ಅಪ್ರತಿಮ ಶೌರ್ಯಪ್ರದರ್ಶಿಸಿ ಪಾಕಿಸ್ಥಾನದ ಸೈನಿಕರನ್ನು ಹಿಮ್ಮೆಟ್ಟಿಸುವಲ್ಲಿ ತನ್ನ ಕೊಡುಗೆ ನೀಡಿರುವ, ಸೇನಾ ಪದಕ ವಿಜೇತ ಕ್ಯಾಪ್ಟನ್ ನವೀನ್ ನಾಗಪ್ಪ ಜೂನ್ 13ರಂದು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಲಿದ್ದಾರೆ. 


ಬಪ್ಪಳಿಗೆ ಹಾಗೂ ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯಗಳು ಹಾಗೂ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ವಿದ್ಯಾರ್ಥಿ ಸಂಘದ ಪದಗ್ರಹಣವನ್ನು ಅವರು ಬಪ್ಪಳಿಗೆಯ ಶ್ರೀ ಶಂಕರ ಸಭಾಭವನದಲ್ಲಿ ಬೆಳಗ್ಗೆ 11 ಗಂಟೆಗೆ ನೆರವೇರಿಸಿಕೊಡಲಿದ್ದಾರೆ ಹಾಗೂ ಸಶಸ್ತ್ರ ಪಡೆಗಳ ಬಣ್ಣದ ವಿದ್ಯಾರ್ಥಿ ಸಮವಸ್ತ್ರ ಅನಾವರಣಗೊಳಿಸಲಿದ್ದಾರೆ. 


ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯದರ್ಶಿ ರಾಜಶ್ರೀ ಎಸ್.ನಟ್ಟೋಜ, ಬಪ್ಪಳಿಗೆ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ಪ್ರಾಂಶುಪಾಲೆ ಮಾಲತಿ ಡಿ., ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಾಚಾರ್ಯ ಗಣೇಶ್ ಪ್ರಸಾದ್ ಡಿ.ಎಸ್, ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top