ಕಾಕೋಳು: ₹35 ಲಕ್ಷ ವೆಚ್ಚದ ಶಾಲಾ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ

Upayuktha
0

ಕಾಕೋಳಿನ ಪಿಎಂ ಶ್ರೀ ಸಂಯುಕ್ತ ಪ್ರೌಢಶಾಲೆಗೆ ಹೊಸ ಮೆರುಗು


ಬೆಂಗಳೂರು: ಯಲಹಂಕ ತಾಲೂಕಿನ ದೊಡ್ಡಬಳ್ಳಾಪುರ ರಸ್ತೆಯ ರಾಜಾನುಕುಂಟೆ ಸಮೀಪದ ಕಾಕೋಳಿನ  ಪಿಎಂ ಶ್ರೀ ಸಂಯುಕ್ತ ಪ್ರೌಢಶಾಲೆಯಲ್ಲಿ ಸುಮಾರು ₹35 ಲಕ್ಷ ವೆಚ್ಚದಲ್ಲಿ ನವೀಕರಿಸಲಾದ ಶಾಲಾ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳನ್ನು ಇಂದು ಐವ್ಯಾಲ್ಯೂ ಇನ್ಫೋಸೊಲ್ಯೂಷನ್ಸ್ ಲಿಮಿಟೆಡ್‌ನ ನಿರ್ದೇಶಕ ಹಾಗೂ ಸಹ-ಸಂಸ್ಥಾಪಕರಾದ ಶ್ರೀ ಕೃಷ್ಣರಾಜ್ ಶರ್ಮಾ ಉದ್ಘಾಟಿಸಿದರು.
ಪಾಂಚಜನ್ಯ ಪ್ರತಿಷ್ಠಾನದ ಪ್ರೇರಣೆ ಹಾಗೂ ಸಂಯೋಜನೆಯೊಂದಿಗೆ, ಐವ್ಯಾಲ್ಯೂ ಇನ್ಫೋಸೊಲ್ಯೂಷನ್ಸ್ ಸಂಸ್ಥೆಯ ಸಿಎಸ್‌ಆರ್ ಸಹಕಾರದ ನೆರವಿನಿಂದ ಕೈಗೊಳ್ಳಲಾದ ಈ ಯೋಜನೆಯಡಿ 15 ತರಗತಿ ಕೊಠಡಿಗಳ ನವೀಕರಣ ಸೇರಿದಂತೆ ಶಾಲಾ ಪರಿಸರದ ಸಮಗ್ರ ಅಭಿವೃದ್ಧಿ ಕಾರ್ಯಗಳನ್ನು ಪೂರ್ಣಗೊಳಿಸಲಾಗಿದೆ. ಸುಮಾರು 400 ವಿದ್ಯಾರ್ಥಿಗಳಿಗೆ ಗುಣಮಟ್ಟದ ಹಾಗೂ ಆಕರ್ಷಕ ಕಲಿಕಾ ವಾತಾವರಣವನ್ನು ಒದಗಿಸುವ ಉದ್ದೇಶದಿಂದ ಯೋಜನೆ ಜಾರಿಗೊಂಡಿದೆ.


ಪಾಂಚಜನ್ಯ ಪ್ರತಿಷ್ಠಾನದ  ಸಂಸ್ಥಾಪಕ ಟ್ರಸ್ಟಿ ಶ್ರೀ ಮುರಳಿ ಕಾಕೋಳು ಮಾತನಾಡಿ, ಸಮುದಾಯ, ಶಿಕ್ಷಣ ಸಂಸ್ಥೆಗಳು ಹಾಗೂ ಕಾರ್ಪೊರೇಟ್ ಸಂಸ್ಥೆಗಳ ಸಹಭಾಗಿತ್ವದಿಂದ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಶಾಶ್ವತ ಬದಲಾವಣೆ ತರಬಹುದು ಎಂದು ತಿಳಿಸಿದರು. ಬೇಸಿಗೆ ರಜೆಯ ಅವಧಿಯಲ್ಲಿ ಯಾವುದೇ ಶೈಕ್ಷಣಿಕ ಚಟುವಟಿಕೆಗೆ ತೊಂದರೆಯಾಗದಂತೆ ಕಾಮಗಾರಿಯನ್ನು ಪೂರ್ಣಗೊಳಿಸಿರುವುದು ವಿಶೇಷವಾಗಿದೆ ಎಂದು ಹೇಳಿದರು.

ಮುಖ್ಯ ಅತಿಥಿ ಶ್ರೀ ಕೃಷ್ಣರಾಜ್ ಶರ್ಮಾ ಶಿಕ್ಷಣ ಮೂಲಸೌಕರ್ಯದಲ್ಲಿ ಹೂಡಿಕೆ ಮಾಡುವುದು ಭವಿಷ್ಯದ ಪೀಳಿಗೆಯ ಅಭಿವೃದ್ಧಿಗೆ ನೆರವಾಗುತ್ತದೆ ಎಂದು ಅಭಿಪ್ರಾಯಪಟ್ಟರೆ, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಶೈಲಾ ಉತ್ತಮ ಮೂಲಸೌಕರ್ಯವು ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಮತ್ತು ಹಾಜರಾತಿಯನ್ನು ಹೆಚ್ಚಿಸುತ್ತದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಶ್ರೀ ವಿಜೇತ್ ಆರ್. ಅಧ್ಯಕ್ಷತೆ ವಹಿಸಿದ್ದರು. ಶಾಲೆಯ ಮುಖ್ಯ ಶಿಕ್ಷಕ ಶ್ರೀ ದೀಕ್ಷಿತ್ ಕುಮಾರ್ ಹಾಗೂ ಹಿರಿಯ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಅನುರಾಧಾದೇವಿ ಯೋಜನೆಗೆ ಸಹಕಾರ ನೀಡಿದ ,ಐವ್ಯಾಲ್ಯೂ ಇನ್ಫೋಸೊಲ್ಯೂಷನ್ಸ್ ಸಂಸ್ಥೆ ,  ಪಾಂಚಜನ್ಯ ಪ್ರತಿಷ್ಠಾನದ  ಕಾರ್ಯಕರ್ತರು  ಮತ್ತು ಎಸ್‌ಡಿಎಂಸಿ ಸದಸ್ಯರು  ಶ್ರಮಿಸಿದ್ದು, ಸಮುದಾಯ–ಸಂಸ್ಥೆಗಳ ಸಹಭಾಗಿತ್ವದಿಂದ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಇದು ಮಾದರಿ ಯೋಜನೆಯಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು .

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top