ಬ್ಯಾಂಕ್ ಆಫ್ ಬರೋಡಾ ಕಲಬುರಗಿ ಪ್ರಾದೇಶಿಕ ಕಚೇರಿ ನೂತನ ಮುಖ್ಯಸ್ಥ ಅಮಿತ್ ಶೆಟ್ಟಿಗೆ ಅಭಿನಂದನೆ

Upayuktha
0


ಕಲಬುರಗಿ: ಬ್ಯಾಂಕ್ ಆಫ್ ಬರೋಡಾದ ಕಲಬುರಗಿ ಪ್ರಾದೇಶಿಕ ಕಚೇರಿಯ ನೂತನ ಮುಖ್ಯಸ್ಥರಾಗಿ ಇತ್ತೀಚೆಗೆ ಅಧಿಕಾರ ವಹಿಸಿದ ಸಹಾಯಕ ಜನರಲ್ ಮ್ಯಾನೇಜರ್ (ಎಜಿಎಂ) ಅಮಿತ್ ಸಿ ಶೆಟ್ಟಿ ಅವರಿಗೆ ಕಲಬುರಗಿ ಜಿಲ್ಲಾ ಹೋಟೆಲ್ ಅಸೋಸಿಯೇಷನ್ ವತಿಯಿಂದ ಹಾರ್ದಿಕವಾಗಿ ಸ್ವಾಗತಿಸಿ ಅಭಿನಂದಿಸಲಾಯಿತು.


ಕಲಬುರಗಿಯ ಬ್ಯಾಂಕ್ ಆಫ್ ಬರೋಡಾದ ಪ್ರಾದೇಶಿಕ ಕಚೇರಿಯಲ್ಲಿ ಜೂನ್ 6ರಂದು ಹೋಟೆಲ್ ಅಸೋಸಿಯೇಷನ್ ನೇತೃತ್ವದಲ್ಲಿ ಭೇಟಿ ಮಾಡಿ ಅಭಿನಂದಿಸಿ ಸನ್ಮಾನಿಸಲಾಯಿತು. ಕಲ್ಯಾಣ ಕರ್ನಾಟಕದ ಕಲಬುರಗಿ, ಯಾದಗಿರಿ, ಕೊಪ್ಪಳ, ಬೀದರ, ರಾಯಚೂರು, ವಿಜಯಪುರ ಮತ್ತು ಬಾಗಲಕೋಟೆ ಸೇರಿದಂತೆ ಏಳು ಜಿಲ್ಲೆಗಳ ವ್ಯಾಪ್ತಿಯನ್ನು ಒಳಗೊಂಡು ಒಟ್ಟು 53 ಶಾಖೆಗಳನ್ನು ಹೊಂದಿದೆ. ಪ್ರಾದೇಶಿಕ ಕಚೇರಿಯ ನೂತನ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸಿದ ಅಮಿತ್ ಶೆಟ್ಟಿ ಅವರು ಈ ಹಿಂದೆ ಮುಂಬೈ ಮೆಟ್ರೋ ಉತ್ತರ ಮತ್ತು ಪಶ್ಚಿಮ ಪ್ರಾದೇಶಿಕ ಕಚೇರಿಗಳ ಉಪ ಪ್ರಾದೇಶಿಕ ಮುಖ್ಯಸ್ಥರಾಗಿ ಕೂಡ ಸೇವೆ ಸಲ್ಲಿಸಿದ್ದರು.


ಬ್ಯಾಂಕಿಂಗ್ ಕ್ಷೇತ್ರದಲ್ಲಿ 18 ವರ್ಷಗಳ ಅನುಭವ ಹೊಂದಿದ ಅವರು ಶಾಖಾ ಬ್ಯಾಂಕಿಂಗ್, ಚಿಲ್ಲರೆ ಸಾಲ, ಕೃಷಿ ಸಾಲ, ಎಂಎಸ್ಎಂಇ ಸಾಲ ಮೇಲ್ವಿಚಾರಣೆ ವಸು ಲಾತಿ ಮತ್ತು ಗ್ರಾಹಕ ಸೇವೆ ಹೀಗೆ ವಿವಿಧ ಕ್ಷೇತ್ರಗಳಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊಲ್ಲೂರು ಸಮೀಪದ ವಂಡ್ಸೆ ಗ್ರಾಮದ ಅಮಿತ್ ಶೆಟ್ಟಿ ಅವರ ಕಲಬುರಗಿಯ ಸೇವೆ  ಗ್ರಾಹಕ ಸ್ನೇಹಿಯಾಗಿ ಈ ಭಾಗದ ಉದ್ಯಮ,ಕೈಗಾರಿಕೆ, ಕೃಷಿ  ಅಭಿವೃದ್ಧಿಗೆ ಹೆಚ್ಚಿನ ನೆರವು ಸಿಗಲಿ ಎಂದು ಆಕಾಶವಾಣಿ ಕಾರ್ಯಕ್ರಮ ಮುಖ್ಯಸ್ಥರಾದ ಡಾ. ಸದಾನಂದ ಪೆರ್ಲ ಸನ್ಮಾನ ನೆರವೇರಿಸಿ ಶುಭಾಶಯ ಕೋರಿದರು.


ಬ್ಯಾಂಕ್ ಆಫ್ ಬರೋಡಾ ಇದರಿಂದ ಉದ್ಯಮಿಗಳಿಗೆ ಹೋಟೆಲ್ ಉದ್ಯಮಕ್ಕೆ ಅದರಲ್ಲೂ ಮುಖ್ಯವಾಗಿ ಸಣ್ಣ ಉದ್ಯಮಿಗಳಿಗೆ ಹೆಚ್ಚಿನ ಆರ್ಥಿಕ ನೆರವು ಸಿಗುವಂತೆ ಕಾರ್ಯೋನ್ಮುಖ ರಾಗುವಂತೆ ಕಲಬುರಗಿ ಜಿಲ್ಲಾ ಹೋಟೆಲ್ ಅಸೋಸಿಯೇಷನ್ ಅಧ್ಯಕ್ಷರಾದ ನರಸಿಂಹ ಮೆಂಡನ್ ಈ ಸಂದರ್ಭದಲ್ಲಿ ಶುಭ ಹಾರೈಸಿದರು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉತ್ತಮ ಕೆಲಸ ಮಾಡಿ ಅನೇಕ ಪ್ರಶಸ್ತಿ ಮತ್ತು ಸಾಧನೆಗಳಿಗೆ ಕಾರಣರಾದ ಶೆಟ್ಟಿಯವರು ಕಲ್ಯಾಣ ಕರ್ನಾಟಕಕ್ಕೂ ಹೆಚ್ಚಿನ ಕೊಡುಗೆ ನೀಡುವಂತಾಗಲಿ ಎಂದು ಹೋಟೆಲ್ ಅಸೋಸಿಯೇಷನ್ ಸದಸ್ಯರಾದ ಸುನಿಲ್ ಶೆಟ್ಟಿ ಅಭಿಪ್ರಾಯ ಪಟ್ಟರು.

ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top