ಅಂತರ ವೈದ್ಯಕೀಯ ಕಾಲೇಜು ವೈದ್ಯಕೀಯ ರಸ ಪ್ರಶ್ನೆ ಸ್ಪರ್ಧಾ ಕೂಟ
ಮಂಗಳೂರು, ಜೂನ್ 22: ನಗರದ ಕಣಚೂರು ವೈದ್ಯಕೀಯ ಶಿಕ್ಷಣ ಮಹಾವಿದ್ಯಾಲಯದ ವೈದ್ಯಕೀಯ ಶಾಸ್ತç ವಿಭಾಗದ ಆಶ್ರಯದಲ್ಲಿ ಸ್ನಾತಕೋತ್ತರ ವೈದ್ಯಕೀಯ ಶಾಸ್ತ್ರ ಶಿಕ್ಷಣ ವಿದ್ಯಾರ್ಥಿಗಳಿಗಾಗಿ 5ನೇ ವಾರ್ಷಿಕ ರಾಜ್ಯ ಮಟ್ಟದ ಅಂತರ ವೈದ್ಯಕೀಯ ಕಾಲೇಜು ವೈದ್ಯಕೀಯ ರಸ ಪ್ರಶ್ನೆ “ಕಿಮ್ಸ್ ಪಿ.ಜಿ. ಮೆಡಿಕ್ವಿಜ್ – 2025” ಸ್ಪರ್ಧಾಕೂಟವನ್ನು ಶನಿವಾರ ತಾ: 27.06.2026 ರಂದು ಬೆ. 10.00 ಗಂಟೆಗೆ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಕರ್ನಾಟಕ ರಾಜ್ಯದಲ್ಲಿ ಕಾರ್ಯಾಚರಿಸುತ್ತಿರುವ ವೈದ್ಯಕೀಯ ಶಿಕ್ಷಣ ಮಹಾ ವಿದ್ಯಾಲಯದ ಪ್ರಾಂಶುಪಾಲರು ತಮ್ಮ ಕಾಲೇಜಿನ ವೈದ್ಯಕೀಯ ಶಾಸ್ತç ವಿಭಾಗದ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳನ್ನು ಒಳಗೊಂಡ ತಂಡದ ಹೆಸರುಗಳನ್ನು ಸ್ಪರ್ದಾಕೂಟದಲ್ಲಿ ಭಾಗವಹಿಸಲು ನೋಂದಾಯಿಸಬಹುದು. ಈ ಸ್ಪರ್ಧಾ ಕೂಟವು ಕೇವಲ ಆಂತರಿಕ ವೈದ್ಯಕೀಯ ಶಾಸ್ತ್ರ ವಿಷಯದ ಬಗ್ಗೆ ಸೀಮಿತಗೊಂಡಿದೆ.
ಕಣಚೂರು ವೈದ್ಯಕೀಯ ಶಿಕ್ಷಣ ಸಸ್ಥೆಯ ಅದ್ಯಕ್ಷರಾದ ಡಾ. ಹಾಜಿ ಯು.ಕೆ. ಮೋನು ರವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಸ್ಪರ್ಧಾ ವಿಜೇತರಿಗೆ ಆಕರ್ಷಕ ಪ್ರಶಸ್ತಿ, ಬಹುಮಾನ ಹಾಗೂ ಪ್ರಶಸ್ತಿ ಪ್ರಮಾಣ ಪತ್ರವನ್ನು ಪ್ರಧಾನ ಮಾಡಲಿರುವರು. ಕಾರ್ಯನಿರ್ವಾಹಕ ನಿರ್ದೇಶಕ ಅಬ್ದುಲ್ ರೆಹಮಾನ್ ಗೌರವ ಅತಿಥಿಗಳಾಗಿ ಪಾಲ್ಗೊಳ್ಳಲಿರುವರು.
ಹೆಚ್ಚಿನ ಮಾಹಿತಿ/ವಿವರಗಳಿಗಾಗಿ ಸ್ಪರ್ಧಾಕೂಟದ ಸಂಘಟಕರಾದ ಹಾಗೂ ವೈದ್ಯಕೀಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ| ದೇವದಾಸ್ ರೈ 98450 81145, ಇವರನ್ನು ಸಂಪರ್ಕಿಸಬಹುದು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


