ರಂಗವಲ್ಲಿಯ ಮೂಲಕ ಕಾರಂತರು ಕಾರ್ಯಕ್ರಮ ಉದ್ಘಾಟನೆ

Upayuktha
0

 


ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಡಾ.ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆ ಮತ್ತು ಸರಕಾರಿ ಪ್ರೌಢಶಾಲೆ ಬಸ್ರೂರು ಇದರ ಸಹಯೋಗದಲ್ಲಿ ‘ಮಕ್ಕಳಿಗಾಗಿ ಕಾರಂತರು’ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ‘ಡಾ. ಕಾರಂತರ ಪರಿಚಯ ರಂಗವಲ್ಲಿಯ ಮೂಲಕ ಕಾರಂತರು' ಕಾರ್ಯಕ್ರಮ ಸೋಮವಾರ ಸರಕಾರಿ ಪ್ರೌಢಶಾಲೆ ಬಸ್ರೂರಿನಲ್ಲಿ ಜರುಗಿತು.


ಡಾ.ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ. ಗಣನಾಥ ಶೆಟ್ಟಿ ಎಕ್ಕಾರು ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಕಾರಂತರನ್ನು ಸರಳ ರೀತಿಯಲ್ಲಿ ಪರಿಚಯಿಸುವ ನಿಟ್ಟಿನಲ್ಲಿ ರಂಗವಲ್ಲಿಯ ಮೂಲಕ ಕಾರಂತರು  ಕಾರ್ಯಕ್ರಮವನ್ನು ಹಮ್ಮಿ ಕೊಂಡಿದ್ದು, ಎಲ್ಲಾ ಕ್ಷೇತ್ರಗಳಲ್ಲಿಯೂ ಕಾರ್ಯನಿರ್ವಹಿಸಿ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಿದ ಕಾರಂತರ ಮೇರು ವ್ಯಕ್ತಿತ್ವದ ಕುರಿತು ಇಂದಿನ ಯುವ ಪೀಳಿಗೆಗೆ ಅರಿವು ಮೂಡಿಸುವುದು ಅತೀ ಅವಶ್ಯ ಎಂದರು. 


ಶಾಲೆಯ ಮುಖ್ಯ ಶಿಕ್ಷಕಿ ಮಂಜುಳಾ ಜಿ.ಎಸ್ ಕಾರ್ಯಕ್ರಮವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ “ಚೋಮನ ದುಡಿ” ಚಲನಚಿತ್ರದ ಔಚಿತ್ಯವನ್ನು ವಿವರಿಸಿದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಉಪನ್ಯಾಸ ನೀಡಿದ ಶ್ರೀ ಬಸ್ರೂರು ಶಾರದಾ ಕಾಲೇಜಿನ ಕನ್ನಡ ವಿಭಾಗ ಉಪನ್ಯಾಸಕಿ ಮಮತಾ ಕಂಡ್ಲೂರು, ವಿದ್ಯಾರ್ಥಿಗಳು ಪುಸ್ತಕಗಳನ್ನು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು ಎಂದ ಅವರು ಕಾರಂತರ ಸಂಪೂರ್ಣ ಜೀವನ ಚರಿತ್ರೆಯ ಕುರಿತು ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ಸ್ವಾರಸ್ಯಕರವಾಗಿ ವಿವರಿಸಿದರು. 


ಡಾ.ಶಿವರಾಮ ಕಾರಂತ ಟ್ರಸ್ಟ್ ನ ಸದಸ್ಯರಾದ ಡಾ. ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ಡಾ. ಭಾರತಿ ಮರವಂತೆ ನಿರೂಪಿಸಿ, ಶಿಕ್ಷಕ ಶೇಖರ ಪೂಜಾರಿ ವಂದಿಸಿದರು. 

ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top