ಉಡುಪಿ: ಮಂಗಳೂರು ವಿಶ್ವವಿದ್ಯಾಲಯ, ಮಂಗಳ ಗಂಗೋತ್ರಿ, ಡಾ. ಶಿವರಾಮ ಕಾರಂತ ಅಧ್ಯಯನ ಪೀಠ ಮಂಗಳೂರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ.ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಡಾ.ಶಿವರಾಮ ಕಾರಂತರ ಬದುಕು-ಬರಹ ಸಂಶೋಧನೆಗಳ ಸಾಧ್ಯತೆಗಳು ವಿಚಾರ ಸಂಕಿರಣ ಮತ್ತು ನಾನು ಕಾರಂತ ನಾಟಕ ಪ್ರದರ್ಶನವು ಜೂನ್ 16 ರಂದು ಬೆಳಿಗ್ಗೆ 10.30 ಕ್ಕೆ ಮಣಿಪಾಲದ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಕಲಾ ಮಂಟಪದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಹಾವೇರಿ ಕರ್ನಾಟಕ ಜಾನಪದ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ.ಕೆ ಚಿನ್ನಪ್ಪ ಗೌಡ ಉದ್ಘಾಟಿಸಿಲಿದ್ದು, ಡಾ, ಶಿವರಾಮ ಕಾರಂತ ಅಧ್ಯಯನ ಪೀಠ ಮಂಗಳೂರು ಇದರ ನಿರ್ದೇಶಕ ಪ್ರೊ.ನಾಗಪ್ಪ ಗೌಡ ಅಧ್ಯಕ್ಷತೆ ವಹಿಸಲಿದ್ದಾರೆ, ಡಾ.ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ.ಗಣನಾಥ ಎಕ್ಕಾರು ಆಶಯ ನುಡಿಗಳಾನ್ನಾಡಲಿದ್ದಾರೆ. ಹಿರಿಯ ಸಂಶೋಧಕಿ ಮತ್ತು ಲೇಖಕಿ ಡಾ.ರೇಖಾ ಬನ್ನಾಡಿ ಉಪನ್ಯಾಸ ನೀಡಲಿದ್ದು, ಖ್ಯಾತ ಕವಯತ್ರಿ ಡಾ.ಜ್ಯೋತಿ ಗುರುಪ್ರಸಾದ್, ಚಿಂತಕಿ ಡಾ.ನಿಕೇತನ, ಸಂಶೋಧಕಿ ಶಾಲಿನಿ ಯು.ಬಿ, ಹಿರಿಯ ಲೇಖಕಿ ರಾಜಶ್ರೀ ಟಿ ಪೆರ್ಲ ಪ್ರತಿಕ್ರಿಯೆ ನೀಡಲಿದ್ದಾರೆ.
ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ದ ಪ್ರಾಂಶುಪಾಲ ಪ್ರೊ.. ನಿತ್ಯಾನಂದ ವಿ ಗಾಂವಕರ, ಕನ್ನಡ ವಿಭಾಗ ಮುಖ್ಯಸ್ಥೆ ರತ್ನಮಾಲ, ಮಂಗಳೂರು ವಿಶ್ವವಿದ್ಯಾನಿಲಯದ ಎಸ್.ವಿ.ಪಿ ಕನ್ನಡ ಅಧ್ಯಯನ ಕೇಂದ್ರದ ಉಪನ್ಯಾಸಕ ಡಾ.ಧನಂಜಯ ಕುಂಬ್ಳೆ, ಹಿರಿಯ ಪ್ರಾಧ್ಯಪಕ ಪ್ರೊ. ಸೋಮಣ್ಣ ಭಾಗವಹಿಸಲಿದ್ದಾರೆ.
ಸಭಾ ಕಾರ್ಯಕ್ರಮದ ನಂತರ ಮಧ್ಯಾಹ್ನ 2.00 ಗಂಟೆಗೆ ಡಾ. ಶಿವರಾಮ ಕಾರಂತ ಅಧ್ಯಯನ ಪೀಠ ಮಂಗಳೂರು ವಿಶ್ವವಿದ್ಯಾಲಯ ಪ್ರಸ್ತುತಪಡಿಸುವ ಜಗನ್ ಪವಾರ್ ನಿರ್ದೇಶನದ, ರಾಜಶ್ರೀ ಪೆರ್ಲ ರಚನೆಯ ನಾನು ಕಾರಂತ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಡಾ.ಶಿವರಾಮ ಕಾರಂತ ಟ್ರಸ್ಟಿನ ಸದಸ್ಯ ಕಾರ್ಯದರ್ಶಿಗಳ ಪ್ರಕಟಣೆ ತಿಳಿಸಿದೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

.jpeg)
