ಕರಾವಳಿಯತ್ತ ಕಿಂಗ್ ಖಾನ್ ಹೆಜ್ಜೆ: ಮಂಗಳೂರಿನಲ್ಲಿ ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮ

Upayuktha
0

 


ಮಂಗಳೂರು: ಬಾಲಿವುಡ್‌ನ ಖ್ಯಾತ ನಟ ಹಾಗೂ ಜಾಗತಿಕ ಮಟ್ಟದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿರುವ ಶಾರುಖ್ ಖಾನ್ ಅವರು ಜೂನ್ 25ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಕರಾವಳಿಯ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಸಂಸ್ಥೆಯಾದ ರೋಹನ್ ಕಾರ್ಪೊರೇಶನ್ ಆಯೋಜಿಸಿರುವ 'ಆನ್ ಈವಿನಿಂಗ್ ವಿತ್ ಶಾರುಖ್ ಖಾನ್' ಕಾರ್ಯಕ್ರಮದಲ್ಲಿ ಅವರು ವಿಶೇಷ ಅತಿಥಿಯಾಗಿ ಭಾಗವಹಿಸಲಿದ್ದಾರೆ. 


ಮಂಗಳೂರಿನ ಅಡ್ಯಾ‌ರ್ ಗಾರ್ಡನ್‌ನಲ್ಲಿ ನಡೆಯಲಿರುವ ಈ ವಿಶೇಷ ಕಾರ್ಯಕ್ರಮಕ್ಕೆ ಸಂಜೆ 4 ಗಂಟೆಯಿಂದ ಪ್ರವೇಶ ಆರಂಭವಾಗಲಿದ್ದು, ವಿವಿಧ ಕ್ಷೇತ್ರಗಳ ಗಣ್ಯರು, ಉದ್ಯಮಿಗಳು, ಸಾರ್ವಜನಿಕ ಪ್ರತಿನಿಧಿಗಳು ಹಾಗೂ ಪೂರ್ವ ನೋಂದಣಿ ಮಾಡಿಕೊಂಡಿರುವ ಅತಿಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. 


ಈ ಕುರಿತು ಮಾತನಾಡಿದ ರೋಹನ್ ಕಾರ್ಪೊರೇಶನ್ ಸಂಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕರಾದ ಡಾ. ರೋಹನ್ ಮೊಂತೇರೊ, “ಭಾರತದ ಅತ್ಯಂತ ಜನಪ್ರಿಯ ಕಲಾವಿದರಲ್ಲಿ ಒಬ್ಬರಾದ ಶಾರುಖ್ ಖಾನ್ ಅವರನ್ನು ಮಂಗಳೂರಿನ ನೆಲದಲ್ಲಿ ಸ್ವಾಗತಿಸುವ ಅವಕಾಶ ದೊರೆತಿರುವುದು ನಮಗೆ ಹೆಮ್ಮೆಯ ವಿಷಯ. ಈ ಕಾರ್ಯಕ್ರಮವು ರೋಹನ್ ಕಾರ್ಪೊರೇಶನ್ ಸಂಸ್ಥೆಯ ಬೆಳವಣಿಗೆಯಲ್ಲಿ ಮಹತ್ವದ ಕ್ಷಣವಾಗಿದ್ದು, ಭಾಗವಹಿಸುವ ಪ್ರತಿಯೊಬ್ಬರಿಗೂ ವಿಶಿಷ್ಟ ಅನುಭವವನ್ನು ನೀಡಲಿದೆ” ಎಂದು ಹೇಳಿದರು. 


ಕಾರ್ಯಕ್ರಮದ ಸಿದ್ದತೆಗಳ ಕುರಿತು ಮಾಹಿತಿ ನೀಡಿದ ಸಂಸ್ಥೆಯ ನಿರ್ದೇಶಕರಾದ ಶ್ರೀ ಡಿಯಾನ್ ಮೊಂತೇರೊ, “ಇದು ಮಂಗಳೂರಿನಲ್ಲಿ ನಡೆಯಲಿರುವ ಅತಿದೊಡ್ಡ ಕಾರ್ಪೊರೇಟ್ ಕಾರ್ಯಕ್ರಮಗಳಲ್ಲಿ ಒಂದಾಗಲಿದೆ. ನಮ್ಮ ಸಂಸ್ಥೆಗೆ ಮತ್ತು ನಗರಕ್ಕೆ ಮಹತ್ವದ ಕ್ಷಣವಾಗಿರುವ ಈ ಕಾರ್ಯಕ್ರಮವು ಸುರಕ್ಷಿತವಾಗಿ ಹಾಗೂ ಯಶಸ್ವಿಯಾಗಿ ನೆರವೇರಲು ಎಲ್ಲಾ ಇಲಾಖೆಗಳು ಮತ್ತು ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ' ಎಂದು ತಿಳಿಸಿದರು. 


ಕಾರ್ಯಕ್ರಮದಲ್ಲಿ ಭಾಗವಹಿಸಲು ಪೂರ್ವ ನೋಂದಣಿ ಕಡ್ಡಾಯವಾಗಿದ್ದು, ಅಧಿಕೃತವಾಗಿ ನೋಂದಾಯಿತ ಪಾಸ್‌ ಹೊಂದಿರುವವರಿಗೆ ಮಾತ್ರ ಪ್ರವೇಶ ಅವಕಾಶ ಕಲ್ಪಿಸಲಾಗುತ್ತದೆ ಎಂದು ಸಂಸ್ಥೆ ಸ್ಪಷ್ಟಪಡಿಸಿದೆ. 


ಶಾರುಖ್ ಖಾನ್ ಅವರ ಮಂಗಳೂರು ಭೇಟಿ ಘೋಷಣೆಯಾಗುತ್ತಿದ್ದಂತೆ ಕರಾವಳಿ ಭಾಗದಲ್ಲಿ ಅಪಾರ ಕುತೂಹಲ ಮತ್ತು ನಿರೀಕ್ಷೆ ಮೂಡಿದ್ದು, ಈ ಕಾರ್ಯಕ್ರಮವು ಮಂಗಳೂರಿನ ಕಾರ್ಪೊರೇಟ್ ಹಾಗೂ ಸಾಮಾಜಿಕ ವಲಯದಲ್ಲಿ ವಿಶೇಷ ಗಮನ ಸೆಳೆಯುವ ನಿರೀಕ್ಷೆಯಿದೆ. 


ರೋಹನ್ ಕಾರ್ಪೊರೇಶನ್ ಬಗ್ಗೆ


ರೋಹನ್ ಕಾರ್ಪೊರೇಶನ್ ಕರಾವಳಿ ಕರ್ನಾಟಕದ ಪ್ರಮುಖ ರಿಯಲ್ ಎಸ್ಟೇಟ್ ಸಂಸ್ಥೆಗಳಲ್ಲಿ ಒಂದಾಗಿದ್ದು, ಗುಣಮಟ್ಟ, ವಿಶ್ವಾಸಾರ್ಹತೆ ಮತ್ತು ಗ್ರಾಹಕರ ವಿಶ್ವಾಸವನ್ನು ತನ್ನ ಪ್ರಮುಖ ಮೌಲ್ಯಗಳಾಗಿ ಹೊಂದಿದೆ. ಸಂಸ್ಥೆಯು ಹಲವು ವಸತಿ ಹಾಗೂ ವಾಣಿಜ್ಯ ಯೋಜನೆಗಳ ಮೂಲಕ ತನ್ನದೇ ಆದ ಗುರುತನ್ನು ನಿರ್ಮಿಸಿಕೊಂಡಿದೆ. 

90355 64026


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top