ಕೋಟೆಕಾರು ಪ.ಪಂ: ನೀರಿನ ಬಿಲ್ಲು ಡಿಜಿಟಲ್ ಪಾವತಿ ವ್ಯವಸ್ಥೆಗೆ ಚಾಲನೆ

Upayuktha
0


ಮಂಗಳೂರು:  ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಕುಡಿಯುವ ನೀರಿನ ಬಿಲ್ಲು ಪಾವತಿಯ ಸ್ಕ್ಯಾನರ್ ವ್ಯವಸ್ಥೆಯನ್ನು ಬಿಡುಗಡೆಗೊಳಿಸಲಾಯಿತು. 
ಡಿಜಿಟಲ್ ಪಾವತಿ ವ್ಯವಸ್ಥೆಗೆ ಪಟ್ಟಣ ಪಂಚಾಯತ್ ಅಧ್ಯಕ್ಷೆ ದಿವ್ಯ ಸತೀಶ್ ಶೆಟ್ಟಿ ಚಾಲನೆ ನೀಡಿದರು. ಈ ವ್ಯವಸ್ಥೆಯ ಮೂಲಕ ನಾಗರೀಕರು ತಮ್ಮ ನೀರಿನ ಬಿಲ್ಲನ್ನು ಸ್ಕ್ಯಾನ್ ಮಾಡಿ ಸುಲಭವಾಗಿ ಪಾವತಿಸಬಹುದು. ಇದರಿಂದ  ಬಿಲ್ಲು ಪಾವತಿ ಪ್ರಕ್ರಿಯೆಯನ್ನು ಡಿಜಿಟಲೀಕರಣ ಮತ್ತು ಪಾರದರ್ಶಕಗೊಳಿಸುವ ನಿಟ್ಟಿನಲ್ಲಿ ಪಟ್ಟಣ ಪಂಚಾಯತ್ ಕೈಗೊಂಡ ಮಹತ್ವದ ಹೆಜ್ಜೆಯಾಗಿದೆ, ಸಾರ್ವಜನಿಕರು ಈ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳಬಹುದು.ಈ ಸಂದರ್ಭದಲ್ಲಿ ಉಪಾಧ್ಯಕ್ಷ ಪ್ರವೀಣ್ ಐ. ಬಗಂಬಿಲ ಮತ್ತಿತರರು ಉಪಸ್ಥಿತರಿದ್ದರು.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top