ಪಾಲಿಕೆ ವತಿಯಿಂದಲೇ ಕುದ್ಮುಲ್ ರಂಗರಾವ್ ಜಯಂತಿ ನಡೆಯಬೇಕು: ಶಾಸಕ ಕಾಮತ್

Upayuktha
0

 


ಮಂಗಳೂರು: ದಲಿತೋದ್ದಾರಕ ಕುದ್ಮುಲ್ ರಂಗರಾಯರ ಜಯಂತಿಯು ಪಾಲಿಕೆ ವತಿಯಿಂದಲೇ ನಡೆಯುವ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ದಲಿತ ಮುಖಂಡರ, ಪಾಲಿಕೆ ಅಧಿಕಾರಿಗಳ ಸಭೆ ನಡೆಯಿತು. 


ಸಭೆಯಲ್ಲಿ ಮಾತನಾಡಿದ ಶಾಸಕರು, ಕಳೆದ ಬಾರಿ ಪಾಲಿಕೆ ವತಿಯಿಂದ ರಂಗರಾಯರ ಜಯಂತಿ ಆಚರಿಸದಿರುವುದು ಅತ್ಯಂತ ಬೇಸರದ ಸಂಗತಿ. ಈ ಬಗ್ಗೆ ದಲಿತ ಮುಖಂಡರು  ಕುಂದುಕೊರತೆ ಸಭೆಯಲ್ಲೂ ಪ್ರಸ್ತಾಪಿಸಿದ್ದು, ಇಂತಹ ತಪ್ಪುಗಳು ಮರುಕಳಿಸಬಾರದು. ಈ ಹಿಂದೆ ನಮ್ಮ ಅವಧಿಯಲ್ಲಿ ಮಂಗಳೂರು ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ರಂಗರಾಯರ ಜನ್ಮದಿನಾಚರಣೆ ನಡೆಸಲು ತೀರ್ಮಾನಿಸಲಾಗಿತ್ತು. ಅದೇ ಮಾದರಿಯನ್ನು ಈ ಬಾರಿ ಮುಂದುವರಿಸಿಕೊಂಡು ಹೋಗಬೇಕು, ಮತ್ತು ಅದಕ್ಕೆ ಅಗತ್ಯವಿರುವ ಅನುದಾನವನ್ನು ಪಾಲಿಕೆ ವತಿಯಿಂದಲೇ ಮೀಸಲಿಡಬೇಕು ಎಂದು ಶಾಸಕರ ನೇತೃತ್ವದಲ್ಲಿ ನಿರ್ಣಯಿಸಲಾಯಿತು.


ಪಾಲಿಕೆ ಆಯುಕ್ತರಾದ ರವಿಚಂದ್ರ ನಾಯಕ್, ಉಪ ಆಯುಕ್ತರಾದ ನರೇಶ್ ಶೆಣೈ, ಸಮಾಜ ಕಲ್ಯಾಣ ಇಲಾಖೆಯ ಸುರೇಶ್ ಅಡಿಗ, ಮಾಲಿನಿ, ನಿಕಟಪೂರ್ವ ಪಾಲಿಕೆ ಸದಸ್ಯ ಶೈಲೇಶ್ ಶೆಟ್ಟಿ, ಶಿವುಕುಮಾರ್, ದಲಿತ ಮುಖಂಡರಾದ ರಘುವೀರ್ ಬಾಬುಗುಡ್ಡೆ, ಶಿವಪ್ಪ ನಂತೂರು, ಹೃದಯನಾಥ್, ಸಂದೀಪ್ ಬೋಳೂರು, ಕಿರಣ್ ಕೊಡಿಯಾಲ್ ಬೈಲ್, ಪ್ರಕಾಶ್ ಕೋಡಿಕಲ್, ಉಮೇಶ್ ಕುಮಾರ್, ದೇವೇಂದ್ರ, ಪ್ರಭಾಕರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top