ಲಂಬಾಣಿ ಸಮುದಾಯಕ್ಕೆ ಮಂತ್ರಿ ಗಿರಿ ಭಾಗ್ಯ ಕೊಡಿ: ವಿನೋದ್ ಚೌಹಾಣ್ ಆಗ್ರಹ

Upayuktha
0



ಕಲಬುರಗಿ: ನೂತನ ಸಿಎಂ ಡಿ.ಕೆ ಶಿವಕುಮಾರ್ ಅವರು  ಸಂಪುಟ ವಿಸ್ತರಣೆಯ ಸಂದರ್ಭದಲ್ಲಿ ಲಂಬಾಣಿ ಸಮುದಾಯಕ್ಕೂ ಸಚಿವ ಸ್ಥಾನದ ಭಾಗ್ಯ ನೀಡಬೇಕು ಎಂದು ಕಲಬುರಗಿ ಜಿಲ್ಲಾ ಬಂಜಾರಾ (ಲಂಬಾಣಿ) ಸೇವಾ ಸಂಘ ಹಾಗೂ ಕರ್ನಾಟಕ ಪ್ರದೇಶ ಬಂಜಾರಾ (ಲಂಬಾಣಿ) ಸೇವಾ ಸಂಘದ ಕಾರ್ಯದರ್ಶಿ ವಿನೋದ್ ಚೌಹಾಣ್ ಒತ್ತಾಯಿಸಿದ್ದಾರೆ. 


ಸಾಮಾಜಿಕವಾಗಿ ಅತಿ ಹಿಂದುಳಿದ ಮತ್ತು ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿರುವ ಲಂಬಾಣಿ ಸಮುದಾಯದ ಶಾಸಕರಿಗೆ ಸಚಿವ ಸ್ಥಾನವನ್ನು ನೀಡಿ ನ್ಯಾಯ ಕಲ್ಪಿಸಬೇಕು. ವಿಧಾನಸಭಾ ಉಪ ಸಭಾಪತಿ ರುದ್ರಪ್ಪ ಲಮಾಣಿ ಅವರನ್ನು ಸಚಿವ ಸ್ಥಾನಕ್ಕೆ ಪರಿಗಣಿಸಬೇಕು ಎಂದು ಒತ್ತಾಯಿಸಿದ್ದಾರೆ ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ರಾಜ್ಯದಲ್ಲಿ ಅತ್ಯಂತ ಗಣನೀಯ ಪ್ರಮಾಣದಲ್ಲಿರುವ ಸಮುದಾಯವನ್ನು ಸಚಿವ ಸ್ಥಾನ ನೀಡದೆ ಕಡೆಗಣಿಸಲಾಗಿದೆ. ಅದಕ್ಕಾಗಿ ಈ ಬಾರಿ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಅವಕಾಶ ನೀಡಬೇಕು ಇಲ್ಲವಾದಲ್ಲಿ ಲಂಬಾಣಿ ಸಮುದಾಯ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಲಿದೆ ಹಾಗೂ ಬೀದಿಗಿಳಿದು ಹೋರಾಟ ಮಾಡುವುದು ನಿಶ್ಚಿತ ಎಂದು ಮಾಧ್ಯಮ ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top