ವಸತಿ ಶಾಲೆ, ಕಾಲೇಜುಗಳಲ್ಲಿ ಶಿಕ್ಷಕರು/ಉಪನ್ಯಾಸಕರ ಹುದ್ದೆ: ಅರ್ಜಿ ಆಹ್ವಾನ

Upayuktha
0

 


ಉಡುಪಿ: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಕಾರ್ಕಳ ತಾಲೂಕು ಮಿಯ್ಯಾರು ಮೊರಾರ್ಜಿ ದೇಸಾಯಿ ವಸತಿ ಕಾಲೇಜಿನಲ್ಲಿ ಖಾಲಿ ಇರುವ ಕನ್ನಡ, ಇಂಗ್ಲೀಷ್, ಜೀವಶಾಸ್ತ್ರ ಮತ್ತು ಭೌತಶಾಸ್ತ್ರ ವಿಷಯಗಳ ಹಾಗೂ ಬ್ರಹ್ಮಾವರ ತಾಲೂಕು ಆರೂರು ಮೊರಾರ್ಜಿ ದೇಸಾಯಿ ವಸತಿ ಕಾಲೇಜಿನಲ್ಲಿ ಖಾಲಿ ಇರುವ ಕನ್ನಡ, ಇಂಗ್ಲೀಷ್, ರಸಾಯನಶಾಸ್ತ್ರ, ಜೀವಶಾಸ್ತ್ರ, ಗಣಿತ ಹಾಗೂ ಗಣಕ ವಿಜ್ಞಾನ ವಿಷಯಗಳಿಗೆ ಸಂಬಂಧಿಸಿದ ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.


   ಆಯಾ ವಿಷಯದಲ್ಲಿ ಎಂ.ಎಸ್ಸಿ, ಬಿ.ಎಡ್, ಎಂ., ಬಿ.ಎಡ್ ವಿದ್ಯಾರ್ಹತೆ ಹೊಂದಿರುವವರು ಅರ್ಜಿ ಸಲ್ಲಿಸಬಹುದಾಗಿದ್ದು, ಬೋಧನಾ ಕೌಶಲ್ಯ ಹಾಗೂ ಅನುಭವಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು.


   ಅರ್ಜಿ ಸಲ್ಲಿಸಲು ಜೂನ್ 6 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಮಿಯ್ಯಾರು ಮೊ.ನಂ: 9964153802 ಹಾಗೂ ಆರೂರು ಮೊ.ನಂ: 8277894199 ಮೊರಾರ್ಜಿ ದೇಸಾಯಿ ವಸತಿ ಕಾಲೇಜು ಪ್ರಾಂಶುಪಾಲರನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

 

 ಅತಿಥಿ ಶಿಕ್ಷಕರ ಹುದ್ದೆ : ಅರ್ಜಿ ಆಹ್ವಾನ

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಮೊರಾರ್ಜಿ ದೇಸಾಯಿ, ಡಾ.ಬಿ.ಆರ್ ಅಂಬೇಡ್ಕರ್, ಇಂದಿರಾಗಾಂಧಿ ಹಾಗೂ ನಾರಾಯಣಗುರು ವಸತಿ ಶಾಲೆಗಳಲ್ಲಿ ಪ್ರಸಕ್ತ ಸಾಲಿಗೆ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ ನೇರ ನೇಮಕಾತಿ ಮೂಲಕ ಹುದ್ದೆಗಳನ್ನು ಭರ್ತಿ ಮಾಡುವವರೆಗೆ ಅಥವಾ ಖಾಯಂ ಶಿಕ್ಷಕರು / ಉಪನ್ಯಾಸಕರು ವರ್ಗಾವಣೆ / ನಿಯೋಜನೆ ಆದೇಶದ ಮೇರೆಗೆ ಹಾಜರಾಗುವವರೆಗೂ ಅಥವಾ ಶೈಕ್ಷಣಿಕ ಸಾಲಿನ ಅಂತ್ಯದವರೆಗೆ ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ತಾತ್ಕಾಲಿಕವಾಗಿ ಅರ್ಹ ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.


ಬ್ರಹ್ಮಾವರದ ಆರೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಖಾಲಿ ಇರುವ ಗಣಿತ ಶಿಕ್ಷಕರ ಹುದ್ದೆ, ಬೈಂದೂರಿನ ಹೆರಂಜಾಲು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಖಾಲಿ ಇರುವ ಕನ್ನಡ ಹಾಗೂ ವಿಜ್ಞಾನ ಶಿಕ್ಷಕರ ಹುದ್ದೆ, ವಡ್ಡರ್ಸೆ ನಾರಾಯಣ ಗುರು ವಸತಿ ಶಾಲೆಯಲ್ಲಿ ಖಾಲಿ ಇರುವ ವಿಜ್ಞಾನ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆ, ಕಾರ್ಕಳದ ಅಜೆಕಾರು ಡಾ.ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಯಲ್ಲಿ ಖಾಲಿ ಇರುವ ಕನ್ನಡ, ಇಂಗ್ಲೀಷ್, ಹಿಂದಿ ಹಾಗೂ ವಿಜ್ಞಾನ ಶಿಕ್ಷಕರ ಹುದ್ದೆ, ಪಟ್ಲ ಹಿರೇಬೆಟ್ಟು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಖಾಲಿ ಇರುವ ಕನ್ನಡ, ಗಣಿತ, ವಿಜ್ಞಾನ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆ, ಶಂಕರನಾರಾಯಣ ಡಾ. ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಯಲ್ಲಿ ಖಾಲಿ ಇರುವ ಕನ್ನಡ, ಇಂಗ್ಲೀಷ್ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆ, ಕಳತ್ತೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಖಾಲಿ ಇರುವ ಕನ್ನಡ ಶಿಕ್ಷಕರ ಹುದ್ದೆ, ಸಿದ್ಧಾಪುರ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಖಾಲಿ ಇರುವ ಹಿಂದಿ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆ, ಯಡಾಡಿ-ಮತ್ಯಾಡಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಖಾಲಿ ಇರುವ ಕನ್ನಡ ಹಾಗೂ ವಿಜ್ಞಾನ ಶಿಕ್ಷಕರ ಹುದ್ದೆ ಮತ್ತು ಕಾರ್ಕಳದ ಮಿಯ್ಯಾರು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಖಾಲಿ ಇರುವ ವಿಜ್ಞಾನ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳಿಗೆ, ಆಯಾ ವಿಷಯದಲ್ಲಿ ಬಿ.ಎಸ್ಸಿ, ಬಿ.ಎಡ್, ಬಿ. ಬಿ.ಎಡ್ ವಿದ್ಯಾರ್ಹತೆ ಹೊಂದಿರುವವರು ಜೂನ್ 6 ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.


ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವಸತಿ ಶಾಲೆಗಳ ಪ್ರಾಂಶುಪಾಲರುಗಳಾದ ಆರೂರು ಮೊ.ನಂ: 8277894199, ಹೆರಂಜಾಲು ಮೊ.ನಂ: 9480461537, ವಡ್ಡರ್ಸೆ ಮೊ.ನಂ: 8867415291, ಅಜೆಕಾರು ಮೊ.ನಂ: 9743335673, ಹಿರೇಬೆಟ್ಟು ಪಟ್ಲ ಮೊ.ನಂ: 8970298710, ಶಂಕರನಾರಾಯಣ ಮೊ.ನಂ: 6363120177, ಕಳತ್ತೂರು ಮೊ.ನಂ: 9535225409, ಸಿದ್ಧಾಪುರ ಮೊ.ನಂ: 9482487266, ಯಡಾಡಿ-ಮತ್ಯಾಡಿ ಮೊ.ನಂ: 9901519126 ಹಾಗೂ ಮಿಯ್ಯಾರು ಮೊ.ನಂ: 9739790298 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.           


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter                          

Post a Comment

0 Comments
Post a Comment (0)
To Top