ಜ್ಞಾನಪೀಠ ಪುರಸ್ಕೃತರ ಸಾಹಿತ್ಯ ಸಂಭ್ರಮ: ಜೂನ್ 19ರಂದು ವಿಶಿಷ್ಟ ಉಪನ್ಯಾಸ ಮಾಲಿಕೆ

Upayuktha
0




ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳೊಂದಿಗೆ ಜಂಟಿಯಾಗಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿಗಳ ಗೌರವಾರ್ಥ 'ಕವಿ - ಕಾವ್ಯ - ಸಾಹಿತ್ಯ - ಪರಂಪರೆ' ಎಂಬ ವಿಶೇಷ ಉಪನ್ಯಾಸ ಮಾಲಿಕೆಯನ್ನು ಹಮ್ಮಿಕೊಂಡಿದೆ. 2026ರ ಜೂನ್ 19ರ ಶುಕ್ರವಾರದಂದು ನಗರದ ಎರಡು ಪ್ರತ್ಯೇಕ ಕಾಲೇಜುಗಳಲ್ಲಿ ಈ ವಿಶಿಷ್ಟ ಸಾಹಿತ್ಯಿಕ ಕಾರ್ಯಕ್ರಮಗಳು ಜರುಗಲಿವೆ.


ಅಂದು ಬೆಳಗ್ಗೆ 9.00 ಗಂಟೆಗೆ ಸಂತ ಆಗ್ನೇಸ್ ಕಾಲೇಜಿನ (ಸ್ವಾಯತ್ತ) ಆಶ್ರಯದಲ್ಲಿ ಜ್ಞಾನಪೀಠ ಪುರಸ್ಕೃತ ಗಿರೀಶ್ ಕಾರ್ನಾಡ್ ಅವರ ಕುರಿತಾದ ಮಾಲಿಕೆ-7 ರ ಕಾರ್ಯಕ್ರಮ ನಡೆಯಲಿದೆ. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ. ಪಿ. ಶ್ರೀನಾಥ್ ಅವರು ಈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಸಂತ ಆಗ್ನೇಸ್ ಕಾಲೇಜಿನ ಪ್ರಾಂಶುಪಾಲರಾದ ಸಿ. ಡಾ. ಎಂ. ವೆನಿಸ್ಸಾ ಎ. ಸಿ. ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರಜಾವಾಣಿ ಪತ್ರಿಕೆಯ ಪತ್ರಕರ್ತೆ ಶ್ರೀಮತಿ ರಾಜಲಕ್ಷ್ಮಿ ಕೋಡಿಬೆಟ್ಟು ಅವರು ಕಾರ್ನಾಡ್ ಅವರ ಸಾಹಿತ್ಯ ಮತ್ತು ಪರಂಪರೆಯ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಕಾಲೇಜಿನ ವಿಭಾಗ ಮುಖ್ಯಸ್ಥರಾದ ಡಾ. ಬಸ್ತಿಯಂ ಪಾಯ್ಸ್ ಸ್ವಾಗತಿಸಿ, ಕನ್ನಡ ಉಪನ್ಯಾಸಕಿ ಶ್ರೀಮತಿ ನಿಶ್ಚಿತಾ ಕೆ. ವಂದನಾರ್ಪಣೆ ಮಾಡಲಿದ್ದು, ದ್ವಿತೀಯ ಬಿಸಿಎ ವಿದ್ಯಾರ್ಥಿನಿ ಸುಶ್ಮಿತಾ ಕಾರ್ಯಕ್ರಮ ನಿರೂಪಿಸಲಿದ್ದಾರೆ.


ಅದೇ ದಿನ ಮಧ್ಯಾಹ್ನ 3.00 ಗಂಟೆಗೆ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಶಿಕ್ಷಣ ವಿಭಾಗದ (ಬಿ.ಎಡ್.) ಸಹಯೋಗದಲ್ಲಿ ಜ್ಞಾನಪೀಠ ಪುರಸ್ಕೃತ ಚಂದ್ರಶೇಖರ ಕಂಬಾರ ಅವರ ಕುರಿತಾದ ಮಾಲಿಕೆ-8 ರ ಕಾರ್ಯಕ್ರಮವು ವಿಶ್ವವಿದ್ಯಾನಿಲಯದ ಕಾನೂನು ಶಿಕ್ಷಣ ವಿಭಾಗದ 4ನೇ ಮಹಡಿಯ ಸಭಾಭವನದಲ್ಲಿ ನಡೆಯಲಿದೆ. ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಶಿಕ್ಷಣ ವಿಭಾಗದ ಸಹಪ್ರಾಧ್ಯಾಪಕಿ ಡಾ. ಫರೀಟಾ ವೇಗಸ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ. ಪಿ. ಶ್ರೀನಾಥ್ ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ಪ್ರಾಧ್ಯಾಪಕರು ಹಾಗೂ ಉಳ್ಳಾಲ ತಾಲೂಕು ಕ.ಸಾ.ಪ. ಅಧ್ಯಕ್ಷರಾದ ಡಾ. ಧನಂಜಯ ಕುಂಬ್ಳೆ ಅವರು ಕಂಬಾರರ ಕಾವ್ಯ ಮತ್ತು ಸಾಹಿತ್ಯದ ಕುರಿತು ಮುಖ್ಯ ಉಪನ್ಯಾಸ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ಶಿಕ್ಷಣ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ಡೆಲ್ನಾ ಲೋಬೊ ಅವರು ಉಪಸ್ಥಿತರಿರಲಿದ್ದಾರೆ. ಸಹಾಯಕ ಪ್ರಾಧ್ಯಾಪಕಿ ಡಾ. ವಿಜಯಲಕ್ಷ್ಮಿ ನಾಯಕ್ ಸ್ವಾಗತ ಭಾಷಣ ಮಾಡಲಿದ್ದು, ವಿದ್ಯಾರ್ಥಿ ಶಿಕ್ಷಕಿ ಅಶ್ವಿನಿ ಧನ್ಯವಾದ ಸಮರ್ಪಿಸಲಿದ್ದಾರೆ ಹಾಗೂ ವಿದ್ಯಾರ್ಥಿ ಶಿಕ್ಷಕಿ ಮೇಘನಾ ಕುಂದಾಪುರ ಕಾರ್ಯಕ್ರಮ ನಿರ್ವಹಿಸಲಿದ್ದಾರೆ.


ಕನ್ನಡದ ಇಬ್ಬರು ಶ್ರೇಷ್ಠ ಸಾಹಿತಿಗಳ ಒಳನೋಟಗಳನ್ನು ಯುವ ಪೀಳಿಗೆಗೆ ಪರಿಚಯಿಸುವ ಈ ವಿಶಿಷ್ಟ ಉಪನ್ಯಾಸ ಮಾಲಿಕೆಗಳಿಗೆ ಬೋಧಕ, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿ ವೃಂದ ಹಾಗೂ ಸಾಹಿತ್ಯಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸಂಘಟಕರು ಪ್ರಕಟಣೆಯಲ್ಲಿ ಕೋರಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top