ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅತಿ ಹೆಚ್ಚು ಹಾನಿ
ಮಂಗಳೂರು: ಮುಂಗಾರು ಪೂವ೯ ಗಾಳಿ, ಮಳೆಗೆ ವಿದ್ಯುತ್ ಕಂಬಗಳು, ಪರಿವರ್ತಕಗಳು ಸೇರಿದ೦ತೆ ರೂ.1173.68 ಲಕ್ಷ ಮೊತ್ತದ ಮೆಸ್ಕಾಂ ಆಸ್ತಿಗಳಿಗೆ ಹಾನಿಯಾಗಿದೆ.
2026ರ ಏ. 1 ರಿಂದ ಜೂ.1 ರ ಅವಧಿಯಲ್ಲಿ ಗಾಳಿ, ಮಳೆಗೆ ಮೆಸ್ಕಾಂ ವ್ಯಾಪ್ತಿಯ ಚಿಕ್ಕಮಗಳೂರು ಹಾಗೂದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅತಿ ಹೆಚ್ಚು ಹಾನಿ ಸಂಭವಿಸಿದೆ .ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 318.66 ಲಕ್ಷ ರೂ. ಹಾಗೂ ಚಿಕ್ಕ ಮಗಳೂರು ಜಿಲ್ಲೆಯಲ್ಲಿ 321.40 ಲಕ್ಷ ರೂ.ಮೊತ್ತದ ಆಸ್ತಿಗಳಿಗೆ ಹಾನಿಯಾಗಿದೆ. ಉಳಿದ೦ತೆ ಉಡುಪಿ ಜಿಲ್ಲೆಯಲ್ಲಿ 221.62 ಲಕ್ಷ ರೂ. ಮತ್ತು ಶಿವಮೊಗ್ಗದಲ್ಲಿ 312 ಲಕ್ಷ ರೂ.ಮೊತ್ತದ ಆಸ್ತಿಗಳು ಹಾನಿಗೊಳಗಾಗಿದ್ದು, ಬಹುತೇಕ ಸಮಸ್ಯೆ ಬಗೆಹರಿಸಲಾಗಿದೆ.
8147 ಕಂಬಗಳು ಧರಾಶಾಯಿ:
ಮೆಸ್ಕಾಂ ವ್ಯಾಪ್ತಿಯ 4 ಜಿಲ್ಲೆಗಳಲ್ಲಿ ಗಾಳಿ-ಮಳೆಗೆ ಒಟ್ಟು 8147 ವಿದ್ಯುತ್ ಕಂಬಗಳುಹಾನಿಗೊಂಡಿವೆ. ಶಿವಮೊಗ್ಗ ಜಿಲ್ಲೆಯಲ್ಲಿ ಅತೀ ಹೆಚ್ಚು ಅಂದರೆ 2797 ಕಂಬಗಳಿಗೆ ಹಾನಿಯಾಗಿದೆ. ದಕ್ಷಿಣ ಕನ್ನಡದಲ್ಲಿ 2438, ಉಡುಪಿ ಜಿಲ್ಲೆಯಲ್ಲಿ 1031 ಕಂಬಗಳು, ಚಿಕ್ಕಮಗಳೂರು ಜಿಲ್ಲೆಯಲ್ಲಿ 1881 ಕಂಬಗಳು ಹಾನಿಗೊಳಗಾಗಿವೆ. ಈಗಾಗಲೇ ಹಾನಿಗೊಳಗಾಗಿರುವ ವಿದ್ಯುತ್ ಕಂಬಗಳನ್ನು ಬದಲಾಯಿಸಲಾಗಿದೆ.
ಅದೇ ರೀತಿ ಒಟ್ಟಾರೆ ದಕ್ಷಿಣ ಕನ್ನಡದಲ್ಲಿ 12, ಶಿವಮೊಗ್ಗದಲ್ಲಿ 17 ವಿದ್ಯುತ್ ಪರಿವರ್ತಕಗಳು ಹಾನಿಗೊಂಡಿವೆ. ಇದಲ್ಲದೆ, 228.05 ಕಿ.ಮೀ. ವಿದ್ಯುತ್ ಮಾರ್ಗಗಳು ಹಾನಿಗೊಂಡಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 121.90 ಕಿ.ಮೀ., ಉಡುಪಿ ಜಿಲ್ಲೆಯಲ್ಲಿ 11.70 ಕಿ.ಮೀ., ಚಿಕ್ಕಮಗಳೂರು ಜಿಲ್ಲೆಯಲ್ಲಿ 37.62 ಕಿ.ಮೀ. ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ 56.83 ಕಿ.ಮಿ.ವಿದ್ಯುತ್ ಮಾರ್ಗ ಹಾನಿಗೊಂಡಿದ್ದು, ಸರಿಪಡಿಸಲಾಗಿದೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


