ಎಂ.ಕೆ. ಲೋಕೇಶ್‌ಗೆ ಡಾಕ್ಟರೇಟ್ ಪದವಿ

Upayuktha
0

ಬೆಂಗಳೂರು: ಎಂ.ಕೆ. ಲೋಕೇಶ ಅವರು "ರಾಜಕಾರಣದಲ್ಲಿ ಸಿ.ಟಿ. ರವಿ: ಒಂದು ಅಧ್ಯಯನ" (ವಿಶೇಷವಾಗಿ ರಾಜಕೀಯ ಮತ್ತು ಆಡಳಿತಾತ್ಮಕ ನಾಯಕತ್ವ) ಎಂಬ ವಿಷಯದ ಕುರಿತು ನಡೆಸಿದ ಸಂಶೋಧನೆಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ಮೈಸೂರು ಡಾಕ್ಟರೇಟ್ ಪದವಿ ನೀಡಿದೆ.


ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ಮೈಸೂರು ಇಲ್ಲಿನ ರಾಜ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ವಿಶ್ರಾಂತ ಪ್ರಾಧ್ಯಾಪಕರಾದ ಪ್ರೊ. ಕೆ.ಜೆ. ಸುರೇಶ್ ಅವರ ಮಾರ್ಗದರ್ಶನದಲ್ಲಿ ಲೋಕೇಶ ಅವರು ಈ ಮಹಾಪ್ರಬಂಧ ಮಂಡಿಸಿದ್ದರು.


ದಿವಂಗತ ಕೃಷ್ಣಪ್ಪ ಎಂ.ಕೆ ಮತ್ತು ಮರಿಯಮ್ಮ ಅವರ ಪುತ್ರನಾಗಿರುವ ಹೊಸಕೋಟೆಯ ಮಲ್ಲಿಮಾಕನಪುರದ ಲೋಕೇಶ ಅವರು ಪ್ರಸ್ತುತ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕೆ.ಆರ್.ಪುರದಲ್ಲಿ ರಾಜ್ಯಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.



 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top