ಸುರತ್ಕಲ್ ರೈಲ್ವೆ ನಿಲ್ದಾಣದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದ ಸಂಸದ ಕ್ಯಾ. ಚೌಟ

Upayuktha
0

ಸುರತ್ಕಲ್: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ₹2.1 ಕೋಟಿ ಅನುದಾನದ ಅಡಿಯಲ್ಲಿ ಸುರತ್ಕಲ್ ರೈಲ್ವೆ ನಿಲ್ದಾಣದಲ್ಲಿ ನಡೆದ ನೂತನ ಪ್ಲಾಟ್‌ಫಾರ್ಮ್ ನಿರ್ಮಾಣ ಹಾಗೂ ಸುಸಜ್ಜಿತ ಮೇಲ್ಛಾವಣಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ದ. ಕ. ಲೋಕಸಭಾ ಕ್ಷೇತ್ರದ ಸಂಸದ  ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಿದರು. ನಿಲ್ದಾಣದ ಬಹುತೇಕ ಕಾಮಗಾರಿಗಳು ಮುಕ್ತಾಯದ ಹಂತಕ್ಕೆ ತಲುಪಿದ್ದು,  ಶೀಘ್ರದಲ್ಲೇ ಇದನ್ನು ಪ್ರಯಾಣಿಕರ ಸೇವೆಗೆ ಮುಕ್ತಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಸದರು ಅಧಿಕಾರಿಗಳಿಗೆ ಸೂಚಿಸಿದರು. 


ಬಿಜೆಪಿ ಮಂಗಳೂರು ನಗರ ಉತ್ತರ ಮಂಡಲ ಅಧ್ಯಕ್ಷ ರಾಜೇಶ್ ಕೊಟ್ಟಾರಿ, ಬಿಜೆಪಿ ಮುಖಂಡರಾದ ರಾಮ ಅಮೀನ್ ಪಚ್ಚನಾಡಿ, ತಿಲಕ್‌ರಾಜ್ ಕೃಷ್ಣಾಪುರ, ಪುಷ್ಪರಾಜ್ ಮುಕ್ಕ, ದಿನಕರ ಇಡ್ಯ, ಬಾಲಕೃಷ್ಣ ಶೆಟ್ಟಿ ಕೆಂಚನೂರು ಮಾಜಿ ಮ.ನ.ಪಾ ಸದಸ್ಯರಾದ ಶ್ವೇತಾ ಪೂಜಾರಿ, ಸರಿತಾ ಶಶಿಧರ್, ಕೊಂಕಣ್ ರೈಲ್ವೆ ಅಧಿಕಾರಿಗಳು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.


 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top