ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜೂನ್ 15, 2026 ರಂದು ಸಿಐಎಸ್‌ಎಫ್ ಅಧಿಕಾರಿಗಳಿಗಾಗಿ “Trust Less, Verify More: Staying Safe Online” ಎಂಬ ವಿಷಯದ ಕುರಿತು ಸೈಬರ್ ಅಪರಾಧ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಈ ಕಾರ್ಯಕ್ರಮವನ್ನು ಶ್ರೀನಿವಾಸ ವಿವಿ, ಇನ್ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ನ ಡಿಜಿಟಲ್ ಮತ್ತು ಸೈಬರ್ ಫೊರೆನ್ಸಿಕ್ಸ್ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶೆರಿನ್ ಲಿಯೋನೋರಾ ನಡೆಸಿಕೊಟ್ಟರು.
ಕಾರ್ಯಕ್ರಮದಲ್ಲಿ ಇತ್ತೀಚಿನ ಸೈಬರ್ ಬೆದರಿಕೆಗಳು, ಆನ್‌ಲೈನ್ ವಂಚನೆಗಳು, ಡಿಜಿಟಲ್ ಸುರಕ್ಷತೆ ಹಾಗೂ ಸೈಬರ್ ಜಾಗೃತಿಯ ಮಹತ್ವದ ಕುರಿತು ಮಾಹಿತಿ ನೀಡಲಾಯಿತು. ಅಧಿಕಾರಿಗಳು ಸುರಕ್ಷಿತ ಆನ್‌ಲೈನ್ ಅಭ್ಯಾಸಗಳನ್ನು ಅಳವಡಿಸಿಕೊಳ್ಳುವ ಅಗತ್ಯವನ್ನು ಒತ್ತಿ ಹೇಳಲಾಯಿತು.
ಈ ಸಾಧನೆಗಾಗಿ ಶ್ರೀನಿವಾಸ್ ವಿಶ್ವವಿದ್ಯಾಲಯವು ಶೆರಿನ್ ಲಿಯೋನೋರಾ ಅವರನ್ನು ಅಭಿನಂದಿಸಿದ್ದು, ಮುಂದಿನ ದಿನಗಳಲ್ಲಿಯೂ ಇನ್ನಷ್ಟು ಯಶಸ್ಸುಗಳು ದೊರೆಯಲೆಂದು ಶುಭ ಹಾರೈಸಿದೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


