ಕಾರ್ಯಕ್ರಮದಲ್ಲಿ ಶಾಸಕ ಡಾ. ವೈ. ಭರತ್ ಶೆಟ್ಟಿ ಭಾಗಿ
ಮಂಗಳೂರು: ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ಉತ್ತರ ಮಂಡಲದ ವತಿಯಿಂದ, ಡಾ. ಶ್ಯಾಮ ಪ್ರಸಾದ್ ಮುಖರ್ಜಿಯವರ ಬಲಿದಾನ ದಿನದ ಸ್ಮರಣಾರ್ಥ ಕಾರ್ಯಕ್ರಮವು ಇಂದು ಕಾವೂರು ಬಿಜೆಪಿ ಕಾರ್ಯಾಲಯದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕ ಡಾ. ವೈ. ಭರತ್ ಶೆಟ್ಟಿಯವರು ಮಾತನಾಡಿ, ಡಾ. ಶ್ಯಾಮ ಪ್ರಸಾದ್ ಮುಖರ್ಜಿಯವರ ಜೀವನ, ದೇಶಭಕ್ತಿ ಹಾಗೂ ತ್ಯಾಗವು ಪ್ರತಿಯೊಬ್ಬ ಕಾರ್ಯಕರ್ತನಿಗೂ ಪ್ರೇರಣೆಯಾಗಿದೆ. ಪಕ್ಷ ಸಂಘಟನೆಯನ್ನು ಬಲಪಡಿಸುವಲ್ಲಿ ಅವರ ಆದರ್ಶಗಳು ನಮಗೆಲ್ಲ ದಾರಿದೀಪವಾಗಿವೆ ಎಂದು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ನಗರ ಉತ್ತರ ಮಂಡಲದ ಅಧ್ಯಕ್ಷರಾದ ರಾಜೇಶ್ ಕೊಟ್ಟಾರಿ, ಜಿಲ್ಲಾ ಪ್ರಮುಖರು, ರಾಜ್ಯ ಬಿಜೆಪಿಯಿಂದ ಮಂಗಳೂರು ನಗರ ಉತ್ತರಕ್ಕೆ ನಿಯುಕ್ತಿಗೊಂಡ ಎಸ್‌ಐಆರ್ ಪ್ರಮುಖರಾದ ನಿತಿನ್ ಕುಮಾರ್, ಬಿಜೆಪಿ ಉಪಾಧ್ಯಕ್ಷೆ ಪೂಜಾ ಪೈ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸಂದೀಪ್ ಪಚ್ಚನಾಡಿ ಹಾಗೂ ರಂದೀಪ್ ಕಾಂಚನ್ ಸೇರಿದಂತೆ ಸ್ಥಳೀಯ ಪ್ರಮುಖರು, ಜಿಲ್ಲಾ ಮಟ್ಟದ ನಾಯಕರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಡಾ. ಶ್ಯಾಮ ಪ್ರಸಾದ್ ಮುಖರ್ಜಿಯವರ ದೇಶಸೇವೆ, ರಾಷ್ಟ್ರ ಏಕತೆಗಾಗಿ ಅವರು ನೀಡಿದ ಕೊಡುಗೆ ಹಾಗೂ ಅವರ ತತ್ವಾದರ್ಶಗಳ ಕುರಿತು ಸ್ಮರಣೆ ಮಾಡಲಾಯಿತು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


