ಮಂಗಳೂರು: ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ರೆಡ್ ಕ್ರಾಸ್ ಸೊಸೈಟಿಯ ಶತಮಾನೋತ್ಸವ ಕಟ್ಟಡದ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು.
ಕಾರ್ಯಕ್ರಮಕ್ಕೆ ಚಾಲನೆ ನೀಡಿದ ರೆಡ್ ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಮಾತನಾಡಿ "ರಕ್ತದಾನ ಶಿಬಿರ, ವಿಪತ್ತ ನಿರ್ವಹಣೆ, ಆರೋಗ್ಯ ಜಾಗೃತಿ ಸಹಿತ ವಿವಿಧ ಸೇವಾ ಕಾರ್ಯಗಳಲ್ಲಿ ಮುಂಚೂಣಿಯಲ್ಲಿರುವ ರೆಡ್ ಕ್ರಾಸ್ ಸೊಸೈಟಿ ಪರಿಸರ ಸಂರಕ್ಷಣೆಗೂ ವಿಶೇಷ ಆದ್ಯತೆ ನೀಡಿದೆ ಎಂದರು.
ರೆಡ್‌ಕ್ರಾಸ್ ಜಿಲ್ಲಾ ಘಟಕದ ಉಪಾಧ್ಯಕ್ಷ ಡಾ.ಸಚ್ಚಿದಾನಂದ ರೈ, ಖಜಾಂಜಿ ಗುರುದತ್ ನಾಯಕ್, ಕಾರ್ಯದರ್ಶಿ ಕಿಶೋರ್‌ಚಂದ್ರ ಹೆಗ್ಡೆ, ಆಡಳಿತ ಸಮಿತಿ ನಿರ್ದೇಶಕರಾದ ಪಿ.ಬಿ.ಹರೀಶ್ ರೈ, ಡಾ.ಸುಮನ .ಬಿ., ರಾಘವೇಂದ್ರ ರಾವ್, ಕಚೇರಿ ಸಿಬ್ಬಂದಿ ಮಲ್ಲಿಕಾ, ಅನಿತಾ, ಗಿರೀಶ್ ಕುಮಾರ್ ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


