ಮಾಣಿಲ - ಮುರುವದಲ್ಲಿ ಮಕ್ಕಳ ಬೇಸಿಗೆ ಶಿಬಿರ ಸಮಾರೋಪ
ಪುತ್ತೂರು: ಬೇಸಿಗೆ ಶಿಬಿರಗಳಿಂದ ಮಕ್ಕಳಲ್ಲಿ ಉಲ್ಲಾಸ, ಸಂತೋಷಗಳುಂಟಾಗುತ್ತವೆ. ಬಹುದೀರ್ಘ ಕಾಲದವರೆಗೆ ಶಿಬಿರದ ನೆನಪುಗಳು ಅಂತರಂಗದಲ್ಲಿ ಹಸಿರಾಗಿ ಉಳಿದುಕೊಳ್ಳುತ್ತವೆ. ಹಾಗಾಗಿ ರಜಾ ಅವಧಿಯಲ್ಲಿ ಶಿಬಿರಗಳಲ್ಲಿ ಭಾಗವಹಿಸುವುದು ಅತ್ಯಂತ ಸ್ವಾಗತಾರ್ಹ ವಿಚಾರ ಎಂದು ಮಾಣಿಲ ಗ್ರಾಮ ಪಂಚಾಯತ್‍ನ ಅಭಿವೃದ್ಧಿ ಅಧಿಕಾರಿ ಕೃಷ್ಣ ಕುಮಾರ ಕಮ್ಮಜೆ ಹೇಳಿದರು.
ಅವರು ಇತ್ತೀಚೆಗೆ ಮುರುವ ಅನುದಾನಿತ ಹಿರಿಯ ಪ್ರಾಥಮಿಸಕ ಶಾಲೆಯಲ್ಲಿ ಮಾಣಿಲ ಗ್ರಾಮಪಂಚಾಯತ್ ಆಯೋಜಿಸಲಾದ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಂಆರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ಶಾಲಾ ಸಂಚಾಲಕ ಮುರುವ ನಡುಮನೆ ಮಹಾಬಲ ಭಟ್ ಶುಭ ಹಾರೈಸಿದರು. ಶಾಲಾ ಮುಖ್ಯೋಪಾಧ್ಯಾಯ ದಯಾನಂದ ನಾಯಕ್ ಶುಭಾಶಂಸನೆಗೈದರು. ಈ ಸಂದರ್ಭದಲ್ಲಿ ಪೆರುವಾಯಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿ ಸುಮಲತಾ ಹಾಗೂ ಆಶಾ ಕಾರ್ಯಕರ್ತೆ ರತ್ನಾವತಿ ಶಿಬಿರಾರ್ಥಿಗಳ ಆರೋಗ್ಯ ತಪಾಸಣೆ ನಡೆಸಿಕೊಟ್ಟರು.
ಶಿಬಿರದಲ್ಲಿ ಮಕ್ಕಳಿಗೆ ಹಾಡು, ಸಂಗೀತ ಕುರ್ಚಿ, ಪ್ರಬಂಧ ರಚನೆ, ಬಲೂನು ಊದಿ ಒಡೆಯುವುದು, ಕೆರೆದಡ, ಪಿರಮಿಡ್ ಗ್ಲಾಸ್ ಮೊದಲಾದ ಸ್ಪರ್ಧೆಗಳನ್ನು ಆಯೋಜಿಸಿ ರಂಜಿಸಲಾಯಿತು. ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಮಜಾಲು, ಪಕಳಕುಂಜದ ವೇಣುಗೋಪಾಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಮುರುವ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಪಕಳಕುಂಜ ಶಾಲೆಯ ಶಿಕ್ಷಕಿಯರಾದ ದಯಾಮಣಿ, ಮಾಲತಿ ಹಾಗೂ ಮುರುವ ಶಾಲಾ ಶಿಕ್ಷಕಿ ಸುಲೋಚನಾ ಶಿಬಿರವನ್ನು ನಡೆಸಿಕೊಟ್ಟರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


