ಕಾಸರಗೋಡು: ಮಾಸ್ತಿ ಕನ್ನಡದ ಆಸ್ತಿ ಎಂಬ ವಿನೂತನ ಕಾರ್ಯಕ್ರಮವನ್ನು ಡಾ. ವಾಣಿಶ್ರೀ ಕಾಸರಗೋಡು ಸಾರಥ್ಯದ ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆ (ರಿ) ಕಾಸರಗೋಡು ಇವರಿಂದ ಭಾನುವಾರದಂದು (ಜೂನ್ 14) ಸಂಸ್ಥೆಯ 224ನೇ ಕಾರ್ಯಕ್ರಮವಾಗಿ ಪ್ರಕೃತಿ ಆಯುರ್ವೇದ ಚಿಕಿತ್ಸಾಲಯ ಶ್ರೀ ಗಿರಿ ಸದನ ಚೂರಿಪ್ಪಳ್ಳ ನೆಲ್ಲಿಕಟ್ಟೆ ಇಲ್ಲಿನ ಶಿವದುರ್ಗಾ ವೇದಿಕೆಯಲ್ಲಿ ಆಯೋಜಿಸಲಾಯಿತು. ಸಂಸ್ಥೆಯ ಕೋಶಾಧಿಕಾರಿಯವರಾದ ಡಾ.ವೆಂಕಟಗಿರೀಶ್ ಇವರು ದೀಪ ಪ್ರಜ್ವಲಿಸಿ ವಿಧ್ಯುಕ್ತ ಚಾಲನೆ ನೀಡಿದರು.
ಮಾಸ್ತಿಯವರು ಕನ್ನಡ ಸಾಹಿತ್ಯ ಲೋಕಕ್ಕೆ ನೀಡಿರುವ ಕೊಡುಗೆಗಳನ್ನು ಕೊಂಡಾಡಿದರು. ಉಪಾಧ್ಯಕ್ಷರಾದ ಶ್ರೀ ಅಚ್ಚುತ ಭಟ್ ಇವರು ಮಾಸ್ತಿಯವರ ಕಥೆಗಳಿಗೆ ಧ್ವನಿಯಾಗೋಣ ಎಂಬ ಶೀರ್ಷಿಕೆಯಡಿ ಮಾಸ್ತಿಯವರ ಕಥೆಗಳನ್ನು ಸ್ಥಳೀಯ ಮಕ್ಕಳಿಗೆ ಓದಿಸಿದರು. ಸಂಸ್ಥೆಯ ಅಧ್ಯಕ್ಷರಾದ ಡಾ. ವಾಣಿಶ್ರೀ ಕಾಸರಗೋಡು ಇವರು ಕಾರ್ಯಕ್ರಮವನ್ನು ನಿರೂಪಿಸಿ ನಿರ್ವಹಿಸುದರೊಂದಿಗೆ ನಾವು ಕಥೆ ಕಟ್ಟೋಣ ಎಂಬ ಕಾರ್ಯಾಗಾರದಲ್ಲಿ ಮಕ್ಕಳಿಂದ ಹೊಸ ಕಥೆಗಳನ್ನು ರಚಿಸಲು ಮಾರ್ಗದರ್ಶನ ನೀಡಿದರು.
ಇದೇ ಸಂದರ್ಭದಲ್ಲಿ ಸುಚಿತ್ರ ಅವರ ನಿರ್ದೇಶನದಲ್ಲಿ ನೃತ್ಯ ವೈಭವ ಕಾರ್ಯಕ್ರಮ ನಡೆಯಿತು. ಕನ್ನಡ ಸಾಹಿತ್ಯ ಪ್ರಸ್ತುತಿ ಡಾ. ವಾಣಿಶ್ರೀ ನೆರವೇರಿಸಿದರು. ಗಾನ ವೈಭವ ಕಾರ್ಯಕ್ರಮವು ಭವಿತ್ ಹರ್ಷಿತ್ ಹಾಗೂ ಲಕ್ಷ್ಮೀಶ್ ಅವರಿಂದ ಸಂಪನ್ನಗೊಂಡಿತು. ಭಾಗವಹಿಸಿದ ಕನ್ನಡ ಕಲಾತಾರೆಗಳಿಗೆ ಸಂಸ್ಥೆಯ ವತಿಯಿಂದ ಪುಸ್ತಕ ಹಾಗೂ ಪಾರಿತೋಷಕ ನೀಡಿ ಕಾಸರಗೋಡಲ್ಲಿ ಕನ್ನಡ ಕೆಲಸಗಳಿಗೆ ಪ್ರೋತ್ಸಾಹಿಸಲಾಯಿತು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


