ಬಿಜೆಪಿ ಮಂಗಳೂರು ನಗರ ಉತ್ತರ ಮಂಡಲ ಯುವ ಮೋರ್ಚಾ ಪದಾಧಿಕಾರಿಗಳ ಸಭೆ

Upayuktha
0

ಕಾವೂರು: ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ಉತ್ತರ ಮಂಡಲ ಯುವ ಮೋರ್ಚಾ ಪದಾಧಿಕಾರಿಗಳ ಸಭೆಯು ಶಾಸಕ ಡಾ. ವೈ. ಭರತ್ ಶೆಟ್ಟಿಯವರ ಉಪಸ್ಥಿತಿಯಲ್ಲಿ ಕಾವೂರು ಬಿಜೆಪಿ ಕಾರ್ಯಾಲಯದಲ್ಲಿ ನಡೆಯಿತು.


ಈ ಸಭೆಯಲ್ಲಿ ಯುವ ಮೋರ್ಚಾ ತಂಡದ ಮರುಆಯ್ಕೆ ಹಾಗೂ ಪದಾಧಿಕಾರಿಗಳು ಮತ್ತು ಸದಸ್ಯರ ಘೋಷಣೆಯನ್ನು ಮಂಡಲ ಅಧ್ಯಕ್ಷರಾದ ರಾಜೇಶ್ ಕೊಟ್ಟಾರಿಯವರು ಮಾಡಿದರು. ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳನ್ನು ಉದ್ದೇಶಿಸಿ ಶಾಸಕರಾದ ಡಾ. ವೈ. ಭರತ್ ಶೆಟ್ಟಿಯವರು ಪಕ್ಷ ಸಂಘಟನೆ ಹಾಗೂ ಮುಂಬರುವ ಚಟುವಟಿಕೆಗಳ ಕುರಿತು ಮಾರ್ಗದರ್ಶನ ನೀಡಿದರು.


ಸಭೆಯಲ್ಲಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರಾದ ನಂದನ್ ಮಲ್ಯ, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಭರತ್ ರಾಜ್ ಕೃಷ್ಣಾಪುರ, ಮಂಡಲ ಕಾರ್ಯದರ್ಶಿ ಹಾಗೂ ಯುವ ಮೋರ್ಚಾ ಮಂಡಲ ಪ್ರಭಾರಿ ಪುಷ್ಪರಾಜ್ ಮುಕ್ಕ, ಜಿಲ್ಲಾ ಯುವ ಮೋರ್ಚಾ ಕಾರ್ಯದರ್ಶಿ ಹಾಗೂ ಪ್ರಭಾರಿ ನವೀನ್ ರಾಜ್, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷರಾದ ಆಶ್ರಿತ್ ನೊಂಡ, ಮಂಡಲ ಯುವ ಮೋರ್ಚಾ ಅಧ್ಯಕ್ಷರಾದ ರಕ್ಷಿತ್ ಆರ್. ಪೂಜಾರಿ, ಪ್ರಧಾನ ಕಾರ್ಯದರ್ಶಿಗಳಾದ ಸಂಜಿತ್ ಶೆಟ್ಟಿ, ಯಶ್ ಪಾಲ್ ಸಾಲ್ಯಾನ್ ಹಾಗೂ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.


 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top