ಆ.7-8 : 16ನೇ ಆವೃತ್ತಿಯ ಆಳ್ವಾಸ್ ಪ್ರಗತಿ–2026, ಬೃಹತ್ ಉದ್ಯೋಗ ಮೇಳ

Upayuktha
0


ಮೂಡುಬಿದಿರೆ: ಗ್ರಾಮೀಣ ಪ್ರತಿಭೆಗಳಿಗೆ ಗುಣಮಟ್ಟದ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ 2007ರಲ್ಲಿ ಆರಂಭಗೊಂಡ ಆಳ್ವಾಸ್ ಪ್ರಗತಿ ಇಂದು ದೇಶದ ಅತ್ಯಂತ ಯಶಸ್ವಿ ಬೃಹತ್ ಉದ್ಯೋಗ ಮೇಳಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ.  ಈ ಬಾರಿ ನಡೆಯುವ 16ನೇ ಆವೃತ್ತಿಯ ಬೃಹತ್ ಉದ್ಯೋಗ ಮೇಳವು ಆಗಸ್ಟ್ 7 ಮತ್ತು 8ರಂದು ಮೂಡುಬಿದಿರೆಯ ವಿದ್ಯಾಗಿರಿ ಆವರಣದಲ್ಲಿ ನಡೆಯಲಿದ್ದು, ಮೇಳದ ಪೂರ್ವಭಾವಿಯಾಗಿ ಸಕಲ ಸಿದ್ಧತೆಗಳು ಭರದಿಂದ ಸಾಗುತ್ತಿವೆ.


ಗ್ರಾಮೀಣ ಪ್ರದೇಶದ ಯುವಜನರು ಹಾಗೂ ಸೀಮಿತ ಉದ್ಯೋಗದ ಅವಕಾಶವನ್ನು ಹೊಂದಿರುವ ಅಭ್ಯರ್ಥಿಗಳಿಗೆ, ಗುಣಮಟ್ಟದ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಆರಂಭವಾದ ಈ ಮಹತ್ವಾಕಾಂಕ್ಷಿ ಕಾರ್ಯಕ್ರಮ, ಇಂದು ಕರ್ನಾಟಕ ಸೇರಿದಂತೆ  ಸುತ್ತಲಿನ ನಾಲ್ಕು ರಾಜ್ಯಗಳ ಅಭ್ಯರ್ಥಿಗಳಿಗೆ ಸ್ಥಳೀಯ, ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದ ಉದ್ಯೋಗಾವಕಾಶಗಳನ್ನು ಒದಗಿಸುವ ವಿಶ್ವಾಸಾರ್ಹ ವೇದಿಕೆಯಾಗಿ ಬೆಳೆದಿದೆ.


ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆಯ (ಸಿಎಸ್‍ಆರ್)  ಭಾಗವಾಗಿ ಆಯೋಜಿಸಲಾಗುವ ಆಳ್ವಾಸ್ ಪ್ರಗತಿ ಉದ್ಯೋಗ ಮೇಳವು ಉದ್ಯೋಗಾಕಾಂಕ್ಷಿಗಳು ಹಾಗೂ ಭಾಗವಹಿಸುವ ಕಂಪನಿಗಳಿಗೆ ಸಂಪೂರ್ಣ ಉಚಿತವಾಗಿರುತ್ತದೆ.   ಇದುವರೆಗೆ ಪ್ರತಿμÁ್ಠನವು 22 ಬೃಹತ್ ಉದ್ಯೋಗ ಮೇಳಗಳನ್ನು ಯಶಸ್ವಿಯಾಗಿ ಆಯೋಜಿಸಿದ್ದು, ಪ್ರತಿಯೊಂದು ಆವೃತ್ತಿಯಲ್ಲೂ ಸರಾಸರಿ 250ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸಿವೆ. ಇಲ್ಲಿಯವರೆಗೆ 66432 ಅಭ್ಯರ್ಥಿಗಳು ಶಾರ್ಟ್‍ಲಿಸ್ಟ್‍ಗೊಂಡರೆ, 40848 ಅಭ್ಯರ್ಥಿಗಳು ಸ್ಥಳದಲ್ಲಿಯೇ ಉದ್ಯೋಗದ ಆಫರ್‌ನನ್ನು ಪಡೆದುಕೊಂಡಿದ್ದಾರೆ. 


300ಕ್ಕೂ ಹೆಚ್ಚು ಕಂಪನಿಗಳ ಭಾಗವಹಿಸುವಿಕೆ 

ಈ ಬಾರಿಯ ಆಳ್ವಾಸ್ ಪ್ರಗತಿ–2026ರಲ್ಲಿ ಸುಮಾರು 300ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸುವ ನಿರೀಕ್ಷೆಯಿದ್ದು,  ಬ್ಯಾಂಕಿಂಗ್ ಮತ್ತು ಹಣಕಾಸು, ಮಾಹಿತಿ ತಂತ್ರಜ್ಞಾನ, ಉತ್ಪಾದನೆ, ಔಷಧೋದ್ಯಮ, ಮಾರಾಟ ಮತ್ತು ಚಿಲ್ಲರೆ ವ್ಯಾಪಾರ, ಆತಿಥ್ಯ, ದೂರಸಂಪರ್ಕ, ಆರೋಗ್ಯ, ಮಾಧ್ಯಮ, ನಿರ್ಮಾಣ, ಎಲೆಕ್ಟ್ರಾನಿಕ್ಸ್, ಶಿಕ್ಷಣ ಹಾಗೂ ಎನ್‍ಜಿಒ ಸೇರಿದಂತೆ ವಿವಿಧ ಕ್ಷೇತ್ರಗಳ ಪ್ರಮುಖ ಸಂಸ್ಥೆಗಳು ನೇಮಕಾತಿ ನಡೆಸಲಿವೆ.


ವೈದ್ಯಕೀಯ ಮತ್ತು ಪ್ಯಾರಾ ಮೆಡಿಕಲ್, ಎಂಜಿನಿಯರಿಂಗ್, ಕಲಾ, ವಾಣಿಜ್ಯ, ನಿರ್ವಹಣೆ, ವಿಜ್ಞಾನ, ನಸಿರ್ಂಗ್, ಐಟಿಐ, ಡಿಪ್ಲೋಮಾ, ಕೌಶಲ್ಯಾಧಾರಿತ ವೃತ್ತಿಗಳು, ಪಿಯುಸಿ, ಎಸ್‍ಎಸ್‍ಎಲ್‍ಸಿ ಹಾಗೂ ಇತರೆ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಸಾವಿರಾರು ಉದ್ಯೋಗಾವಕಾಶಗಳು ಲಭ್ಯವಿರಲಿವೆ.


ಕಡ್ಡಾಯ ಆನ್‍ಲೈನ್ ನೋಂದಣಿ

ಭಾಗವಹಿಸುವ ಕಂಪನಿಗಳ ವಿವರಗಳನ್ನು ತಿತಿತಿ.ಚಿಟvಚಿsಠಿಡಿಚಿgಚಿಣi.ಛಿom  ವೆಬ್‍ಸೈಟ್‍ನಲ್ಲಿ ನಿರಂತರವಾಗಿ ನವೀಕರಿಸಲಾಗುವುದು. ಅಭ್ಯರ್ಥಿಗಳು ಸದಾ ವೆಬ್‍ಸೈಟ್‍ಗೆ ಭೇಟಿ ನೀಡಿ ಮಾಹಿತಿಯನ್ನು ಪಡೆಯಬಹುದು.


ಉದ್ಯೋಗಾಕಾಂಕ್ಷಿಗಳಿಗೆ ಆನ್‍ಲೈನ್ ನೋಂದಣಿ ಕಡ್ಡಾಯವಾಗಿದ್ದು, ನೋಂದಣಿಯನ್ನು ತಿತಿತಿ.ಚಿಟvಚಿsಠಿಡಿಚಿgಚಿಣi.ಛಿom/ಛಿಚಿಟಿಜiಜಚಿಣe-ಡಿegisಣಡಿಚಿಣioಟಿನಲ್ಲಿ ಉಚಿತವಾಗಿ ಮಾಡಬಹುದಾಗಿದೆ. ನೇಮಕಾತಿ ಪ್ರಕ್ರಿಯೆಯನ್ನು ಸುಗಮ ಹಾಗೂ ಸಂಪೂರ್ಣ ಡಿಜಿಟಲ್ ರೂಪದಲ್ಲಿ ನಡೆಸುವ ಉದ್ದೇಶದಿಂದ ಈ ವ್ಯವಸ್ಥೆಯನ್ನು ಮಾಡಲಾಗಿದೆ. 


ಅಭ್ಯರ್ಥಿಗಳಿಗೆ ಉದ್ಯೋಗಾವಕಾಶಗಳು, ವಿವಿಧ ಹುದ್ದೆಗಳ ವಿವರ, ಅರ್ಹತೆ ಹಾಗೂ ವೃತ್ತಿ ಅವಕಾಶಗಳ ಕುರಿತು ಸಮಗ್ರ ಮಾಹಿತಿ ನೀಡುವ ಸಲುವಾಗಿ ಆಳ್ವಾಸ್‍ನ ತಜ್ಞರ ತಂಡವು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲ್ಲೂಕು ಕೇಂದ್ರಗಳಲ್ಲಿ ವಿಶೇಷ ಓರಿಯಂಟೇಷನ್ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದ್ದಾರೆ.  ಈ ಹಿನ್ನಲೆಯಲ್ಲಿ ಅಭ್ಯರ್ಥಿಗಳು  ತಕ್ಷಣ ನೋಂದಾಯಿಸಿಕೊಂಡು ಅಗತ್ಯ ಮಾಹಿತಿಯನ್ನು ಪಡೆದುಕೊಳ್ಳುವಂತೆ ಕೋರಲಾಗಿದೆ.


ವಿಶೇಷ ವ್ಯವಸ್ಥೆಗಳು

  • ಆಗಸ್ಟ್ 6ರಿಂದ ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದ ಆಗಮಿಸುವ ಅಭ್ಯರ್ಥಿಗಳಿಗೆ ಉಚಿತ ವಸತಿ ವ್ಯವಸ್ಥೆ.
  • ಐಟಿಐ ಅಭ್ಯರ್ಥಿಗಳಿಗೆ ವಿಶೇಷ ಬಸ್ ವ್ಯವಸ್ಥೆ.
  • ಎಲ್ಲಾ ಅಭ್ಯರ್ಥಿಗಳು ಕಡ್ಡಾಯವಾಗಿ ಆನ್‍ಲೈನ್ ನೋಂದಣಿ ಮಾಡಿಸಿರಬೇಕು.  
  • ಅಭ್ಯರ್ಥಿಗಳು ಆಗಸ್ಟ್ 7ರಂದು ಬೆಳಿಗ್ಗೆ 8.00 ಗಂಟೆಗೆ ವಿದ್ಯಾಗಿರಿ ಕ್ಯಾಂಪಸ್, ಮೂಡುಬಿದಿರೆಯಲ್ಲಿ ಹಾಜರಿರಬೇಕು.


ಅಭ್ಯರ್ಥಿಗಳು ತರಬೇಕಾದ ದಾಖಲೆಗಳು

  • 5–10 ಪಾಸ್‍ಪೋರ್ಟ್ ಗಾತ್ರದ ಭಾವಚಿತ್ರಗಳು.
  • ನವೀಕರಿಸಿದ ಬಯೋಡೇಟಾ/ರೆಸ್ಯೂಮ್.
  • ಎಲ್ಲಾ ಅಂಕಪಟ್ಟಿಗಳ ದೃಢೀಕೃತ ಜೆರಾಕ್ಸ್ ಪ್ರತಿಗಳು.
  • ಆನ್‍ಲೈನ್ ನೋಂದಣಿ ಸಂಖ್ಯೆ/ಐಡಿ ಸಂಖ್ಯೆ


ಹೆಚ್ಚಿನ ಮಾಹಿತಿಗಾಗಿ

ಅಭ್ಯರ್ಥಿಗಳು: 9741440490, 9611750531, 7975223865

ಕಂಪನಿಗಳ ನೋಂದಣಿಗಾಗಿ: 9731953123

ವೆಬ್‍ಸೈಟ್: www.alvaspragati.com


ಪತ್ರಿಕಾಗೋಷ್ಠಿಯಲ್ಲಿ ಡಾ. ಎಂ. ಮೋಹನ್ ಆಳ್ವ, ಅಧ್ಯಕ್ಷರು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ವಿವೇಕ್ ಆಳ್ವ, ಆಡಳಿತ ಟ್ರಸ್ಟಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ಕುಮಾರಿ ರಂಜಿತಾ ಆಚಾರ್ಯ, ಮುಖ್ಯಸ್ಥರು–ನೇಮಕಾತಿ ವಿಭಾಗ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಪ್ರಸಾದ್ ಶೆಟ್ಟಿ, ಮುಖ್ಯಸ್ಥರು, ಪತ್ರಿಕೋದ್ಯಮ ವಿಭಾಗ ಉಪಸ್ಥಿತರಿದ್ದರು.


 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top