ಮುಂಗಾರು ವೇಳಾಪಟ್ಟಿ: ಹಲವು ರೈಲುಗಳ ಸಮಯ ಪರಿಷ್ಕರಣೆ

Upayuktha
0

 



ಕರಾವಳಿ ಹಾಗೂ ಕೊಂಕಣ ಮಾರ್ಗದಲ್ಲಿ ಸಂಚರಿಸುವ ರೈಲುಗಳ ಪ್ರಯಾಣಿಕರಿಗೆ ನೈರುತ್ಯ ರೈಲ್ವೆ ಮಹತ್ವದ ಮಾಹಿತಿ ನೀಡಿದೆ. ಮುಂಗಾರು ಮಳೆಯ ಹಿನ್ನೆಲೆಯಲ್ಲಿ ಜೂನ್ 15ರಿಂದ ಅಕ್ಟೋಬರ್ 20, 2026ರವರೆಗೆ ವಿಶೇಷ ಮುಂಗಾರು ವೇಳಾಪಟ್ಟಿಯನ್ನು ಜಾರಿಗೊಳಿಸಲಾಗಿದ್ದು, ಈ ಅವಧಿಯಲ್ಲಿ ಹಲವು ಪ್ರಮುಖ ರೈಲುಗಳ ಸಂಚಾರದಲ್ಲಿ 30 ನಿಮಿಷದಿಂದ 2 ಗಂಟೆಗಳವರೆಗೆ ವಿಳಂಬ ಉಂಟಾಗುವ ಸಾಧ್ಯತೆಯಿದೆ.


ಮಳೆಗಾಲದಲ್ಲಿ ಹಳಿಗಳ ಮೇಲೆ ನೀರು ನಿಲ್ಲುವುದು, ಗುಡ್ಡ ಕುಸಿತದ ಭೀತಿ ಹಾಗೂ ಸುರಕ್ಷತಾ ಕಾರಣಗಳಿಂದ ಕೊಂಕಣ ಮಾರ್ಗದಲ್ಲಿ ರೈಲುಗಳ ವೇಗವನ್ನು ನಿಯಂತ್ರಿಸಲಾಗುತ್ತದೆ. ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಪ್ರತಿ ವರ್ಷ ಈ ವಿಶೇಷ ವೇಳಾಪಟ್ಟಿಯನ್ನು ಜಾರಿಗೊಳಿಸಲಾಗುತ್ತದೆ.


ವೇಳಾಪಟ್ಟಿ ಬದಲಾವಣೆಗೆ ಒಳಗಾಗಿರುವ ಪ್ರಮುಖ ರೈಲುಗಳಲ್ಲಿ 16595/16596 ಬೆಂಗಳೂರು–ಕಾರವಾರ ಪಂಚಗಂಗಾ ಎಕ್ಸ್‌ಪ್ರೆಸ್, 16585/16586 ಎಸ್‌ಎಂವಿಟಿ ಬೆಂಗಳೂರು–ಮುರುಡೇಶ್ವರ ಎಕ್ಸ್‌ಪ್ರೆಸ್, 16515/16516 ಯಶವಂತಪುರ–ಕಾರವಾರ ಎಕ್ಸ್‌ಪ್ರೆಸ್, 12741/12742 ವಾಸ್ಕೋ ಡ ಗಾಮ–ಪಾಟ್ನಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಹಾಗೂ 11097/11098 ಪುಣೆ–ಎರ್ನಾಕುಲಂ ಎಕ್ಸ್‌ಪ್ರೆಸ್ ಸೇರಿವೆ.


ಕಾರವಾರ–ಯಶವಂತಪುರ ಎಕ್ಸ್‌ಪ್ರೆಸ್ ಹಾಗೂ ಪಂಚಗಂಗಾ ಎಕ್ಸ್‌ಪ್ರೆಸ್ ರೈಲುಗಳು ಕೆಲವು ಭಾಗಗಳಲ್ಲಿ 2 ಗಂಟೆಗಳವರೆಗೆ ತಡವಾಗಿ ಸಂಚರಿಸಲಿವೆ. ಅಂಕೋಲಾ, ಗೋಕರ್ಣ, ಕುಮಟಾ, ಹೊನ್ನಾವರ, ಮುರುಡೇಶ್ವರ, ಭಟ್ಕಳ, ಬೈಂದೂರು, ಕುಂದಾಪುರ, ಉಡುಪಿ ಹಾಗೂ ಸೂರತ್ಕಲ್ ಭಾಗಗಳಲ್ಲಿ ರೈಲುಗಳ ವೇಗವನ್ನು ಕಡಿಮೆ ಮಾಡಲಾಗುತ್ತದೆ.


ಇನ್ನು ವಾಸ್ಕೋ ಡ ಗಾಮ–ಪಾಟ್ನಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ 30ರಿಂದ 45 ನಿಮಿಷಗಳವರೆಗೆ ವಿಳಂಬವಾಗುವ ಸಾಧ್ಯತೆ ಇದ್ದು, ಪುಣೆ–ಎರ್ನಾಕುಲಂ ಎಕ್ಸ್‌ಪ್ರೆಸ್ ಹಾಗೂ ಮತ್ಸ್ಯಗಂಧ ಎಕ್ಸ್‌ಪ್ರೆಸ್ ಕೂಡ ಸುಮಾರು 2 ಗಂಟೆಗಳವರೆಗೆ ತಡವಾಗಿ ಸಂಚರಿಸುವ ಸಾಧ್ಯತೆ ಇದೆ.


ಪ್ರಯಾಣಿಕರು ಪ್ರಯಾಣಕ್ಕೂ ಮುನ್ನ ಪರಿಷ್ಕೃತ ವೇಳಾಪಟ್ಟಿಯನ್ನು ಪರಿಶೀಲಿಸಿಕೊಳ್ಳುವಂತೆ ರೈಲ್ವೆ ಇಲಾಖೆ ಸಲಹೆ ನೀಡಿದೆ. IRCTC ವೆಬ್‌ಸೈಟ್ ಅಥವಾ NTES ಆ್ಯಪ್ ಮೂಲಕ ರೈಲುಗಳ ಆಗಮನ ಮತ್ತು ನಿರ್ಗಮನ ಸಮಯವನ್ನು ಮುಂಚಿತವಾಗಿ ತಿಳಿದುಕೊಳ್ಳುವುದು ಒಳಿತು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top