ಜೂನ್ 30ರಂದು ಬಿ.ಎನ್. ಮೂರ್ತಿ ಸ್ಮರಣ ಸಂಚಯ ‘ಧ್ಯೇಯಮೂರ್ತಿ’ ಕೃತಿ ಲೋಕಾರ್ಪಣೆ

Upayuktha
0


ಬೆಂಗಳೂರು: ವಿಶ್ವ ಹಿಂದೂ ಪರಿಷತ್ (ವಿಹಿಂಪ) ಕರ್ನಾಟಕ ಪ್ರಾಂತದ ವತಿಯಿಂದ ಪ್ರಮುಖ ಸಾಮಾಜಿಕ ಕಾರ್ಯಕರ್ತ ಶ್ರೀ ಬಿ.ಎನ್. ಮೂರ್ತಿ ಅವರ ಸ್ಮರಣ ಸಂಚಯ ‘ಧ್ಯೇಯಮೂರ್ತಿ’ ಪುಸ್ತಕದ ಲೋಕಾರ್ಪಣೆ ಸಮಾರಂಭವನ್ನು ಜೂನ್ 30ರಂದು ರಾಜಧಾನಿಯಲ್ಲಿ ಆಯೋಜಿಸಲಾಗಿದೆ.


ಬೆಂಗಳೂರಿನ ಬಸವನಗುಡಿಯ ಇನ್‌ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್ ಸಭಾಂಗಣದಲ್ಲಿ ಜೂನ್ 30, 2026ರ ಮಂಗಳವಾರ ಸಂಜೆ 6.00 ಗಂಟೆಗೆ ಈ ಕಾರ್ಯಕ್ರಮ ಜರುಗಲಿದೆ.


ಶ್ರೀ ಬೇಲಿಮಠ ಮಹಾಸಂಸ್ಥಾನದ ಪೀಠಾಧೀಶರಾದ ಪರಮಪೂಜ್ಯ ಶ್ರೀ ಚರಮೂರ್ತಿ ಶಿವರುದ್ರಸ್ವಾಮಿಗಳು ಕಾರ್ಯಕ್ರಮದ ದಿವ್ಯ ಸನ್ನಿಧಿ ವಹಿಸಿ ಆಶೀರ್ವಚನ ನೀಡಲಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಸಹ ಬೌದ್ಧಿಕ್ ಪ್ರಮುಖ್ ಶ್ರೀ ಸುಧೀರ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ.


ಸಮಾರಂಭದಲ್ಲಿ ವಿಶ್ವ ಹಿಂದೂ ಪರಿಷತ್‌ನ ಹೊಸದೆಹಲಿಯ ಕೇಂದ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಶ್ರೀ ಮಿಲಿಂದ್ ಪರಾಂಡೆ, ವಿಹಿಂಪ ಕರ್ನಾಟಕ ದಕ್ಷಿಣ ಪ್ರಾಂತದ ಅಧ್ಯಕ್ಷರಾದ ಶ್ರೀ ದೀಪಕ್ ರಾಜ್‌ಗೋಪಾಲ್ ಹಾಗೂ ಕೃತಿಯ ಲೇಖಕರು ಹಾಗೂ ಹಿರಿಯ ಪತ್ರಕರ್ತ ಶ್ರೀ ದು.ಗು. ಲಕ್ಷ್ಮಣ ಸೇರಿದಂತೆ ಹಲವು ಪ್ರಮುಖ ಗಣ್ಯರು ಉಪಸ್ಥಿತರಿರಲಿದ್ದಾರೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top