ಮುಜುಂಗಾವು: ಶ್ರೀ ಭಾರತಿ ವಿದ್ಯಾಪೀಠದಲ್ಲಿ ಸ್ವಾಗತ ಭಾರತಿ ಕಾರ್ಯಕ್ರಮ

Upayuktha
0


ಮುಜುಂಗಾವು: ಶ್ರೀ ಭಾರತಿ ವಿದ್ಯಾಪೀಠದಲ್ಲಿ 2026- 27ನೇ ಶೈಕ್ಷಣಿಕ ವರ್ಷದ ಪ್ರವೇಶೋತ್ಸವ ಕಾರ್ಯಕ್ರಮ 'ಸ್ವಾಗತ ಭಾರತಿ' ಜರಗಿತು. ಮುಖ್ಯ ಅತಿಥಿಗಳಾಗಿ ಕ್ಯಾಂಪ್ಕೋ, ಮಂಗಳೂರು ಇದರ ಉಪಾಧ್ಯಕ್ಷ ಪದ್ಮರಾಜ ಪಟ್ಟಾಜೆ ಆಗಮಿಸಿ, ಸಂಸ್ಕೃತಿ ಸಂಸ್ಕಾರಯುತ ಶಿಕ್ಷಣ ಇಂದಿನ ಅವಶ್ಯಕತೆಗಳಲ್ಲಿ ಒಂದು ಎಂದರು. ವಿದ್ಯಾಪೀಠ ಇಂತಹ ಶಿಕ್ಷಣ ನೀಡುವುದರಲ್ಲಿ ಮುಂದಿದೆ, ವಿದ್ಯಾರ್ಥಿಗಳು ಈ ಶಿಕ್ಷಣ ಪದ್ದತಿಯನ್ನು ಪಡೆದು ವಿಕಸಿತ ಭಾರತದ ಕಲ್ಪನೆಯನ್ನು ಸಾಕರಗೊಳಿಸುವಂತಾಗಲಿ ಎಂದು ಶುಭಹಾರೈಸಿದರು.

 

ಕಾರ್ಯಕ್ರಮದ ಅಧ್ಯಕ್ಷ ಸುಬ್ರಹ್ಮಣ್ಯ ಭಟ್ ಬೆಜಪ್ಪೆ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ರಕ್ಷಕ- ಶಿಕ್ಷಕ ಸಂಘದ ಅಧ್ಯಕ್ಷ  ಉದಯ ಕುಮಾರ್ ಮಾಯಿಪ್ಪಾಡಿ, ಆಡಳಿತ ಸಮಿತಿಯ ಜೊತೆ ಕಾರ್ಯದರ್ಶಿ ಬಾಲಕೃಷ್ಣ ಶರ್ಮ ಅನಂತಪುರ, ಎಡನಾಡು- ಕಣ್ಣೂರು ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಶ್ಯಾಮ ರಾಜ್ ದೊಡ್ಡಮಾಣಿ, ಮಾತೃ ಸಮಿತಿಯ ಅಧ್ಯಕ್ಷೆ ಶ್ರೀಮತಿ ದೀಪಾ ದೊಡ್ಡಮಾಣಿ, ಶಾಲಾ ಮುಖ್ಯೋಪಾಧ್ಯಾಯರಾದ ಶ್ಯಾಮ್ ಭಟ್ ದರ್ಭೆಮಾರ್ಗ, ಸಹ ಮುಖ್ಯ ಶಿಕ್ಷಕಿ ಶ್ರೀಮತಿ ಚಿತ್ರಾ ಸರಸ್ವತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಎಡನಾಡು -ಕಣ್ಣೂರು ಸೇವಾ ಸಹಕಾರಿ ಬ್ಯಾಂಕಿನ ವತಿಯಿಂದ ನೂತನ ವಿದ್ಯಾರ್ಥಿಗಳಿಗೆ ಕಲಿಕೋಪಕರಣಗಳನ್ನು ನೀಡಿ ಪ್ರೋತ್ಸಾಹಿಸಲಾಯಿತು. ವಿದ್ಯಾರ್ಥಿನಿಯರಾದ ಕುಮಾರಿ ಕನಿಹ, ಕುಮಾರಿ ಪೃಥ್ವಿ ಪ್ರಾರ್ಥನೆಯನ್ನು ಹಾಡಿ, ಶಿಕ್ಷಕಿ ಶ್ರೀಮತಿ ಶ್ರೀದೇವಿ ಸ್ವಾಗತಿಸಿ ಅಧ್ಯಾಪಕ ಹರಿ ಪ್ರಸಾದ್ ವಂದಿಸಿದರು. ಅಧ್ಯಾಪಿಕೆ ಶ್ರೀಮತಿ ವಿದ್ಯಾಲಕ್ಷ್ಮಿ ಕಾರ್ಯಕ್ರಮ ನಿರೂಪಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top