ನಡ ಸರಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿ ಸಂಘದ ಉದ್ಘಾಟನೆ

Upayuktha
0

 


ಬೆಳ್ತಂಗಡಿ: ವಿದ್ಯಾರ್ಥಿಗಳು ಭವಿಷ್ಯದ ಮತದಾರರು. ಅವರು ಆಸಕ್ತಿಯಿಂದ ಮತ್ತು ಜವಾಬ್ದಾರಿಯಿಂದ ಚುನಾವಣೆಯಲ್ಲಿ ಭಾಗವಹಿಸಬೇಕು. ನಾಯಕತ್ವದ ಗುಣವನ್ನು ಬೆಳೆಸಿಕೊಳ್ಳಬೇಕು. ಕೀಳರಿಮೆಗಿಂತ ದೊಡ್ಡ ಶತ್ರು ಯಾರೂ ಇಲ್ಲ. ಎಲ್ಲರ ಜೊತೆಗೆ ಸೌಹಾರ್ದ ಸಂಬಂಧ ಇದ್ದಾಗ ಬದುಕಿನಲ್ಲಿ ಸಾಧನೆ ಸಾಧ್ಯವಾಗುತ್ತದೆ ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕರಾದ ದಿವ್ಯ ಕೆ ಹೇಳಿದರು.


ಅವರು ಸರ್ಕಾರಿ ಪದವಿ ಪೂರ್ವ ಕಾಲೇಜು ನಡ ಇಲ್ಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಸಂಸ್ಥೆಯ ಪ್ರಾಂಶುಪಾಲರಾದ ಶ್ರೀಮತಿ ಲಿಲ್ಲಿ ಪಿವಿ ಇವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ, ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿದರು.


ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಸಂಸ್ಥೆಯ ಮಾಜಿ ಪ್ರಾಂಶುಪಾಲರಾದ ಚಂದ್ರಶೇಖರ್ ಹಾಗೂ ಕೊಯ್ಯೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಮೋಹನಗೌಡ ಉಪಸ್ಥಿತರಿದ್ದರು. ಉಪನ್ಯಾಸಕರುಗಳಾದ ಶ್ರೀಮತಿ ಸುಕನ್ಯ ಇವರು ನಿರೂಪಿಸಿದ ಈ ಕಾರ್ಯಕ್ರಮದಲ್ಲಿ ಶ್ರೀಮತಿ ವಸಂತಿ ಪಿ ಸ್ವಾಗತಿಸಿ, ಶ್ರೀಮತಿ ಶಿಲ್ಪಾ ಡಿ ಪ್ರಸ್ತಾವನೆಗೈದು, ಶ್ರೀಮತಿ ಪವಿತ್ರ ವಂದಿಸಿದರು. ಕಾಲೇಜು ವಿದ್ಯಾರ್ಥಿ ನಾಯಕನಾಗಿ ಚರಣ್ ಹಾಗೂ ಕಾಲೇಜು ಕಾರ್ಯದರ್ಶಿಯಾಗಿ ಸ್ಪೂರ್ತಿ ಆರ್ ಆಯ್ಕೆಯಾದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top