ಪುತ್ತೂರು: ರಾಷ್ಟ್ರ ಎನ್ನುವಾಗ ಅಲ್ಲಿ ನಾಗರೀಕತೆಯ ಪರಂಪರೆ ಹಾಗೂ ಸಾಂಸ್ಕೃತಿಕ ಪ್ರಕಾರಗಳು ಪ್ರಮುಖವಾಗುತ್ತದೆ. ರಾಷ್ಟ್ರೀಯ ಪ್ರಜ್ಞೆ ಎಂದರೆ ನಮ್ಮ ದೇಶದೊಳಗಿನ ಪರಿಸರ, ಸಂಸ್ಕೃತಿ ಹಾಗೂ ಎಲ್ಲಾ ಅಂಶಗಳ ಬಗೆಗೆ ಅಭಿಮಾನವನ್ನು ಮೈಗೂಡಿಸಿಕೊಳ್ಳುವುದಾಗಿದೆ. ಸ್ವಾಮಿ ವಿವೇಕಾನಂದರು ದೇಶದ ಒಳಿತಿಗಾಗಿ ಯಾರನ್ನೂ ಬೇಧ ಭಾವ ಮಾಡದೇ ಎಲ್ಲರೂ ನನ್ನವರೆಂಬ ಭಾವನೆಯನ್ನು ಬೆಳೆಸಿಕೊಳ್ಳಬೇಕು ಎಂದವರು. ರಾಷ್ಟ್ರೀಯ ಪ್ರಜ್ಞೆಯು ಸ್ವತಂತ್ರವಾದ ಪರಿಕಲ್ಪನೆಯಾಗಿದೆ. ಸುಶಿಕ್ಷಿತ ಸಮಾಜ ರೂಪುಗೊಂಡರೂ ದೇಶದ ಕುರಿತು ಅಭಿಮಾನ ಹೊಂದುವುದು ಅತ್ಯಂತ ಮುಖ್ಯ ಎಂದು ಕುವೆಂಪು ಭಾಷಾಭಾರತಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಡಾ. ಅಜಕ್ಕಳ ಗಿರೀಶ ಭಟ್ ತಿಳಿಸಿದರು.
ಇವರು ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಕೇಂದ್ರ, ವಿವೇಕಾನಂದ ಸಂಶೋಧನಾ ಕೇಂದ್ರ, ಐಕ್ಯೂಎಸಿ ಮತ್ತು ವಿವೇಕಾನಂದ ಕಾಲೇಜ್ ಆಫ್ ಫಾರ್ಮಾಸ್ಯುಟಿಕಲ್ ಸೈನ್ಸಸ್ ಇದರ ಸಹಯೋಗದಲ್ಲಿ ನಡೆದ 'ವಿವೇಕ ಸ್ಮೃತಿ' ಸರಣಿ ಉಪನ್ಯಾಸ ಕಾರ್ಯಕ್ರಮದ 29ನೆಯ ಸಂಚಿಕೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ವಿವೇಕಾನಂದ ಕಾಲೇಜ್ ಆಫ್ ಫಾರ್ಮಾಸ್ಯುಟಿಕಲ್ ಸೈನ್ಸಸ್ ಇದರ ಆಡಳಿತ ಮಂಡಳಿಯ ಸಂಚಾಲಕ ಗೋವಿಂದ ಪ್ರಕಾಶ್ ಸಾಯ ಅಧ್ಯಕ್ಷೀಯ ನುಡಿಗಳನ್ನಾಡಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.
ಕಾರ್ಯಕ್ರಮದಲ್ಲಿ ವಿವೇಕಾನಂದ ಮಹಾವಿದ್ಯಾಲಯದ (ಸ್ವಾಯತ್ತ) ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ ಭಟ್, ವಿವೇಕಾನಂದ ಫಾರ್ಮಸ್ಯುಟಿಕಲ್ ಕಾಲೇಜಿನ ಪ್ರಾಂಶುಪಾಲ ಡಾ. ಗುರುರಾಜ್.ಎಮ್ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ವಿವೇಕಾನಂದ ಸಂಶೋಧನಾ ಕೇಂದ್ರದ ನಿರ್ದೇಶಕಿ ಡಾ.ವಿಜಯಸರಸ್ವತಿ.ಬಿ ಸ್ವಾಗತಿಸಿ, ಭಾರತೀಯ ಸಂಸ್ಕೃತಿ ಮತ್ತು ಲಲಿತ ಕಲೆಗಳ ಅಧ್ಯಯನ ಕೇಂದ್ರದ ಸಂಯೋಜಕಿ ಡಾ. ವಿದ್ಯಾ ಎಸ್ ವಂದಿಸಿದರು. ಕಾಲೇಜಿನ ಕನ್ನಡ ವಿಭಾಗದ ಉಪನ್ಯಾಸಕ ಮಧು ಕುಮಾರ್ ನಿರ್ವಹಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

.jpeg)
