ನಿಟ್ಟೆ: ಇಲ್ಲಿನ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಬಿ.ಟೆಕ್ ಕೋರ್ಸ್ ಗಳಿಗೆ 2026ನೇ ಸಾಲಿನಲ್ಲಿ ಪ್ರವೇಶಾತಿ ಪಡೆದ ನೂತನ ಬ್ಯಾಚ್ ನ ಉದ್ಘಾಟನಾ ಕಾರ್ಯಕ್ರಮವು ಜೂ.29 ರಂದು ನಿಟ್ಟೆಯ ನೂತನ ಆಂಫಿಥಿಯೇಟರ್ ನಲ್ಲಿ ಜರುಗಿತು.
ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ವೈಸ್-ಚಾನ್ಸಲರ್ ಡಾ.ಎಂ.ಎಸ್.ಮೂಡಿತ್ತಾಯ ಮಾತನಾಡಿ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಜಗತ್ತಿನಲ್ಲಿ ಹೇಗೆ ಅಣಿಗೊಳ್ಳಬೇಕು ಎಂಬುದನ್ನು ವಿವರಿಸಿದರು.
ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ತಾಂತ್ರಿಕ ಶಿಕ್ಷಣ ವಿಭಾಗದ ಉಪಾಧ್ಯಕ್ಷ ಪ್ರೋ.ಡಾ. ಗೋಪಾಲ್ ಮುಗೇರಾಯ ಮಾತನಾಡಿ ನಿಟ್ಟೆ ವಿದ್ಯಾಸಂಸ್ಥೆಯ ಇತಿಹಾಸ, ಬೆಳೆದುಬಂದ ಹಾದಿಯ ಬಗೆಗೆ ನೂತನ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ವಿವರಿಸಿದರು.
ವೇದಿಕೆಯಲ್ಲಿ ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಸಚಿವ ಡಾ. ಹರ್ಷ ಹಾಲಹಳ್ಳಿ ಹಾಗೂ ಪರೀಕ್ಷಾ ನಿಯಂತ್ರಕ ಡಾ. ಪ್ರಸಾದ್ ಬಿ ಶೆಟ್ಟಿ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ವಾರ್ಷಿಕ ಮ್ಯಾಗಜಿನ್ 'ನಿದರ್ಶನ್ 2026' ಬಿಡುಗಡೆಗೊಳಿಸಲಾಯಿತು.
ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ನಿರಂಜನ್ ಎನ್ ಚಿಪ್ಳೂಣ್ಕರ್ ಸ್ವಾಗತಿಸಿ, ಪ್ರಥಮ ವರ್ಷ ಬಿಟೆಕ್ ವಿದ್ಯಾರ್ಥಿಗಳ ಸಂಯೋಜಕ ಹಾಗೂ ಸ್ಟೂಡೆಂಟ್ ಇಂಡಕ್ಷನ್ ಕಾರ್ಯಕ್ರಮದ ಸಂಯೋಜಕ ಡಾ. ಜಾಯ್ ಮಾರ್ಟಿಸ್ ವಂದಿಸಿದರು. ಎಂಸಿಎ ವಿಭಾಗದ ಸಹಪ್ರಾದ್ಯಾಪಕಿ ಪ್ರೇಮಿತಾ ಕಾಮತ್ ಕಾರ್ಯಕ್ರಮ ನಿರೂಪಿಸಿದರು.

