ಬಂಡಿತ್ತಡ್ಕ ಸರಕಾರಿ ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳಿಂದ ನೋಟ್ಸ್ ಪುಸ್ತಕ, ಬ್ಯಾಗ್ ವಿತರಣೆ

Upayuktha
0


ಕನ್ಯಾನ: ಇಲ್ಲಿನ ಬಂಡಿತ್ತಡ್ಕದ ಸರ್ಕಾರಿ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಶಾಲೆಯಲ್ಲಿ ಪ್ರಸ್ತುತ ಅಧ್ಯಯನ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್, ನೋಟ್ ಬುಕ್ ಹಾಗೂ ಬರವಣಿಗೆ ಪರಿಕರಗಳನ್ನು ವಿತರಿಸಲಾಯಿತು. ಹಾಗೆಯೇ ಈ ಹಿಂದೆ ಘೋಷಿಸಿದಂತೆ ಒಂದರಿಂದ ಆರನೇ ತರಗತಿಯವರೆಗೆ ನೂತನವಾಗಿ ಶಾಲೆಗೆ ರ್ಸೇಡೆಗೊಂಡ ವಿದ್ಯಾರ್ಥಿಗಳ ಹೆಸರಿನಲ್ಲಿ ರೂಪಾಯಿ ಒಂದು ಸಾವಿರ ಠೇವಣಿಯನ್ನು ಆಗಸ್ಟ್ 15ರ ಸ್ವಾತಂತ್ರಯೋತ್ಸವ ಸಂದರ್ಭದಲ್ಲಿ ಒದಗಿಸಿಕೊಡಲಾಗುವುದು ಎಂದು ಘೋಷಿಸಲಾಯಿತು. ಅಂತೆಯೇ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಶೈಕ್ಷಣಿಕ ಪ್ರವಾಸದ ಖರ್ಚು ವೆಚ್ಚವನ್ನು ಭರಿಸುವ ಬಗೆಗೂ ಘೋಷಿಸಲಾಯಿತು.


ಈ ಸಂದರ್ಭದಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಗೌರವಾದ್ಯಕ್ಷ ಕೃಷ್ಣಕುಮಾರ್ ಕಮ್ಮಜೆ, ಅಧ್ಯಕ್ಷ ಇಸ್ಮಾಯಿಲ್ ಕುಕ್ಕಾಜೆ, ಕನ್ಯಾನ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಅಬ್ದುಲ್ ರಹಮಾನ್, ಹಿರಿಯ ವಿದ್ಯಾರ್ಥಿಗಳಾದ ನಾಟಿ ವೈದ್ಯ ಅಬ್ಬಾಸ್ ಹಾಜಿ ಬಂಡಿತ್ತಡ್ಕ, ಕ್ರೀಡಾಪಟು ಕೆ ಟಿ ಕೃಷ್ಣರಾಜ್ ಭಟ್ ಕೊಣಲೆ, ಕನ್ಯಾನ ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಬುಶ್ರಿಯ, ಎಸ್‌ಡಿಎಂಸಿ ಉಪಾಧ್ಯಕ್ಷೆ ಭುವನೇಶ್ವರಿ, ಅಂಗನವಾಡಿ ಕಾರ್ಯಕರ್ತೆ ಶಾರದಾ ಉಪಸ್ಥಿತರಿದ್ದರು. 


ಶಾಲೆಯ ಪ್ರಭಾರ ಮುಖ್ಯಶಿಕ್ಷಕಿ ಸೆಕೀನ ಎಸ್ ಸ್ವಾಗತಿಸಿ, ಅತಿಥಿ ಶಿಕ್ಷಕಿ ವನಿತಾ ಕೆ ಎಲ್ ಕಾರ್ಯಕ್ರಮ ನಿರೂಪಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter


إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top