ಬಳ್ಳಾರಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯ 23ನೇ ಕಂತಿನ ಆರ್ಥಿಕ ನೆರವನ್ನು ಬಿಡುಗಡೆ ಮಾಡಲು ದಿನಾಂಕ ನಿಗದಿಯಾಗಿದೆ. ಮಾನ್ಯ ಪ್ರಧಾನ ಮಂತ್ರಿಗಳು 2026 ನೇ ಜೂನ್ 20 ರಂದು ಪಶ್ಚಿಮ ಬಂಗಾಳ ರಾಜ್ಯದ ತಾರಕೇಶ್ವರ್, ಹೂಗ್ಲಿಯಲ್ಲಿ ಸಂಜೆ 04 ಗಂಟೆಗೆ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ದೇಶದ ರೈತರ ಖಾತೆಗಳಿಗೆ ಅಧಿಕೃತವಾಗಿ ಹಣ ವರ್ಗಾವಣೆ ಮಾಡಲಿದ್ದಾರೆ. ಈ ವಿಶೇಷ ದಿನವನ್ನು "ಪಿ.ಎಂ. ಕಿಸಾನ್ ಉತ್ಸವ ದಿವಸ್" ಎಂದು ಆಚರಿಸಲಾಗುತ್ತಿದೆ.
ಕರ್ನಾಟಕದ ರೈತರಿಗೆ ರೂ. 830.832 ಕೋಟಿ ಅನುದಾನ:
ಈ ಯೋಜನೆಯಡಿ ಕರ್ನಾಟಕ ರಾಜ್ಯದ ಒಟ್ಟು 41,54,160 ಫಲಾನುಭವಿ ರೈತರಿಗೆ ಕೇಂದ್ರ ಸರ್ಕಾರದಿಂದ ಒಟ್ಟಾರೆ ರೂ. 830.832 ಕೋಟಿಗಳ ಆರ್ಥಿಕ ನೆರವು ನೇರ ನಗದು ವರ್ಗಾವಣೆ (DBT) ಮೂಲಕ ಜಮೆಯಾಗಲಿದೆ.
ಯೋಜನೆಯ ಹಿನ್ನೆಲೆ ಮತ್ತು ಪ್ರಯೋಜನಗಳು:
ವಾರ್ಷಿಕ ನೆರವು: ಅರ್ಹ ರೈತ ಕುಟುಂಬಗಳಿಗೆ ಕೃಷಿ ಚಟುವಟಿಕೆಗಳ ನಿರ್ವಹಣೆ ಹಾಗೂ ಉತ್ತಮ ಇಳುವರಿ ಪಡೆಯಲು ನೆರವಾಗುವಂತೆ ವಾರ್ಷಿಕವಾಗಿ ಒಟ್ಟು ರೂ. 6,000/- ಗಳ ಆರ್ಥಿಕ ಸಹಾಯ ನೀಡಲಾಗುತ್ತದೆ.
ಕಂತುಗಳ ವಿವರ: ಈ ಮೊತ್ತವನ್ನು ತಲಾ ರೂ. 2,000/- ಗಳಂತೆ ಮೂರು ಸಮಾನ ಕಂತುಗಳಲ್ಲಿ ಪ್ರತಿ ನಾಲ್ಕು ತಿಂಗಳಿಗೊಮ್ಮೆ ರೈತರ ಖಾತೆಗೆ ಜಮೆ ಮಾಡಲಾಗುತ್ತದೆ.
ಅರ್ಹತೆ: ಕರ್ನಾಟಕದಲ್ಲಿ ಫೆಬ್ರವರಿ 2019 ರಿಂದ ಈ ಯೋಜನೆ ಜಾರಿಯಲ್ಲಿದ್ದು, ದಿನಾಂಕ: 01.02.2019 ರ ಅನ್ವಯ ಸಾಗುವಳಿ ಭೂಮಿ ಹೊಂದಿರುವ ಅರ್ಹ ರೈತ ಕುಟುಂಬಗಳು (ಗಂಡ, ಹೆಂಡತಿ ಮತ್ತು ಅಪ್ರಾಪ್ತ ಮಕ್ಕಳು) ಇದರ ಪ್ರಯೋಜನ ಪಡೆಯುತ್ತಿದ್ದಾರೆ.
ಪ್ರಧಾನ ಮಂತ್ರಿಗಳ ಈ ನೇರ ನಗದು ವರ್ಗಾವಣೆ ಪ್ರಕ್ರಿಯೆಯಿಂದಾಗಿ ರಾಜ್ಯದ ಲಕ್ಷಾಂತರ ರೈತ ಕುಟುಂಬಗಳ ಕೃಷಿ ವೆಚ್ಚಕ್ಕೆ ಸಕಾಲದಲ್ಲಿ ಆರ್ಥಿಕ ಆಸರೆ ಸಿಕ್ಕಂತಾಗಲಿದೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


