ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ 2025 - 26 ರ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ರ್‍ಯಾಂಕ್ ಹಾಗೂ ಉನ್ನತ ಶ್ರೇಣಿಯನ್ನು ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸುವ ಕಾರ್ಯಕ್ರಮವು ಜೂನ್ 1 ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಅಬ್ದುಲ್ ಸಮದ್ ಎಂ ಮಾತನಾಡಿ, ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸುತ್ತಾ, ನಿಮ್ಮ ಸಾಧನೆಯ ಹಿಂದೆ ನಿಮಗೆ ಸಹಾಯಕರಾಗಿ ನಿಂತ, ಹೆತ್ತವರು, ಅಧ್ಯಾಪಕರು ಮತ್ತು ಸಂಸ್ಥೆಗೆ ಚಿರ ಋಣಿಗಳಾಗಿರಬೇಕು. ಜೀವನದಲ್ಲಿ ಪ್ರತಿಯೊಬ್ಬರಿಗೂ ಅವಕಾಶಗಳು ಲಭ್ಯವಿದ್ದು, ಅವಕಾಶಗಳನ್ನು ಬಳಸಿಕೊಂಡು ಉತ್ತಮ ಸಾಧನೆ ಗೈಯುವತ್ತ ಗಮನಹರಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ಶೈಕ್ಷಣಿಕ ಸಾಧನೆಯ ಜೊತೆಗೆ, ಸಾಂಸ್ಕೃತಿಕ ಮತ್ತು ಇತರ ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸಬೇಕು. ಯಶಸ್ಸು ಸತತ ಪರಿಶ್ರಮದಿಂದಷ್ಟೇ ಸಾಧ್ಯವಾಗಿದ್ದು, ಉತ್ತಮ ಚಾರಿತ್ರ್ಯ ಮತ್ತು ಮೌಲ್ಯಾಧಾರಿತ ನಡತೆಗಳು ನಿಮ್ಮ ಸಾಧನೆಗೆ ಪೂರಕ ಎಂದು ತಿಳಿಸಿದರು.
ವೇದಿಕೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷರಾದ ದಿವ್ಯಾ ಅನಿಲ್ ರೈ ಉಪಸ್ಥಿತರಿದ್ದು, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
2025 - 26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದಲ್ಲಿ ಅಪೂರ್ವ 595 ಅಂಕಗಳನ್ನು ಪಡೆದು ರಾಜ್ಯದಲ್ಲಿ 4ನೇ ರ್‍ಯಾಂಕ್ ಮತ್ತು ವಾಣಿಜ್ಯ ವಿಭಾಗದಲ್ಲಿ ಸಪೀದಾ 595 ಅಂಕಗಳನ್ನು ಪಡೆದು ರಾಜ್ಯದಲ್ಲಿ 6 ನೇ ರ್‍ಯಾಂಕ್, ಸೋನಿಕಾ ಕುಟಿನ್ನಾ 592 ಅಂಕಗಳನ್ನು ಪಡೆದು ರಾಜ್ಯದಲ್ಲಿ 9 ನೇ ರ್‍ಯಾಂಕ್, ದೀಪ್ತಿ ಕೆ. ಎಸ್ 591 ಅಂಕಗಳನ್ನು ಪಡೆದು ರಾಜ್ಯದಲ್ಲಿ 10 ನೇ ರ್‍ಯಾಂಕ್. ಈ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಹಾಗೂ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ 214 ವಿದ್ಯಾರ್ಥಿಗಳನ್ನು ಸ್ಮರಣಿಕೆ ನೀಡಿ ಅಭಿನಂದಿಸಲಾಯಿತು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


