ಬೆಂಗಳೂರು ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ: ತೇಜಸ್ವಿ ಸೂರ್ಯ

Upayuktha
0


ಬೆಂಗಳೂರು: ದೇಶದಲ್ಲೇ ಉತ್ತಮ ಹವಾಮಾನ ಹೊಂದಿರುವ ಉದ್ಯಾನ ನಗರಿ ಬೆಂಗಳೂರನ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂದು ಲೋಕಸಭಾ ಸದಸ್ಯ ತೇಜಸ್ವಿ ಸೂರ್ಯ ಕರೆ ನೀಡಿದ್ದಾರೆ.


ಬಿಎನ್ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ವಿಕಸನ ಪ್ರತಿಷ್ಠಾನದ ಸಂಯುಕ್ತ ಆಶ್ರಯದಲ್ಲಿ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ಬೆಂಗಳೂರು ಹೆರಿಟೇಜ್ ಹಬ್ಬಕ್ಕೆ ಚಾಲನೆ ನೀಡಿ ಮಾತನಾಡಿದರು.


ಗಾಳಿ, ಮಳೆ, ಬಿಸಿಲು ಸೇರಿದಂತೆ ಎಲ್ಲಾ ರೀತಿಯ ಹವಾಮಾನ ಸಮತೋಲನವಿರುವ ಬೆಂಗಳೂರು ನಗರ ನಮ್ಮ ಹೆಮ್ಮೆಯ ಊರು. ಮುಂದಿನ ಪೀಳಿಗೆಗೆ ಶುದ್ಧ ಪರಿಸರ ಉಳಿಸಿ ಹೋಗುವುದು ನಮ್ಮ ಜವಾಬ್ದಾರಿ ಎಂದು ಅಭಿಪ್ರಾಯಪಟ್ಟರು.


ಪರಿಸರ ಮತ್ತು ಆರೋಗ್ಯ ಜಾಗೃತಿ ವಿಷಯದಲ್ಲಿ ಬಿ ಎನ್ ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಂಸ್ಥೆಯ ಕಾಳಜಿಗೆ ತೇಜಸ್ವಿ ಸೂರ್ಯ ಮೆಚ್ಚುಗೆ ವ್ಯಕ್ತಪಡಿಸಿದರು.


ಶಾಸಕರಾದ ಉದಯ ಗರುಡಾಚಾರ, ಟಿ ಎ ಶರವಣ, ಹಿರಿಯ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್, ಕರ್ನಾಟಕ ಕ್ಯಾನ್ಸರ್ ಸೊಸೈಟಿ ಅಧ್ಯಕ್ಷ ಡಾ. ಸಿ ಎ ಕಿಶೋರ್, ಗರುಡ ಪ್ರತಿಷ್ಠಾನದ ಅಧ್ಯಕ್ಷೆ ಮೇದಿನಿ ಗರುಡಾಚಾರ, ಬಿ ಎನ್ ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಂಸ್ಥೆಯ ಅಧ್ಯಕ್ಷ ನಾರಾಯಣ ರಾವ್ ಮಾನೆ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.


ಮ್ಯಾರಥಾನ್ ಓಟ, ಯೋಗ ಪ್ರದರ್ಶನ, ಮಲ್ಲಕಂಬ, ಸೈಕ್ಲಿಂಗ್ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಬಿಎನ್‌ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸೇರಿದಂತೆ ಹಲವು ಶಿಕ್ಷಣ ಸಂಸ್ಥೆಗಳ ಸಾವಿರಾರು ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top