ಪುತ್ತೂರು: ವಿವೇಕಾನಂದ ಕಾಲೇಜು ಕ್ಯಾಂಪಸ್‌ಗೆ ಸಂಪರ್ಕ ಕಲ್ಪಿಸುವ ರೈಲ್ವೇ ಸಂಕದ ರಸ್ತೆಯು ತೀರಾ ಹದಗೆಟ್ಟಿದ್ದು, ಇದನ್ನು ಕೂಡಲೇ ದುರಸ್ತಿಗೊಳಿಸಿ ಡಾಮರೀಕರಣ ಮಾಡಿಕೊಡುವಂತೆ ವಿವೇಕಾನಂದ ವಿದ್ಯಾವರ್ಧಕ ಸಂಘವು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಅಧಿಕೃತ ಪತ್ರದ ಮೂಲಕ ಮನವಿ ಮಾಡಿದೆ.
ಸಂಘದ ಪ್ರಮುಖರಾದ ಡಾ. ಕೆ.ಎಂ. ಕೃಷ್ಣ ಭಟ್ ಅವರು ಈ ಕುರಿತು ಸಂಸದರಿಗೆ ಪತ್ರ ಬರೆದಿದ್ದು, ರಸ್ತೆಯ ಪ್ರಸ್ತುತ ದುಃಸ್ಥಿತಿಯ ಬಗ್ಗೆ ಗಮನ ಸೆಳೆದಿದ್ದಾರೆ.
ಹದಗೆಟ್ಟ ರಸ್ತೆ- ದೊಡ್ಡ ಗುಂಡಿಗಳು: ವಿವೇಕಾನಂದ ವಿದ್ಯಾವರ್ಧಕ ಸಂಘದ ವಿವಿಧ ಶಿಕ್ಷಣ ಸಂಸ್ಥೆಗಳಿರುವ ಈ ಪ್ರಮುಖ ಕ್ಯಾಂಪಸ್‌ಗೆ ಸಂಪರ್ಕ ಕಲ್ಪಿಸುವ ರೈಲ್ವೇ ಸಂಕದ ರಸ್ತೆಯು ಸಂಪೂರ್ಣವಾಗಿ ಹದಗೆಟ್ಟಿದ್ದು, ಹಲವೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿವೆ. ಪ್ರತಿದಿನ ಸಾವಿರಾರು ವಿದ್ಯಾರ್ಥಿಗಳು, ಶಿಕ್ಷಕರು, ಸಿಬ್ಬಂದಿ ವರ್ಗ ಹಾಗೂ ಸಾರ್ವಜನಿಕರು ಇದೇ ರಸ್ತೆಯನ್ನು ಅವಲಂಬಿಸಿದ್ದು, ರಸ್ತೆ ಅವಸ್ಥೆಯಿಂದಾಗಿ ಸುಗಮ ಸಂಚಾರಕ್ಕೆ ತೀವ್ರ ಸಂಕಷ್ಟ ಎದುರಾಗಿದೆ.
ಹೆಚ್ಚಿದ ಅಪಘಾತದ ಭೀತಿ: ಪ್ರಸ್ತುತ ಮಳೆಗಾಲವಾಗಿರುವುದರಿಂದ ರಸ್ತೆಯ ಗುಂಡಿಗಳಲ್ಲಿ ನೀರು ತುಂಬಿ ನಿಲ್ಲುತ್ತಿದ್ದು, ವಾಹನ ಸವಾರರು ಅಪಘಾತಕ್ಕೀಡಾಗುವ ಸಂಭವ ಹೆಚ್ಚಾಗಿದೆ. ಶಾಲಾ-ಕಾಲೇಜು ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಈ ರಸ್ತೆಯನ್ನು ತುರ್ತಾಗಿ ದುರಸ್ತಿ ಮಾಡಬೇಕಾದ ಅಗತ್ಯವಿದೆ.
ಶೀಘ್ರ ಕ್ರಮಕ್ಕೆ ಆಗ್ರಹ: ರಸ್ತೆಯ ಗುಂಡಿಗಳನ್ನು ತಕ್ಷಣವೇ ಮುಚ್ಚಿ, ಇಡೀ ರಸ್ತೆಗೆ ಸಂಪೂರ್ಣವಾಗಿ ಡಾಮರೀಕರಣ ಮಾಡುವ ಮೂಲಕ ಸುಗಮ ಮತ್ತು ಸುರಕ್ಷಿತ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಸಂಸದರನ್ನು ವಿನಂತಿಸಲಾಗಿದೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


