ಡಾ. ಎಚ್.ಜಿ. ಶ್ರೀಧರ್ ಅವರಿಗೆ ಶಿಷ್ಯವೃಂದ, ತಾಲೂಕು ಕಸಾಪದಿಂದ ಸಾರ್ವಜನಿಕ ಸನ್ಮಾನ
ಪುತ್ತೂರು: ವಿವೇಕಾನಂದ ಕಾಲೇಜಿನ ನಿವೃತ್ತ ಪರೀಕ್ಷಾಂಗ ಕುಲಸಚಿವ ಡಾ.ಎಚ್.ಜಿ. ಶ್ರೀಧರ ಅವರಿಗೆ ಅವರ ಶಿಷ್ಯವೃಂದ ಹಾಗೂ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ‘ಶ್ರೀಧರಾಭಿವಂದನ’ ಸಾರ್ವಜನಿಕ ಸನ್ಮಾನ ಕಾರ್ಯಕ್ರಮ ಜೂನ್ 7ರಂದು ಬ್ಲಡ್ ಬ್ಯಾಂಕ್ ಬಳಿಯ ಅನುರಾಗ ವಠಾರದಲ್ಲಿ ನಡೆಯಲಿದೆ.
ಬೆಳಿಗ್ಗೆ 10 ಗಂಟೆಗೆ ಕಾಯಕ್ರಮದ ಉದ್ಘಾಟನೆ ನಡೆಯಲಿದೆ. ಕೋಲಾರದಲ್ಲಿರುವ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ನಿಕಟಪೂರ್ವ ಕುಲಪತಿ ಡಾ.ನಿರಂಜನ ವಾನಳ್ಳಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮುಂಬೈ ವಿಶ್ವವಿದ್ಯಾಲಯದ ವಿಶ್ರಾಂತ ಕನ್ನಡ ಪ್ರಾಧ್ಯಾಪಕ ಡಾ.ತಾಳ್ತಜೆ ವಸಂತ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್, ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಗೌರವ ಕೋಶಾಧ್ಯಕ್ಷ ಬಿ.ಐತಪ್ಪ ನಾಯ್ಕ್, ಕರ್ನಾಟಕ ಸಂಘದ ಅಧ್ಯಕ್ಷ ಬಿ.ಪುರಂದರ ಭಟ್ ಉಪಸ್ಥಿತರಿರಲಿದ್ದಾರೆ.
ಉದ್ಘಾಟನಾ ಸಮಾರಂಭದ ಬಳಿಕ ಡಾ.ಎಚ್.ಜಿ.ಶ್ರೀಧರ ಅವರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 2ಕ್ಕೆ ನಡೆಯುವ ಅಭಿವಂದನಾ ಕಾರ್ಯಕ್ರಮದಲ್ಲಿ ವಿವೇಕಾನಂದ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲ ಡಾ. ಎಚ್. ಮಾಧವ ಭಟ್ ಅಭಿನಂದನಾ ನುಡಿಗಳನ್ನು ಆಡಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಸಾರ್ವಜನಿಕರಿಗೆ ಡಾ. ಎಚ್.ಜಿ. ಶ್ರೀಧರ್ ಅವರನ್ನು ಸನ್ಮಾನಿಸಲು ಅವಕಾಶವಿದೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


