ಹೊಸನಗರ: ಭಾರತದಂತಹ ಬೃಹತ್ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಅತಿಹೆಚ್ಚು ಅವಧಿಗೆ ಪ್ರಧಾನಿಯಾಗಿ ದಾಖಲೆ ನಿರ್ಮಿಸಿರುವ ನರೇಂದ್ರ ಮೋದಿಯವರ ಸಾಧನೆ ಅನುಪಮವಾದದ್ದು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಶ್ಲಾಘಿಸಿದ್ದಾರೆ. ಪ್ರಧಾನಿ ಮೋದಿಯವರ ಸುದೀರ್ಘ ಹಾಗೂ ಯಶಸ್ವಿ ನಾಯಕತ್ವವನ್ನು ಶ್ಲಾಘಿಸಿ ಅವರು ಅಭಿನಂದನಾ ಸಂದೇಶ ಸಂದೇಶ ನೀಡಿದ್ದಾರೆ.
ಈ ಕುರಿತು ಮಾತನಾಡಿರುವ ಶ್ರೀಗಳು, "ಭಾರತದಂತಹ ಪ್ರಜಾಪ್ರಭುತ್ವ ದೇಶದಲ್ಲಿ ಪ್ರಧಾನಿ ಹುದ್ದೆ ಅಲಂಕರಿಸುವುದೇ ಒಂದು ದೊಡ್ಡ ಸಾಧನೆ. ಅಂತಹದರಲ್ಲಿ ಸುದೀರ್ಘ ಅವಧಿಗೆ ಪ್ರಧಾನಿಯಾಗಿ ದೇಶವನ್ನು ಮುನ್ನಡೆಸಿ ದಾಖಲೆ ಬರೆದಿರುವುದು ಸಾಮಾನ್ಯ ವಿಷಯವಲ್ಲ. ಅನೇಕ ಜನಪರ ಕಾರ್ಯಕ್ರಮಗಳ ಮೂಲಕ ದೇಶವನ್ನು ಸರಿಯಾದ ದಿಕ್ಕಿನಲ್ಲಿ ಕೊಂಡೊಯ್ಯುತ್ತಿರುವ ಪ್ರಧಾನಿಯವರ ಕಾರ್ಯವೈಖರಿ ನಿಜಕ್ಕೂ ಶ್ಲಾಘನೀಯ" ಎಂದು ಕೊಂಡಾಡಿದ್ದಾರೆ.
ದೇವತಾ ಸಾನ್ನಿಧ್ಯದಲ್ಲಿ ವಿಶೇಷ ಪ್ರಾರ್ಥನೆ: "ದೇಶಕ್ಕೆ ಇನ್ನಷ್ಟು ಕಾಲ ಇನ್ನೂ ಹೆಚ್ಚಿನ ಸೇವೆ ಸಲ್ಲಿಸುವ ಶಕ್ತಿ ಮತ್ತು ಆರೋಗ್ಯವನ್ನು ಭಗವಂತನು ಅವರಿಗೆ ಕರುಣಿಸಲಿ ಎಂದು ಶ್ರೀಕರಾರ್ಚಿತ ದೇವತಾ ಸಾನ್ನಿಧ್ಯದಲ್ಲಿ ವಿಶೇಷವಾಗಿ ಪ್ರಾರ್ಥಿಸುತ್ತೇವೆ" ಎಂದು ಶ್ರೀಗಳು ತಿಳಿಸಿದ್ದಾರೆ.
ಇದೇ ವೇಳೆ ದೇಶದ ಭವಿಷ್ಯದ ನಾಯಕತ್ವದ ಕುರಿತು ಆಶಯ ವ್ಯಕ್ತಪಡಿಸಿದ ಶ್ರೀಗಳು, "ಮುಂದಿನ ದಿನಗಳಲ್ಲೂ ಭಾರತವನ್ನು ಮುನ್ನಡೆಸುವ ನಾಯಕರು ನರೇಂದ್ರ ಮೋದಿಯವರಂತೆಯೇ ದಕ್ಷರೂ, ಸಮರ್ಥರೂ ಆಗಿ ಬರಲಿ" ಎಂದು ಆಶಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


