ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಹಾಗೂ ವಿವೇಕಾನಂದ ಪದವಿಪೂರ್ವ ವಿದ್ಯಾಲಯದಲ್ಲಿ ಮಂಗಳೂರು ರಾಮಕೃಷ್ಣ ಮಿಷನ್ ನ ಸರಣಿ ಉಪನ್ಯಾಸ ಮಾಲಿಕೆ "ವಿವೇಕ ಜಾಗೃತಿ" ಉಪನ್ಯಾಸಗಳು
ಮಂಗಳೂರು: ಮಂಗಳೂರು ರಾಮಕೃಷ್ಣ ಮಿಷನ್‌ನ ವತಿಯಿಂದ ನಡೆಯುತ್ತಿರುವ "ವಿವೇಕ ಜಾಗೃತಿ" ಸರಣಿ ಉಪನ್ಯಾಸ ಮಾಲಿಕೆಯ ಪ್ರಯುಕ್ತ ಬಳ್ಳಾರಿಯ ರಾಮಕೃಷ್ಣ ಮಿಷನ್‌ನ ಮುಖ್ಯಸ್ಥರಾದ ಸ್ವಾಮಿ ಮಂಗಳನಾಥನಂದಜಿ 15 ಜೂನ್ 2026 ರ ಸೋಮವಾರದಂದು ಪುತ್ತೂರಿಗೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಪುತ್ತೂರಿನ ವಿವೇಕಾನಂದ ವಿದ್ಯಾಸಂಸ್ಥೆಗಳಲ್ಲಿ ವಿಶೇಷ ಉಪನ್ಯಾಸಗಳು ನಡೆಯಲಿವೆ.
ಸ್ವಾಮೀಜಿಯವರ ಮೊದಲ ಉಪನ್ಯಾಸವು ಪುತ್ತೂರಿನ ನೆಹರು ನಗರದಲ್ಲಿರುವ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಸುಜ್ಞಾನ ದೀಪಿಕಾ ಸಭಾಂಗಣದಲ್ಲಿ ಬೆಳಗ್ಗೆ 10 ಗಂಟೆಗೆ ಸರಿಯಾಗಿ ನಡೆಯಲಿದ್ದು, "Character First, Career Next - ಕಾನೂನು ವಿದ್ಯಾರ್ಥಿಗಳಿಗೆ ಸ್ವಾಮಿ ವಿವೇಕಾನಂದರ ಸಂದೇಶ" ಎಂಬ ವಿಷಯದ ಕುರಿತು ಮಾತನಾಡಲಿದ್ದಾರೆ. ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಆಡಳಿತ ಮಂಡಳಿಯ ಸಂಚಾಲಕರಾದ ವಿಜಯನಾರಾಯಣ ಕೆ. ಎಮ್. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾರತೀಯ ಸೇನೆಯ ನಿವೃತ್ತ ಯೋಧ ಹಾಗೂ ಮಂಗಳೂರು ರಾಮಕೃಷ್ಣ ಮಿಷನ್‌ನ ಹಿರಿಯ ಸ್ವಯಂಸೇವಕ ಬೆಳ್ಳಾಲ ಗೋಪಿನಾಥ್ ರಾವ್, ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಕಾನೂನು ಅಧ್ಯಯನ ವಿಭಾಗದ ನಿರ್ದೇಶಕರಾದ ಡಾ. ಬಿ. ಕೆ. ರವೀಂದ್ರ, ಪ್ರಾಂಶುಪಾಲರಾದ ಡಾ. ಅಕ್ಷತಾ ಎ. ಪಿ. ಉಪಸ್ಥಿತರಿರಲಿದ್ದಾರೆ. ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಈ ಅವಧಿಯಲ್ಲಿ ಭಾಗವಹಿಸಲಿದ್ದಾರೆ.
ಪುತ್ತೂರಿನ ನೆಹರು ನಗರದ ವಿವೇಕಾನಂದ ಆವರಣದಲ್ಲಿರುವ ವಿವೇಕಾನಂದ ಪದವಿಪೂರ್ವ ವಿದ್ಯಾಲಯದ ವೈದೇಹಿ ಸಭಾಂಗಣದಲ್ಲಿ ಮಧ್ಯಾಹ್ನ 2.15 ಕ್ಕೆ ಸ್ವಾಮೀಜಿಯವರ ಎರಡನೇ ಉಪನ್ಯಾಸ ನಡೆಯಲಿದ್ದು "ಶಕ್ತಿ, ಶ್ರದ್ಧೆ ಮತ್ತು ಸಾಧನೆ - ಯುವಕರಿಗೆ ಸ್ವಾಮಿ ವಿವೇಕಾನಂದರ ಸಂದೇಶ" ಎಂಬ ವಿಷಯದ ಕುರಿತು ಮಾತನಾಡಲಿದ್ದಾರೆ. ವಿವೇಕಾನಂದ ಪದವಿಪೂರ್ವ ವಿದ್ಯಾಲಯದ ಆಡಳಿತ ಮಂಡಳಿಯ ಅಧ್ಯಕ್ಷರಾದ ರವೀಂದ್ರ ಪಿ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಭಾರತೀಯ ಸೇನೆಯ ನಿವೃತ್ತ ಯೋಧ ಹಾಗೂ ಮಂಗಳೂರು ರಾಮಕೃಷ್ಣ ಮಿಷನ್‌ನ ಹಿರಿಯ ಸ್ವಯಂಸೇವಕ ಬೆಳ್ಳಾಲ ಗೋಪಿನಾಥ್ ರಾವ್, ವಿವೇಕಾನಂದ ಪದವಿಪೂರ್ವ ವಿದ್ಯಾಲಯದ ಪ್ರಾಂಶುಪಾಲರಾದ ದೇವಿಚರಣ್ ರೈ ಎಮ್. ಉಪಸ್ಥಿತರಿರಲಿದ್ದಾರೆ. ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಈ ಅವಧಿಯಲ್ಲಿ ಭಾಗವಹಿಸಲಿದ್ದಾರೆ.
ಎರಡೂ ಕಾರ್ಯಕ್ರಮಗಳಲ್ಲಿ ವಿವೇಕಾನಂದ ವಿದ್ಯಾಸಂಸ್ಥೆಗಳ ಸುಮಾರು 500 ಕ್ಕೂ ಹೆಚ್ಚು ಕಾನೂನು ವಿದ್ಯಾರ್ಥಿಗಳು ಹಾಗೂ ಪದವಿಪೂರ್ವ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


