ಉಡುಪಿ ಶ್ರೀ ಕೃಷ್ಣ ಮಠಕ್ಕೆ ರಿಲಯನ್ಸ್ ಸಂಸ್ಥೆಯ ಅನಂತ್ ಅಂಬಾನಿ ಭೇಟಿ: ವಿಶೇಷ ಪೂಜೆ

Upayuktha
0



ಉಡುಪಿ: ಭಾರತದ ಪ್ರಮುಖ ಉದ್ಯಮ ಸಂಸ್ಥೆಯಾದ ರಿಲಯನ್ಸ್ ಇಂಡಸ್ಟ್ರೀಸ್‌ನ ಪ್ರಮುಖರಾದ ಅನಂತ್ ಅಂಬಾನಿ ಅವರು ಉಡುಪಿಯ ಐತಿಹಾಸಿಕ ಹಾಗೂ ಜಗತ್ಪ್ರಸಿದ್ಧ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.


ಶ್ರೀ ಕೃಷ್ಣನ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಅನಂತ್ ಅಂಬಾನಿ ಅವರಿಗೆ ಮಠದ ವತಿಯಿಂದ ಆತ್ಮೀಯ ಸ್ವಾಗತ ಕೋರಲಾಯಿತು. ಬಳಿಕ ಅವರು ಪ್ರಸ್ತುತ ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರನ್ನು (ಶಿರೂರು ಮಠ) ಭೇಟಿ ಮಾಡಿ ಆಶೀರ್ವಾದ ಪಡೆದರು. ಶ್ರೀಗಳು ಅನಂತ್ ಅಂಬಾನಿ ಅವರಿಗೆ ಫಲ ಮಂತ್ರಾಕ್ಷತೆ ನೀಡಿ ಹರಸಿದರು.


ಗಣ್ಯರ ಉಪಸ್ಥಿತಿ: ಈ ಭಕ್ತಿಪೂರ್ವಕ ಭೇಟಿಯ ಸಂದರ್ಭದಲ್ಲಿ ಶಿರೂರು ಮಠದ ದಿವಾನರಾದ ಉದಯ ಕುಮಾರ್ ಸರಳತ್ತಾಯ ಹಾಗೂ ಪಂಡಿತ್ ಚಂದ್ರಶೇಖರ ಶರ್ಮ ಉಪಸ್ಥಿತರಿದ್ದರು.


ಅಲ್ಲದೆ, ಕರ್ನಾಟಕದ ರಿಲಯನ್ಸ್ ಜಿಯೋ ವ್ಯವಸ್ಥಾಪಕರಾದ ಧನಂಜಯ ಆರ್., ಪ್ರಮುಖರಾದ ಶಿವನಂದನ ಯು.ಎಸ್., ಮಾಧವ ಶಾನುಭಾಗ್, ಜಯಪ್ರಕಾಶ್ ಶೆಟ್ಟಿ ಹಾಗೂ ಮುಂಬೈನ ಖ್ಯಾತ ಉದ್ಯಮಿ ಉಮೇಶ್ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಈ ಸಂದರ್ಭದಲ್ಲಿ ಭಾಗವಹಿಸಿದ್ದರು.


ಅನಂತ್ ಅಂಬಾನಿ ಅವರ ಈ ಭೇಟಿಯು ಮಠದ ಭಕ್ತಾದಿಗಳು ಹಾಗೂ ಸಾರ್ವಜನಿಕರಲ್ಲಿ ವಿಶೇಷ ಗಮನ ಸೆಳೆಯಿತು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top