ರಸ್ತೆ ಅಗಲೀಕರಣ: ಶಾಸಕ ಕಾಮತ್ ನೇತೃತ್ವದಲ್ಲಿ ಅಧಿಕಾರಿಗಳ ವಿಶೇಷ ಸಭೆ

Upayuktha
0



ಮಂಗಳೂರು: ನಗರದ ಕೊಡಿಯಾಲ್ ಬೈಲ್ ನಲ್ಲಿರುವ ಕುದ್ರೋಳಿ ಶ್ರೀ ಭಗವತಿ ದೇವಸ್ಥಾನದಿಂದ ಕಟ್ಟೆಮಾರುವರೆಗೆ ರಸ್ತೆ ಅಗಲೀಕರಣ ನಡೆಯಬೇಕಿರುವ ಕುರಿತು ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಪಾಲಿಕೆಯ ಹಿರಿಯ ಅಧಿಕಾರಿಗಳ ವಿಶೇಷ ಸಭೆಯು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಡೆಯಿತು.


ಇಲ್ಲಿನ ರಸ್ತೆ ಅಗಲೀಕರಣವು ಸ್ಥಳೀಯ ನಾಗರಿಕರ ಹಲವಾರು ವರ್ಷಗಳ ಬೇಡಿಕೆಯಾಗಿದೆ. ಈ ಬಗ್ಗೆ ಹಿಂದಿನ ಹಲವು ಜನಪ್ರತಿನಿಧಿಗಳು ಪ್ರಯತ್ನಿಸಿದರೂ ಯಶಸ್ವಿಯಾಗಿರಲಿಲ್ಲ. ರಸ್ತೆಗಳು ಅಗಲವಾದಲ್ಲಿ ಸುತ್ತಮುತ್ತಲಿನ ಎಲ್ಲಾ ಸಾರ್ವಜನಿಕರಿಗೆ ಉಪಯೋಗವಾಗುತ್ತದೆ. ಬೆಳೆಯುತ್ತಿರುವ ನಗರ, ಇಲ್ಲಿಗೆ ಆಗಮಿಸುವ ಭಕ್ತರ ಸಹಿತ ಸಾರ್ವಜನಿಕರ ಹಿತದೃಷ್ಟಿಯಿಂದ ಈ ಅಗಲೀಕರಣ ಅನಿವಾರ್ಯವಾಗಿದ್ದು ಟಿ.ಡಿ.ಆರ್ ಮೂಲಕ ಪ್ರಕ್ರಿಯೆ ಪೂರ್ಣಗೊಳಿಸುವಂತೆ ನಾವು ಮಾಡಿದ ಮನವಿಗೆ ಭಗವತಿ ದೇವಸ್ಥಾನದ ಆಡಳಿತ ಸಮಿತಿಯು ಸಕಾರಾತ್ಮಕವಾಗಿ ಸ್ಪಂದಿಸಿರುವುದಕ್ಕೆ ವಿಶೇಷ ಧನ್ಯವಾದಗಳು. ನಿಯಮಗಳನುಸಾರ ಟಿಡಿಆರ್ ಸಹಿತ ಯಾವುದೇ ರೀತಿಯ ಗೊಂದಲಕ್ಕೆ ಆಸ್ಪದವಿಲ್ಲದಂತೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯನಿರ್ವಹಿಸಲು ಶಾಸಕರು ಅಧಿಕಾರಿಗಳಿಗೆ ಸೂಚನೆ ನೀಡಿದರು.


ಈ ಸಂದರ್ಭದಲ್ಲಿ ಪಾಲಿಕೆ ಆಯುಕ್ತರಾದ ರವಿಚಂದ್ರ ನಾಯಕ್, ಉಪ ಆಯುಕ್ತರಾದ ನರೇಶ್ ಶೆಣೈ, ನಿಕಟ ಪೂರ್ವ ಪಾಲಿಕೆ ಸದಸ್ಯರಾದ ಲೀಲಾವತಿ ಪ್ರಕಾಶ್, ಕಾವ್ಯ ನಟರಾಜ್ ಆಳ್ವ, ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷರಾದ ಗಣೇಶ್ ಕುಂಟಲ್ಪಾಡಿ, ಆಡಳಿತ ಮೊಕ್ತೇಸರರಾದ ವಿಶ್ವನಾಥ್ ಮಂಕಿಸ್ಟ್ಯಾಂಡ್, ಪ್ರಧಾನ ಕಾರ್ಯದರ್ಶಿಗಳಾದ ಸುಧೀರ್, ಕೋಶಾಧಿಕಾರಿಗಳಾದ ಲೋಕೇಶ್ ಬೋಳಾರ್, ಮೊಕ್ತೇಸರರಾದ ಸುಜನ್ ದಾಸ್ ಕುಡುಪು ಹಾಗೂ ರವೀಂದ್ರ ಕೆ, ಉಪಾಧ್ಯಕ್ಷರಾದ ಉದಯ ಕುಮಾರ್ ಕುಡುಪು, ಮಹಿಳಾ ಸಮಿತಿಯ ಜಾಸ್ಮಿನ್ ಸುಜನ್ ದಾಸ್, ನಗರ ಯೋಜನಾಧಿಕಾರಿ ಶರತ್ ಗೌಡ, ಸಹಾಯಕ ನಗರ ಯೋಜನಾಧಿಕಾರಿ ಗುರುಪ್ರಸಾದ್, ಎಕ್ಸಿಕ್ಯೂಟಿವ್ ಇಂಜಿನಿಯರ್ ನಾಗರಾಜ್, ಪುನೀತ್ ಶಿವಲಿಂಗಯ್ಯ, ಸಹನಾ, ಚಿನ್ಮಯಿ ಗೋಪಾಲ್ ಹಾಗೂ ಶಿವಕುಮಾರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top