ಎಸ್.ಡಿ.ಎಂ. ಶಿಕ್ಷಣ ಕಾಲೇಜು ಉಜಿರೆ: ಶಿಕ್ಷಣ ಕ್ಷೇತ್ರದಲ್ಲಿ ಸಂಶೋಧನಾ ವಿಧಾನ - ಉಪನ್ಯಾಸ ಕಾರ್ಯಕ್ರಮ

Upayuktha
0

 


ಉಜಿರೆ: ಶ್ರೀ ಧ. ಮಂ. ಬಿ.ಎಡ್. ಮತ್ತು ಡಿ.ಎಡ್. ಕಾಲೇಜಿನಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಂಶೋಧನಾ ವಿಧಾನದ ಕುರಿತು ಉಪನ್ಯಾಸ ಕಾರ್ಯಕ್ರಮವು ಇಂದು ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಎಸ್.ಡಿ.ಎಂ. ಕಾಲೇಜಿನ ಬಿ. ವೋಕ್ ವಿಭಾಗದ ಸಹಪ್ರಾಧ್ಯಾಪಕ                     ಡಾ. ಶಶಾಂಕ್ ಬಿ ಎಸ್ ಮಾತನಾಡಿ ಸಂಶೋಧನೆ ಎಂಬುದು ನಿರಂತರವಾದ ಪ್ರಕ್ರಿಯೆ.  ನಮ್ಮ ಜ್ಞಾನವನ್ನು ವಿಸ್ತರಿಸಿಕೊಳ್ಳಲು ಸಂಶೋಧನೆಯು ಸಹಾಯಕವಾಗಿದೆ.  ಸಂಶೋಧನೆಯಲ್ಲಿ ಮುಖ್ಯವಾಗಿ ಗುಣಾತ್ಮಕ ಹಾಗೂ ಪರಿಮಾಣಾತ್ಮಕವಾಗಿ ಅಧ್ಯಯನವನ್ನು ಮಾಡಲಾಗುತ್ತದೆ.  ಸಂಶೋಧನೆಯನ್ನು ಕ್ರಮಬದ್ಧವಾಗಿ ಕೈಗೊಳ್ಳಲು ಬಳಸುವ ವೈಜ್ಞಾನಿಕ ಪ್ರಕ್ರಿಯೆ ಮತ್ತು ತಂತ್ರಗಳೇ ಸಂಶೋಧನಾ ವಿಧಾನಗಳು. ನಮ್ಮ ಅಧ್ಯಯನದ ಗುರಿಉದ್ದೇಶಗಳನ್ನು ಸಾಧಿಸಲು ಮತು ಸಂಶೋಧನೆಗೆ ಅನುಗುಣವಾದ ದತ್ತಾಂಶವನ್ನು ಸಂಗ್ರಹಿಸಿ ವಿಶ್ಲೇಷಣೆ ಮಾಡಲಾಗುತ್ತದೆ ಹಾಗೂ ವಿದ್ಯಾರ್ಥಿಗಳಲ್ಲಿ ವಿಮರ್ಶಾತ್ಮಕ ಹಾಗೂ ತಾರ್ಕಿಕ ಚಿಂತನೆಯನ್ನು ಬೆಳೆಸುವುದರೊಂದಿಗೆ ವಾಸ್ತವಿಕ ಸತ್ಯಾಂಶಗಳನ್ನು ನಿರ್ಣಯಿಸಲು ಸಹಾಯ ಮಾಡುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ ಸಂತೋಷ್ ಆಲ್ಬರ್ಟ್ ಸಲ್ಡಾನ ವಹಿಸಿ ಸಂಶೋಧನಾ ವಿಧಾನಗಳು ಮುಂದಿನ ಕಲಿಕೆಗೆ ಪ್ರೇರಣೆ ನೀಡುತ್ತದೆ.  ಆದುದರಿಂದ ಮುಂದಿನ ಭವಿಷ್ಯಕ್ಕಾಗಿ ನೀವೆಲ್ಲರೂ ಸಂಶೋಧನೆಯಲ್ಲಿ ತೊಡಗಿಸಿಕೊಳ್ಳಿ ಎಂದು ಹೇಳಿದರು. ವೇದಿಕೆಯಲ್ಲಿ ಬಿ.ಎಡ್. ಮತ್ತು ಡಿ.ಎಡ್. ಕಾಲೇಜಿನ ವಿದ್ಯಾರ್ಥಿ ನಾಯಕಿಯರಾದ  ಶ್ರವಣ ಮಹಾಪುರುಷ ಮತ್ತು ರಂಝೀನಾ ಉಪಸ್ಥಿತರಿದ್ದರು.


ದ್ವಿತೀಯ ಬಿ.ಇಡಿ. ಪ್ರಶಿಕ್ಷಣಾರ್ಥಿಗಳಾದ ಸಾಯಿಧೃತಿ ಮತ್ತು ಬಳಗ ಪ್ರಾರ್ಥಿಸಿ, ಗಾಯತ್ರಿ ಸ್ವಾಗತಿಸಿ, ಯಶಸ್ವಿನಿ ವಂದಿಸಿ, ಪೂಜಾ ಎ ಎಸ್ ಕಾರ್ಯಕ್ರಮ ನಿರೂಪಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top