ಧರ್ಮಸ್ಥಳ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ವತಿಯಿಂದ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರರು ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಶ್ರೀ ಕ್ಷೇತ್ರ ಧರ್ಮಸ್ಥಳಲ್ಲಿ ಉಡುಪಿ ಜಿಲ್ಲೆಯ ಕಡೆಕಾರ್ ಗ್ರಾಮ ಪಂಚಾಯಿತಿಯ ಸ್ವಚ್ಛತಾ ಕಾರ್ಯಕ್ಕಾಗಿ ಘನತ್ಯಾಜ್ಯ ವಿಲೇವಾರಿ ವಾಹನ ಟಾಟಾ 407 ಟಿಪ್ಪರ್ ಅನ್ನು ಕೊಡುಗೆಯಾಗಿ ನೀಡಿದರು.
ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಹರ್ಷೇಂದ್ರ ಕುಮಾರ್, ಕಾರ್ಯದರ್ಶಿಗಳಾದ ಡಾ. ಸತೀಶ್ಚಂದ್ರ ಎಸ್ ಸಮ್ಮುಖದಲ್ಲಿ ಘನತ್ಯಾಜ್ಯ ವಿಲೇವಾರಿ ವಾಹನದ ಕೀಲಿ ಕೈ ಹಸ್ತಾಂತರಿಸಿ, ವಾಹನವು ಗ್ರಾಮದ ಸ್ವಚ್ಛತಾ ಕಾರ್ಯಗಳಿಗೆ ಸದ್ಬಳಕೆ ಆಗಲಿ ಎಂದು ಶುಭ ಹಾರೈಸಿದರು.
ಈ ವೇಳೆ ಉಡುಪಿ ಆಯುರ್ವೇದ ಕಾಲೇಜಿನ ಉಪ ಪ್ರಾಂಶುಪಾಲರಾದ ಪ್ರೊ . ನಾಗರಾಜ ಪೂಜಾರಿ, ಉಡುಪಿ ಎಸ್.ಡಿ. ಎಂ ಆಸ್ಪತ್ರೆಯ ಮೆಡಿಕಲ್ ಸುಪರಿಡೆಂಟ್ ಡಾ. ಜಯಕೃಷ್ಣ ನಾಯಕ್, ಉಡುಪಿಯ ಎಸ್.ಡಿ.ಎಂ ಫಾರ್ಮಸಿಯ ಜನರಲ್ ಮ್ಯಾನೇಜರ್ ಡಾ. ಮುರಳೀಧರ ಬಳ್ಳಾಳ್ ಹಾಗು ಉಜಿರೆ ಎಸ್.ಡಿ.ಎಂ ಕೇಂದ್ರ ಕಛೇರಿಯ ಸಿಬ್ಬಂದಿ ನಿಶಿತ್ ಕುಮಾರ್ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ದಿ ಅಧಿಕಾರಿ ಸಿದ್ದೇಶ್ ಮಾತನಾಡಿ, ಕಡೆಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕುತ್ಪಾಡಿ ಗ್ರಾಮದ ಶ್ರೀ ಧರ್ಮಸ್ಥಳ ಮಂಜುನಾಥ ಆಯುರ್ವೇದ ಆಸ್ಪತ್ರೆ ಪಂಚಾಯತ್ ವ್ಯಾಪ್ತಿಯಲ್ಲಿನ ಹಾಗು ಸುತ್ತಲಿನ ಪ್ರದೇಶಗಳ ಜನರ ಆರೋಗ್ಯ ಸಂಬಂಧಿಸಿದ ಸೇವೆಗಳನ್ನು ಕ್ಲಪ್ತ ಸಮಯದಲ್ಲಿ ಒದಗಿಸುತ್ತಿರುವುದನ್ನು ಶ್ಲಾಘಿಸಿ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯ ವೈಖರಿಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.
ಹಸ್ತಾಂತರ ಸಂದರ್ಭದಲ್ಲಿ ಉಡುಪಿಯ ಕಡೆಕಾರ್ ಗ್ರಾಮ ಪಂಚಾಯಿತಿಯ ಪಿಡಿಒ ಸಿದ್ದೇಶ್, ಪಂಚಾಯತ್ ಉಪಾಧ್ಯಕ್ಷ ನವೀನ್ ಶೆಟ್ಟಿ, ಪಂಚಾಯತ್ ಸದಸ್ಯರುಗಳಾದ ತಾರಾನಾಥ್ ಆರ್. ಸುವರ್ಣ, ರಾಘವೇಂದ್ರ, ಪ್ರಶಾಂತ್, ಸುಕನ್ಯಾ ಸೇರಿದಂತೆ ಸಿಬ್ಬಂದಿಗಳಾದ ಶಶಿಧರ್ ಬಂಗೇರ, ಮನೋಜ್ ಎಸ್. ಭಾಗಿಯಾಗಿದ್ದರು.
"ಶ್ರೀ ಕ್ಷೇತ್ರ ಧರ್ಮಸ್ಥಳವು ಹಲವು ದಶಕಗಳಿಂದ ಸಮಾಜಮುಖಿ ಕಾರ್ಯಕ್ರಮಗಳನ್ನು ನಿರಂತರವಾಗಿ ಮಾಡಿಕೊಂಡು ಬಂದಿದೆ. ಇದರ ಭಾಗವಾಗಿ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ವತಿಯಿಂದ ಕೊಡಮಾಡಲ್ಪಟ್ಟಿರುವ ಘನ ತ್ಯಾಜ್ಯ ವಿಲೇವಾರಿ ವಾಹನವು ಅತ್ಯಂತ ಉಪಯುಕ್ತವಾಗಲಿದೆ. ಘನತ್ಯಾಜ್ಯ ನಿರ್ವಹಣೆಗೆ ಗ್ರಾಮ ಪಂಚಾಯತ್ ಪ್ರತ್ಯೇಕ ಘನ ವಾಹನ ಈ ವರೆಗೆ ಹೊಂದಿರಲಿಲ್ಲ. ಘನತ್ಯಾಜ್ಯ ನಿರ್ವಹಣೆಗೆ ಘನ ವಾಹನವನ್ನು ಹಸ್ತಾಂತರಿಸಿರುವುದಕ್ಕೆ ಸಂಸ್ಥೆಗೆ ಸಮಸ್ತ ಕಡೆಕಾರು ಗ್ರಾಮ ಪಂಚಾಯತಿಯ ಆಡಳಿತ ಮಂಡಳಿಯ ಪರವಾಗಿ ಧನ್ಯವಾದವನ್ನು ಸಮರ್ಪಿಸಿತ್ತೇವೆ."
- ಸಿದ್ದೇಶ್, ಪಂಚಾಯತ್ ಅಭಿವೃದ್ದಿ ಅಧಿಕಾರಿ
ಕಡೆಕಾರು ಗ್ರಾಮ ಪಂಚಾಯತ್
"ಎಸ್.ಡಿ.ಎಂ ಶಿಕ್ಷಣ ಸಂಸ್ಥೆ ವತಿಯಿಂದ ಹಸ್ತಾಂತರಿಸಿರುವ ಘನವಾಹನದ ಮೂಲಕ ಕಡೆಕಾರು ಗ್ರಾಮ ಪಂಚಾಯತಿಯ ಕುತ್ಪಾಡಿ ಮತ್ತು ಕಡೆಕಾರು ಗ್ರಾಮಗಳ ಕುಟುಂಬಗಳ ಮತ್ತು ವಾಣಿಜ್ಯ ಘಟಕಗಳ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ಬಳಸಲಾಗುವುದು ಆ ಮೂಲಕ ಪಂಚಾಯತ್ ವ್ಯಾಪ್ತಿಯ ಸ್ವಚ್ಚತೆಯನ್ನು ಕಾಪಾಡಲು ಕ್ರಮವಹಿಸಲಾಗುವುದು."
- ನವೀನ್ ಶೆಟ್ಟಿ
ಮಾಜಿ ಉಪಾಧ್ಯಕ್ಷರು, ಕಡೆಕಾರು ಗ್ರಾಮ ಪಂಚಾಯತ್
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


