ಬೆಂಗಳೂರಿನಲ್ಲಿ ಸರ್ವ ಸೇವಾ ಸಂಘದ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆ

Upayuktha
0

ಬೆಂಗಳೂರು: ವರ್ಧಾದ ಸರ್ವ ಸೇವಾ ಸಂಘದ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯು  ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆಯಿತು.


ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ  ಚಂದನ್‌ಪಾಲ್ ವಹಿಸಿ ಪ್ರಾರಂಭಿಕ ಮಾತುಗಳನ್ನಾಡಿದರು. ಗಾಂಧಿ ಚಿಂತನೆ ಮತ್ತು ಸರ್ವೋದಯ ತತ್ವಗಳ ಪ್ರಸ್ತುತತೆ ಕುರಿತು ಅವರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.


ಕಾರ್ಯಕ್ರಮದಲ್ಲಿ ಗಾಂಧಿ ಭವನದ ಕಾರ್ಯದರ್ಶಿ ಎಂ.ಸಿ. ನರೇಂದ್ರ ಹಾಗೂ ಗಾಂಧಿ ಸ್ಮಾರಕ ನಿಧಿ, ನವದೆಹಲಿಯ ಮಹಾ ಕಾರ್ಯದರ್ಶಿ ಸಂಜಯ್ ಸಿಂಗ್ ಮಾತನಾಡಿ, ಗಾಂಧೀಜಿ ಅವರ ಮೌಲ್ಯಗಳು ಇಂದಿನ ಸಮಾಜದಲ್ಲಿ ಇನ್ನಷ್ಟು ಪ್ರಸ್ತುತವಾಗಿವೆ ಎಂದು ಅಭಿಪ್ರಾಯಪಟ್ಟರು.


ಡಾ. ಎಚ್.ಎಸ್. ಸುರೇಶ್ ಎಲ್ಲರನ್ನು ಸ್ವಾಗತಿಸಿದರು. ಕರ್ನಾಟಕ ರಾಜ್ಯ ಸರ್ವೋದಯ ಮಂಡಳಿಯ ಅಧ್ಯಕ್ಷ ಡಾ. ವೈ.ಸಿ. ದೊಡ್ಡಯ್ಯ ಮತ್ತುರಾಷ್ಟ್ರೀಯ ಯುವ ಪ್ರಕೋಷ್ಟದ ಸಂಘಟಕ ಡಾ.ವಿ.ಪ್ರಶಾಂತ  ಉಪಸ್ಥಿತರಿದ್ದರು.


ಎರಡು ದಿನಗಳ ಈ ಸಭೆಯಲ್ಲಿ ಸಂಘದ ವಿವಿಧ ಚಟುವಟಿಕೆಗಳು, ಭವಿಷ್ಯದ ಕಾರ್ಯಕ್ರಮಗಳು ಹಾಗೂ ಸರ್ವೋದಯ ಚಳವಳಿಯ ಬಲವರ್ಧನೆ ಕುರಿತಂತೆ ಚರ್ಚೆಗಳು ನಡೆಯಿತು. 


  ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top