ಸುರತ್ಕಲ್: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಫಿಶರೀಸ್ ಕುಳಾಯಿ ಚಿತ್ರಾಪುರದ ಶಾಲಾ ಪ್ರಾರಂಭೋತ್ಸವ, ಎಲ್.ಕೆ.ಜಿ ತರಗತಿಯ ಉದ್ಘಾಟನೆ ಮತ್ತು ದ್ವಿಭಾಷಾ ಮಾಧ್ಯಮ ತರಗತಿಯ ಉದ್ಘಾಟನೆ ಹಾಗೂ ಪುಸ್ತಕ ವಿತರಣೆಗಳ ಸಂಭ್ರಮ ಪೋಷಕರ ಸಭೆ ಕಾರ್ಯಕ್ರಮ ನಡೆಯಿತು.
ಪಣಂಬೂರು ಮೊಗವೀರ ಮಹಾ ಸಭಾದ ಅಧ್ಯಕ್ಷ ಹಾಗೂ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಾಧವ ಸುವರ್ಣ ಉದ್ಘಾಟನೆ ನಡೆಸಿ ಶಿಕ್ಷಣಾಭಿಮಾನಿಗಳು ಮತ್ತು ಹಳೆ ವಿದ್ಯಾರ್ಥಿಗಳ ಕೊಡುಗೆಗಳೊಂದಿಗೆ ಹೊಸ ಯೋಜನೆಗಳನ್ನು ರೂಪಿಸಿದ್ದು ವಿದ್ಯಾರ್ಥಿಗಳು ಉತ್ತಮ ಕಲಿಕೆಯೊಂದಿಗೆ ಉತ್ತಮ ಸಂಸ್ಕೃತಿವಂತರಾಗಬೇಕು ಎಂದರು.
ಹಿರಿಯ ನಿವೃತ್ತ ಶಿಕ್ಷಕಿ ಪುಷ್ಪಾವತಿ ಶ್ರೀನಿವಾಸ ರಾವ್, ಎಲ್.ಕೆ.ಜಿ. ತರಗತಿಯ ಆರಂಭದಿಂದ ಪೋಷಕರಿಗೆ ಹೆಚ್ಚಿನ ಅನುಕೂಲಗಳಾಗುತ್ತವೆ ಎಂದರು.
ಕೂಳೂರು ಮೊಗವೀರ ಮಹಾ ಸಭಾದ ಅಧ್ಯಕ್ಷ ಹಾಗೂ ಹಳೆ ವಿದ್ಯಾರ್ಥಿ ಸಂಘದ ಕೋಶಾಧಿಕಾರಿ ಭರತ್ ಕುಮಾರ್, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷೆ ಮಂಜುಳಾ, ಹಳೆ ವಿದ್ಯಾರ್ಥಿ ಸಂಘದ ಜೊತೆ ಕಾರ್ಯದರ್ಶಿ ಕುಮಾರ್ ಬಂಗೇರ, ಸದಸ್ಯ ತೇಜಪಾಲ್ ಮತ್ತು ಶ್ರೀನಿವಾಸ ರಾವ್ ಶುಭ ಹಾರೈಸಿದರು.
ಅಧ್ಯಕ್ಷತೆ ವಹಿಸಿದ್ದ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಪ್ರೊ. ಕೃಷ್ಣಮೂರ್ತಿ ಮಾತನಾಡಿ ಸರಕಾರ ನೀಡುತ್ತಿರುವ ಉಚಿತ ಹಾಗೂ ಗುಣಮಟ್ಟದ ಶಿಕ್ಷಣದ ಪ್ರಯೋಜನವನ್ನು ಸರ್ವರೂ ಪಡೆದು ಕೊಳ್ಳಬೇಕು. ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಶಿಕ್ಷಕಿಯರು ಹಾಗೂ ಹಿರಿಯ ವಿದ್ಯಾರ್ಥಿಗಳು ಶ್ರಮಿಸುತ್ತಾರೆ ಎಂದರು.
ವಿದ್ಯಾರ್ಥಿಗಳಿಗೆ ಉಚಿತ ಪಠ್ಯ ಪುಸ್ತಕಗಳನ್ನು ವಿತರಿಸಲಾಯಿತು. ಎಲ್.ಕೆ.ಜಿ. ವಿದ್ಯಾರ್ಥಿಗಳಿಗೆ ಪೆನ್ಸಿಲ್ಗಳನ್ನು ನೀಡುವ ಮೂಲಕ ಸ್ವಾಗತಿಸಲಾಯಿತು.
ಮುಖ್ಯ ಶಿಕ್ಷಕಿ ಶೋಭಾ ಸ್ವಾಗತಿಸಿದರು. ಹಿರಿಯ ಶಿಕ್ಷಕಿ ಸುಕೇಶಿನಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿಯರಾದ ನೀತಾ ತಂತ್ರಿ, ಸಿಂತಿಯ, ರೂಪ, ವನಿತಾ, ಶಾಲಾ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಶಶಿಕಲಾ, ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


