ಸಾಲಿಗ್ರಾಮ: ಸಕಾಲಿಕ ಮಳೆ ಮತ್ತು ಸಮೃದ್ಧ ಬೆಳೆಗಾಗಿ ಜಗದೊಡೆಯ ಶ್ರೀಮದ್ ಯೋಗಾನಂದ ಗುರು ನರಸಿಂಹ ಮತ್ತು ಪರಿವಾರ ದೇವತೆಗಳಿಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸೀಯಾಳ ಅಭಿಷೇಕವನ್ನು ಸೋಮವಾರದಂದು (ಜೂ.15) ನಡೆಸಲಾಯಿತು.
ಈ ಕಾರ್ಯಕ್ರಮದಲ್ಲಿ ಭಕ್ತಾಧಿಗಳು ಭಾಗವಹಿಸಿ ಶ್ರೀ ದೇವರಿಗೆ ಪ್ರಾರ್ಥನೆಯನ್ನು ಸಲ್ಲಿಸಿದರು. ಆಡಳಿತ ಮಂಡಳಿಯ ಅಧ್ಯಕ್ಷ ಪ್ರಕಾಶ ಕಾರಂತರು, ಉಪಾಧ್ಯಕ್ಷ ಸಿ. ಚಂದ್ರಶೇಖರ ಉಪಾಧ್ಯ, ಕಾರ್ಯದರ್ಶಿ ಪರಶುರಾಮ ಭಟ್ಟರು, ಹಾಗೂ ಆಡಳಿತ ಮಂಡಳಿಯ ಸದಸ್ಯರಾದ ಕೆ. ತಾರಾನಾಥ ಹೊಳ್ಳ, ಪ್ರಸನ್ನ ತುಂಗ ಮತ್ತು ಬಿ.ಜಿ ಕೃಷ್ಣಮೂರ್ತಿ ಮಯ್ಯ ಗ್ರಾಮ ಮೊಕ್ತೇಸರರು ಕೂ.ಮ.ಜ. ಸಾಲಿಗ್ರಾಮ (ರಿ) ಅಂಗಸಂಸ್ಥೆಯ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಶ್ರೀ ಗುರು ನರಸಿಂಹ ಹಾಗೂ ಆಂಜನೇಯ ದೇವಸ್ಥಾನಕ್ಕೆ ಉಡುಪಿ ಜಿಲ್ಲಾಧಿಕಾರಿ ಶ್ರೀಮತಿ ಸ್ವರೂಪ್ ಟಿ. ಕೆ.ಭೇಟಿ ನೀಡಿ, ಸೀಯಾಳಾಭಿಷೇಕದಲ್ಲಿ ಭಾಗವಹಿಸಿದರು. ದೇವಳದ ವತಿಯಿಂದ ಜಿಲ್ಲಾಧಿಕಾರಿಯವರನ್ನು ಗೌರವಿಸಲಾಯಿತು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


