ಶಕ್ತಿ ಪೂರ್ವ ಪ್ರಾಥಮಿಕ ಶಾಲೆಯಲ್ಲಿ “ಫಾದರ್ಸ್ ಡೇ” ಕಾರ್ಯಕ್ರಮ

Upayuktha
0



ಮಂಗಳೂರು: ಶಕ್ತಿನಗರದ ಶಕ್ತಿ ರೆಸಿಡೆನ್ಶಿಯಲ್ ಶಾಲೆಯ ಶಕ್ತಿ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಫಾದರ್ಸ್ ಡೇ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಶಕ್ತಿ ಪೂರ್ವ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ತಂದೆಯಂದಿರು ತುಂಬಾ ಉತ್ಸಾಹದಿಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ವಿಶೇಷವಾಗಿತ್ತು. ವಿವಿಧ ತರದ ಆಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. 


ಈ ಸಂದರ್ಭದಲ್ಲಿ ಕಾರ್ಯಕ್ರಮವನ್ನು ಉದ್ದೇಶಿಸಿ ಸಂಸ್ಥೆಯ ಪ್ರಧಾನ ಸಲಹೆಗಾರ ರಮೇಶ ಕೆ. ಮಾತನಾಡಿ ಒಂದು ಮಗುವಿನ ಬೆಳವಣಿಗೆಯಲ್ಲಿ ತಾಯಿ ಶ್ರಮದ ಜೊತೆ ತಂದೆಯ ಶ್ರಮವು ಇದೆ. ತಂದೆಯು ಅವರ ದುಡಿಮೆಯ ಜೊತೆ ಮಗುವಿಗೂ ಹೆಚ್ಚು ಸಮಯವನ್ನು ಕೊಟ್ಟು ಅವರನ್ನು ಪ್ರೋತ್ಸಾಹಿಸುತ್ತಿರುತ್ತಾರೆ. ಇಂದು ಈ ಕಾರ್ಯಕ್ರಮದ ಮೂಲಕ ಎಲ್ಲ ಮಕ್ಕಳ ತಂದೆಯಂದಿರು ತುಂಬಾ ಖುಷಿಯಿಂದ ಭಾಗವಹಿಸಿರುವುದು ಅಭಿನಂದನೀಯವಾಗಿದೆ ಎಂದು ಹೇಳಿದರು.


ಶಕ್ತಿ ರೆಸಿಡೆನ್ಶಿಯಲ್ ಶಾಲೆಯ ಪ್ರಾಂಶುಪಾಲೆ ಡಾ. ಸುರೇಖಾ ಭಟ್ ಮಾತನಾಡಿ ಮಗುವಿಗೆ ಸಂಸ್ಕಾರವನ್ನು ಶಾಲೆಯಲ್ಲಿ ಶಿಕ್ಷಕರು ಮತ್ತು ಮನೆಯಲ್ಲಿ ಪೋಷಕರು ನೀಡಬೇಕು. ಮಗುವಿನ ಜೊತೆಯಲ್ಲಿಯೇ ಕುಟುಂಬ ಸದಸ್ಯರು ಒಟ್ಟಿಗೆ ಊಟ ಮಾಡುವುದರ ಮೂಲಕ ಕುಟುಂಬವನ್ನು ಬಲವರ್ದನೆ ಮಾಡಬೇಕು. ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸುವ ಕೆಲಸವನ್ನು ನಿರಂತರವಾಗಿ ನಾವೆಲ್ಲರೂ ಒಟ್ಟಾಗಿ ಮಾಡಬೇಕೆಂದು ಅವರು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ.ಕೆ.ಸಿ ನಾಯ್ಕ್ ವಹಿಸಿ ಶುಭವನ್ನು ಹಾರೈಸಿದರು. ಕಾರ್ಯಕ್ರಮದ ಸ್ವಾಗತವನ್ನು ಶ್ರೀಮತಿ ರೇಣುಕ ಹಾಗೂ ಶ್ರೀಮತಿ ಪೂಜರವರು ವಂದಿಸಿ, ನಿರೂಪಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top