ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ವಿಶ್ವ ಯೋಗ ದಿನಾಚರಣೆ

Upayuktha
0

 


ಮಂಗಳೂರು: ಶಕ್ತಿನಗರದಲ್ಲಿರುವ ಶಕ್ತಿ ವಿದ್ಯಾ ಸಂಸ್ಥೆಯ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ಕ್ರೀಡಾ ಭಾರತಿ ಮಂಗಳೂರು ಮತ್ತು ಶಕ್ತಿ ವಿದ್ಯಾ ಸಂಸ್ಥೆಯ ಸಹಾಭಾಗಿತ್ವದಲ್ಲಿ ಸಾಮೂಹಿಕವಾಗಿ ಯೋಗಾಸನಗಳನ್ನು ಅಭ್ಯಾಸ ಮಾಡುವ ಮೂಲಕ ಅರ್ಥ ಪೂರ್ಣವಾಗಿ ವಿಶ್ವ ಯೋಗ ದಿನವನ್ನು ಆಚರಿಸಲಾಯಿತು. 


ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ  ಯೆನಪೋಯ ವಿಶ್ವವಿದ್ಯಾನಿಲಯ ಮಂಗಳೂರು ಇಲ್ಲಿ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯರು ಆಗಿರುವ ಐಶ್ವರ್ಯ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಇಂದು ವಿಶ್ವದಲ್ಲಿ 177 ಕ್ಕೂ ಹೆಚ್ಚಿನ ದೇಶಗಳು ಈ ಯೋಗದಿನಾಚರಣೆಯನ್ನು ಆಚರಿಸುತ್ತಿವೆ. ನಮ್ಮ ದೇಶದ ಪ್ರಧಾನಿಗಳಾದ ನರೇಂದ್ರ ಮೋದಿಯವರ ನಿರ್ಧಾರದಿಂದ ಭಾರತಕ್ಕೆ ಮಾತ್ರ ಸೀಮಿತವಾಗಿದ್ದ ಯೋಗ ಇಂದು ವಿಶ್ವವೆ ಆಚರಿಸುವಂತೆ ಆಗಿದೆ. ನಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯ ಚೆನ್ನಾಗಿರಬೇಕು ಅಂದರೆ ನಾವು ವಿವಿಧ ಯೋಗಾಸನಗಳನ್ನು ಅಭ್ಯಾಸ ಮಾಡಬೇಕಾಗುತ್ತದೆ ಎಂದರು.


ಶಕ್ತಿ ವಿದ್ಯಾ ಸಂಸ್ಥೆಯ ಪ್ರಧಾನ ಸಲಹೆಗಾರ ರಮೇಶ ಕೆ ಮಾತನಾಡಿ ಶಕ್ತಿ ವಿದ್ಯಾ ಸಂಸ್ಥೆಯ ವಸತಿ ನಿಲಯದಲ್ಲಿರುವ ಎಲ್ಲಾ ವಿದ್ಯಾರ್ಥಿಗಳು ಬೆಳಗ್ಗಿನ ಅವಧಿಯಲ್ಲಿ ಪ್ರತಿನಿತ್ಯವು ಯೋಗಾವನ್ನು ಅಭ್ಯಾಸ ಮಾಡುತ್ತಾರೆ. ಇದರಿಂದ ಅವರ ಕಲಿಯುವಿಕೆ ಈ ಪದ್ಧತಿಯು ಹೆಚ್ಚು ಅನುಕೂಲಕರವಾಗಿದೆ ಎಂದು ಹೇಳಿದರು. ಪ್ರತಿ ವರ್ಷವು ಕ್ರೀಡಾ ಭಾರತಿ  ಸಹಕಾರದೊಂದಿಗೆ ಅಂತರಾಷ್ಟ್ರೀಯ ಯೋಗ ದಿನಾಚರಣೆ ಮತ್ತು ರಥ ಸಪ್ತಮಿ ನಮ್ಮ ಸಂಸ್ಥೆಯಲ್ಲಿ ನಡೆಯುತ್ತಿರುವುದು ಶ್ಲಾಘನೀಯವಾಗಿದೆ. ಅಂತರಾಷ್ಟ್ರೀಯ ಯೋಗಾ ದಿನಾಚರಣೆಯಿಂದ ನಾವು ದಿನನಿತ್ಯ ಯೋಗಾವನ್ನು ಅಭ್ಯಾಸ ಮಾಡಬೇಕೆಂದು ಅವರು ಹೇಳಿದರು.


ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ವ್ಯಾಸಂಗ ವಿದ್ಯಾರ್ಥಿಗಳು ಏಕಕಾಲದಲ್ಲಿ  ಪವನ ಮುಕ್ತಾಸನ, ಮಕರಾಸನ, ತಾಡಾಸನ, ಭುಜಂಗಾಸನ, ವೃಕ್ಷಾಸನ ವಿವಿಧ ಯೋಗಾಸನಗಳನ್ನು ಮಾಡುವ ಮೂಲಕ ಯೋಗಾಭ್ಯಾಸವನ್ನು ನಡೆಸಿದರು. ಯೋಗ ತರಬೇತುಧಾರರಾದ ಶ್ರೀಮತಿ ವೀಣಾ ಮತ್ತು ಸುಭದ್ರಾ ಅವರು ಯೋಗಭ್ಯಾಸದ ತರಬೇತಿ ನಡೆಸಿಕೊಟ್ಟರು.


ಈ ಸಂದರ್ಭದಲ್ಲಿ  ಕ್ರೀಡಾಭಾರತಿ ಕರ್ನಾಟಕ ದಕ್ಷಿಣ ಪ್ರಾಂತ ಇದರ ಉಪಾಧ್ಯಕ್ಷ ಶ್ರೀ ಕಾರಿಯಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ಕ್ರೀಡಾಭಾರತಿ ಕರ್ನಾಟಕ, ದಕ್ಷಿಣ ಪ್ರಾಂತ ಇದರ ಆತ್ಮ ರಕ್ಷಕ ಪ್ರಮುಖ್ ಆಗಿರುವ ಶ್ರೀ ಎ ಕೃಷ್ಣ ಶೆಟ್ಟಿ ವೇದಿಕೆಯಲ್ಲಿ  ಉಪಸ್ಥಿತರಿದ್ದರು. ದೇಲಂಪಾಡಿ ಯೋಗ ಪ್ರತಿಷ್ಠಾನದ ಸದಸ್ಯರು ಮತ್ತು ಯೋಗ ತರಬೇತುದಾರರಾದ ಶ್ರೀಮತಿ ವೀಣಾ ಮತ್ತು ಸುಭದ್ರಾ ಉಪಸ್ಥಿತರಿದ್ದರು. ಶಕ್ತಿ ವಸತಿ ಶಾಲೆ ಪ್ರಾಂಶುಪಾಲೆ ಸುರೇಖಾ ಭಟ್ ಸ್ವಾಗತಿಸಿ, ಕನ್ನಡ ಶಿಕ್ಷಕರಾದ ಶರಣಪ್ಪ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top