ಸಿದ್ದಕಟ್ಟೆ: ಪ್ರಧಾನಿ ಮೋದಿ ಪರವಾಗಿ ದೇವಸ್ಥಾನದಲ್ಲಿ ವಿಶೇಷ ಪೂಜೆಯೊಂದಿಗೆ ಪ್ರಾರ್ಥನೆ

Upayuktha
0

 


ಬಂಟ್ವಾಳ: ಭಾರತದ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಬಿಜೆಪಿ ಕೇಂದ್ರ ಸರ್ಕಾರ 12 ವರ್ಷಗಳನ್ನು ಪೂರೈಸಿದೆ ಮತ್ತು ಭಾರತದ ಅತೀ ದೀರ್ಘಾವಧಿ ಚುನಾಯಿತ ಪ್ರಧಾನ ಮಂತ್ರಿ ಎಂಬ ಹೆಗ್ಗಳಿಕೆಗೆ ನರೇಂದ್ರ  ಮೋದಿಯವರು ಪಾತ್ರರಾಗಿದ್ದಾರೆ. ಈ ಪ್ರಯುಕ್ತ ಭಾರತೀಯ ಜನತಾ ಪಕ್ಷದ ವತಿಯಿಂದ, ಸಿದ್ದಕಟ್ಟೆ ಸಮೀಪದ ಶ್ರೀ ಪೂಂಜ ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ, ಮೋದಿಜೀ ರಾಜಕೀಯ ಭವಿಷ್ಯ ಮತ್ತು ಬಿಜೆಪಿ ಪಕ್ಷದ ಅಭಿವೃದ್ಧಿಹಾಗೂ ದೇಶದ ಆರ್ಥಿಕತೆಯ ಅಭಿವೃದ್ಧಿಗೆ ವಿಶೇಷ ಹೂವಿನ ಪೂಜೆ ಮತ್ತು ಸಾರ್ವತ್ರಿಕ ಪ್ರಾರ್ಥನೆ ಮಾಡಲಾಯಿತು.


ದೇವಸ್ಥಾನದ ಕೃಷ್ಣ ಪ್ರಸಾದ್ ಅಸ್ರಣ್ಣರವರು ವಿಶೇಷ ಪೂಜೆ ನೆರೆವೇರಿಸಿ ದೇಶಕ್ಕೆ ಬರುವ ಆಪತ್ತುಗಳನ್ನು ಹಾಗೂ ಪ್ರಧಾನಿ ಮೋದಿಜೀ ಯವರಿಗೆ ಬರುವ ಎಲ್ಲಾ ವಿಧದ ಸಮಸ್ಯೆಗಳನ್ನು ಪರಿಹರಿಸಿ ಜಗತ್ತಿನಲ್ಲಿಯೇ ಭಾರತ ವಿಶ್ವ ಗುರು ಆಗುವ ಮೂಲಕ ನಮಗೆಲ್ಲರಿಗೂ ಶಾಂತಿ ಲಭಿಸಲಿ ಎಂದೂ ಪ್ರಾರ್ಥನೆ ಮಾಡಿಕೊಂಡರು.


ಈ ಸಂದರ್ಭದಲ್ಲಿ ಸಿದ್ಧಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಪ್ರಭಾಕರ ಪ್ರಭು, ದಕ್ಷಿಣ ಕನ್ನಡ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕರಾದ ಪ್ರಭಾಕರ. ಎಚ್, ಹುಲಿಮೇರು, ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ರಾಜೇಶ್ ಶೆಟ್ಟಿ ಕೊನೆರಬೆಟ್ಟು, ದಿನೇಶ್ ಪೂಜಾರಿ ಹುಲಿಮೇರು, ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ಉಪಾಧ್ಯಕ್ಷರಾದ ಆಶಾ ಎಸ್. ಶೆಟ್ಟಿ, ಬೆಳ್ತಂಗಡಿ ಮಂಡಲ ಆರಂಬೋಡಿ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರಾದ ಸುರೇಂದ್ರ ಶೆಟ್ಟಿ ಅಜ್ಜಾಡಿ, ಬಿಜೆಪಿ ಕಾರ್ಯಕರ್ತರು, ನರೇಂದ್ರ ಮೋದಿ ಅಭಿಮಾನಿಗಳು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top