ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ 567 ವಿದ್ಯಾರ್ಥಿಗಳು 2025-26ನೇ ಸಾಲಿನ ಸಿಲ್ವರ್ ಝೋನ್ ಒಲಿಂಪಿಯಾಡ್ ಪರೀಕ್ಷೆಗೆ ಬರೆದಿದ್ದು, ಅದರಲ್ಲಿ 82 ಮಂದಿ ವಿದ್ಯಾರ್ಥಿಗಳು ಚಿನ್ನದ ಪದಕ ಮತ್ತು ಪ್ರಶಸ್ತಿ ಪತ್ರ, 66 ವಿದ್ಯಾರ್ಥಿಗಳು ಬೆಳ್ಳಿ ಪದಕ ಮತ್ತು ಪ್ರಶಸ್ತಿ ಪತ್ರ, 52 ವಿದ್ಯಾರ್ಥಿಗಳು ಕಂಚಿನ ಪದಕ ಮತ್ತು ಪ್ರಶಸ್ತಿ ಪತ್ರವನ್ನು ಪಡೆದುಕೊಂಡಿರುತ್ತಾರೆ.
ಪರೀಕ್ಷೆಗೆ ಸಂಬಂಧಿಸಿದಂತೆ ಗಣಿತ ವಿಷಯದಲ್ಲಿ 2ನೇ ತರಗತಿಯ ವಾತ್ಸಲ್ಯ ಹಾಗೂ ಯುವಾನ್, 1ನೇ ತರಗತಿಯ ಯದ್ವಿ ರೈ, ವಂಶಿಕ ವಿ ಪ್ರಭು 100ಕ್ಕೆ 100 ಅಂಕ ಗಳಿಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಆರನೇ ತರಗತಿಯ ಸಂಹಿತ್ ಜೋಸ್ಸಿ ಲೋಬೊ, ಮೂರನೇ ತರಗತಿಯ ವೇದ್ಯಾ ಸರಸ್ವತಿ ಕ್ರಮವಾಗಿ ಇಂಗ್ಲೀಷ್ ಮತ್ತು ಗಣಿತ ವಿಷಯದಲ್ಲಿ ಶಾಲಾ ಹಂತದಿಂದ ಝೋನಲ್ ಹಂತದ ಪರೀಕ್ಷೆ ಬರೆದಿದ್ದು ಪ್ರಶಸ್ತಿ ಪತ್ರವನ್ನು ಪಡೆದು ಕೊಂಡಿರುತ್ತಾರೆ. ಪದಕ ಗಳಿಸಿದ ವಿದ್ಯಾರ್ಥಿಗಳನ್ನು ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಗಳು ಅಭಿನಂದಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


