ಗಿರೀಶ್ ಕಾರ್ನಾಡ್ ಅವರ ಸಾಹಿತ್ಯ ಪರಂಪರೆ: ಸಂತ ಆಗ್ನೆಸ್ ಕಾಲೇಜಿನಲ್ಲಿ ವಿಶೇಷ ಉಪನ್ಯಾಸ

Upayuktha
0

 


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಂಗಳೂರು ಹಾಗೂ ಸಂತ ಆಗ್ನೆಸ್ ಕಾಲೇಜು (ಸ್ವಾಯತ್ತ), ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್ ಅವರ “ಕವಿ– ಕಾವ್ಯ– ಸಾಹಿತ್ಯ– ಪರಂಪರೆ” ವಿಷಯಾಧಾರಿತ ಉಪನ್ಯಾಸ ಸರಣಿಯ 7ನೇ ಮಾಲಿಕೆಯು ಸಂತ ಆಗ್ನೆಸ್ ಕಾಲೇಜಿನ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಯಿತು.


ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟನೆ ಮಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಕಕ್ಷರಾದ ಡಾ. ಎಂ.ಪಿ. ಶ್ರೀನಾಥ ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯ ಚಟುವಟಿಕೆಗಳ ಬಗ್ಗೆ ತಿಳಿಸುತ್ತಾ, ವಿದ್ಯಾರ್ಥಿಗಳನ್ನು ಉದ್ದೇಶಿಸಿ ಕನ್ನಡ ಸಾಹಿತ್ಯ ಪರಂಪರೆಗೆ ತಮ್ಮ ತಮ್ಮ  ಕೊಡುಗೆಗಳನ್ನು ಕೊಡುವ ಮೂಲಕ ಸಾಹಿತ್ಯದ ವಿಸ್ತಾರತೆಗೆ ಕೈಜೋಡಿಸಬೇಕು ಎಂದರು.


ಬಳಿಕ ಮಾತನಾಡಿದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಪ್ರಜಾವಾಣಿ ದಿನಪತ್ರಿಕೆಯ ಪತ್ರಕರ್ತೆ  ರಾಜಲಕ್ಷ್ಮೀ ಕೋಡಿಬೆಟ್ಟು ಅವರು ಗಿರೀಶ್‌ ಕಾರ್ನಾಡರ ಸಾಹಿತ್ಯಿಕ ಕೊಡುಗೆಗಳನ್ನು ಸ್ಮರಿಸುತ್ತಾ, ಅವರ ಜೀವನಮೌಲ್ಯಗಳನ್ನು ಹಾಗೂ ಸಂದೇಶಗಳನ್ನು ಪ್ರತಿಯೊಬ್ಬ ವಿದ್ಯಾರ್ಥಿಯು ಅರಿಯುವ ಮೂಲಕ ಸಾಹಿತ್ಯ ಲೋಕಕ್ಕೆ ತಮ್ಮದೇ ಆದ ಕೊಡುಗೆಗಳನ್ನು ನೀಡಲು ಮುಂದಾಗಬೇಕು ಎಂದು ಪ್ರೋತ್ಸಾಹಿಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಂ ವೆನಿಸ್ಸಾ ಎ.ಸಿ ಅವರು ಕವಿಗಳ ಸಾಹಿತ್ಯ ಕೊಡುಗೆಗಳನ್ನು ಹಾಗೂ ಸಾಧನೆಗಳನ್ನು ತಿಳಿಸಿ, ವಿದ್ಯಾರ್ಥಿಗಳಿಗೆ ಸ್ಫೂರ್ತಿದಾಯಕ ವಿಚಾರಗಳನ್ನು ತಿಳಿಸುವ ಮೂಲಕ ಸಾಹಿತ್ಯಿಕ ಬರವಣಿಗೆಯಲ್ಲಿ ಪ್ರತಿಯೋರ್ವರೂ ತೊಡಗಬೇಕು ಎಂದು ಉತ್ತೇಜಿಸಿದರು. 


ಕನ್ನಡ ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರಾದ ಡಾ. ಬಸ್ತಿಯಂ ಪಾಯ್ಸ್‌ ಅವರು ಸ್ವಾಗತಿಸಿದರು. ಕನ್ನಡ ಸಹಾಯಕ ಪ್ರಾಧ್ಯಾಪಕರಾದ  ನಿಶ್ಮಿತಾ ಕೆ  ಧನ್ಯವಾದ ಸಮರ್ಪಿಸಿದರು. ದ್ವಿತೀಯ ಬಿ.ಸಿ.ಎ ವಿದ್ಯಾರ್ಥಿನಿ ಸುಶ್ಮಿತಾ ಕಾರ್ಯಕ್ರಮವನ್ನು ನಿರೂಪಿಸಿದರು.


 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top