ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ

Upayuktha
0

ಆರ್ಥಿಕ ಬೆಳವಣಿಗೆಗೆ ವಾಣಿಜ್ಯ ವಿದ್ಯಾರ್ಥಿಗಳ ಕೊಡುಗೆ ಅಪಾರ :  ಸಿ.ಎ.ಅತೀತ ಬ್ರಹ್ಮ



ಪುತ್ತೂರು : ಬ್ಯಾಂಕಿಂಗ್, ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದಂತೆ ದೇಶದ ಪ್ರಮುಖ ಹುದ್ದೆಗಳಲ್ಲಿ ಸಿ.ಎ ಕೂಡ ಒಂದಾಗಿದೆ. ಉತ್ತಮವಾದ ವೇತನ ದೊರೆಯುವ ಹುದ್ದೆಯೂ ಹೌದು. ಯಾವುದೇ ಒಂದು ದೇಶ ಸಮೃದ್ಧವಾಗಿ ಯಾವುದೇ ಸಮಸ್ಯೆಗಳಿಲ್ಲದೆ ಮುಂದುವರಿಯಬೇಕಾದರೆ ಹಣಕಾಸು ಬಹಳ ಮುಖ್ಯ ಎಂದು ಲೆಕ್ಕಪತ್ರ ಪರಿಶೋಧಕ (ಸಿ.ಎ.) ಅತೀತ ಬ್ರಹ್ಮ ಹೇಳಿದರು.


ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ವಾಣಿಜ್ಯ ಶಾಸ್ತç ವಿಭಾಗದ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ‘ಪ್ರೇರಣಾ’ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಶುಕ್ರವಾರ ಮಾತನಾಡಿದರು. 


ಪಿಯು ಹಂತದಲ್ಲಿ ವಿದ್ಯಾರ್ಥಿಗಳು ಓದುವ ವಿಜ್ಞಾನ, ಕಲೆ ಹಾಗೂ ವಾಣಿಜ್ಯ ವಿಭಾಗ ಎಂಬ ಮೂರು ವಿಭಾಗಗಳಲ್ಲಿ ಎಲ್ಲವೂ ಪ್ರಯೋಜನಕಾರಿಯಾದವುಗಳೇ ಆಗಿವೆ. ಅದರಲ್ಲೂ ವಿದ್ಯಾರ್ಥಿಗಳು ವಾಣಿಜ್ಯ ವಿಭಾಗವನ್ನು ಆಯ್ಕೆ ಮಾಡಿದಲ್ಲಿ ರಾಷ್ಟ್ರಮಟ್ಟದಲ್ಲೇ ಸಾಕಷ್ಟು ಅವಕಾಶಗಳಿವೆ. ಬಹಳ ವರ್ಷಗಳಿಂದಲೂ ಈ ದೇಶದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ದೇಶದ ಆರ್ಥಿಕ ಬೆಳವಣಿಗೆಗೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ತಿಳಿಸಿದರು. 


ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಸರಿಯಾದ ಅಧ್ಯಯನ ನಡೆಸುವುದು ಮುಖ್ಯ. ವಾಣಿಜ್ಯ ವಿಭಾಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಸಿ.ಎ.ಯ ಹೊರತಾಗಿಯೂ ವಿಫುಲ ಅವಕಾಶಗಳಿವೆ. ಅಕೌಟೆಂಟ್, ಆಡಿಟರ್, ಇಂಟರ್ನಲ್ ಆಡಿಟರ್, ಫೈನಾನ್ಸ್ ರಿಪೋರ್ಟರ್, ಕನ್ಸಲ್ಟೆಂಟ್ ಇತ್ಯಾದಿ ಸಾಧ್ಯತೆಗಳಿವೆ ಎಂದರು. ವೇದಿಕೆಯಲ್ಲಿ ಸಂಸ್ಥೆಯ ಪ್ರಾಂಶುಪಾಲ ಸತ್ಯಜಿತ್ ಉಪಾಧ್ಯಾಯ, ವಾಣಿಜ್ಯ ವಿಭಾಗ ಮುಖ್ಯಸ್ಥೆ ಅಕ್ಷತಾ ಉಪಸ್ಥಿತರಿದ್ದರು. ವಿದ್ಯಾರ್ಥಿನಿರಾದ ವಿಭಾ ಕೆ ಎಸ್ ಬಳಗದವರು ಪ್ರಾರ್ಥಿಸಿ, ಮಂದಿರಾ ಕಜೆ ಸ್ವಾಗತಿಸಿದರು. ಅನಘಾ ವಿ ಕಾರ್ಯಕ್ರಮ ನಿರೂಪಿಸಿ, ಸಮನ್ವಿತಾ ಕೆ ಎ ವಂದಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter


إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top