ಉಡುಪಿ: ಕೇಂದ್ರ ವಿತ್ತ ಸಚಿವೆ ಹಾಗೂ ಕ್ಯಾಬಿನೆಟ್ ಮಂತ್ರಿ ನಿರ್ಮಲಾ ಸೀತಾರಾಮನ್ ಅವರು ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲ ಮಂತ್ರಾಕ್ಷತೆ ಪಡೆದುಕೊಂಡರು. ಹಾಗೂ ಕೃಷ್ಣ ಮಠದಲ್ಲಿ ದೇವರ ನೈವೇದ್ಯಕ್ಕಾಗಿ ಹೊಸದಾಗಿ ನಿರ್ಮಿಸಿದ ಅಡುಗೆ ಕೋಣೆ(ಪಾಯದ ಕೋಣೆ)ಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶಿರೂರು ಮಠದ ದಿವಾನರಾದ ಉದಯ ಕುಮಾರ್ ಸರಳತ್ತಾಯ ಹಾಗೂ ಪಾರುಪತ್ಯೆಗಾರರಾದ ಶ್ರೀಶ ಭಟ್ ಕಡೇಕಾರು ಹಾಗೂ ಉಡುಪಿ ಶಾಸಕರಾದ ಯಶಪಾಲ್ ಸುವರ್ಣ ಹಾಗೂ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಮಧುಕರ್ ಮುದ್ರಾಡಿ ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


